ಹನೂರು : ಕಾಡಾನೆ ದಾಳಿಗೆ ಹಲವಾರು ವರ್ಷಗಳಿಂದ ಪೋಷಣೆ ಮಾಡಿದ್ದ ತೆಂಗು, ಬಾಳೆ, ಮಾವು, ಅಡಿಕೆ ಬೆಳೆ ನಾಶವಾಗಿ ರೈತನಿಗೆ ಲಕ್ಷಾಂತರ ರೂಪಾಯಿ ನಷ್ಟವಾಗಿರುವ ಘಟನೆ ಪೊನ್ನಾಚಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಸ್ತೂರು ಗ್ರಾಮದಲ್ಲಿ ಜರುಗಿದೆ.
ಅಸ್ತೂರು ಗ್ರಾಮದ ಕೋಟೆ ಬಸಪ್ಪ ಎಂಬವರು ತಮ್ಮ ಜಮೀನಿನಲ್ಲಿ ಕಷ್ಟಪಟ್ಟು ಸಾಲ ಮಾಡಿ ಮಾವು ತೆಂಗು ಅಡಿಕೆ ಬಾಳೆ ಬೆಳೆಯನ್ನು ಬೆಳೆಸಿದ್ದರು. ಹಿರಿಯ ವಯಸ್ಸಿನಲ್ಲಿಯೂ ಮಾದರಿ ರೈತರಾಗಿ ಕಷ್ಟಪಟ್ಟು ಬೆಳೆದ ಬೆಳೆಯನ್ನು ಅರಣ್ಯ ಇಲಾಖೆ ಅಧಿಕಾರಿಗಳ ನಿರ್ಲಕ್ಷದಿಂದ ಕಾಡಾನೆಗಳು ದಾಳಿ ನಡೆಸಿ ನಾಶಪಡಿಸಿವೆ. ಇದರಿಂದ ಕೈಗೆ ಬಂದ ತುತ್ತು ಬಾಯಿಗೆ ಬಾರದಂತಾಗಿದ್ದು ರೈತನಿಗೆ ಲಕ್ಷಾಂತರ ರೂಪಾಯಿ ನಷ್ಟವಾಗಿದೆ.
ವ್ಯವಸಾಯವನ್ನೇ ನಂಬಿ ಜೀವನ ನಡೆಸುತ್ತಿದ್ದ ಕೋಟೆಬಸಪ್ಪ ಅವರು ಬೆಳೆ ನಾಶದಿಂದ ಸಂಕಷ್ಟಕ್ಕೀಡಾಗಿದ್ದಾರೆ.
ಸೂಕ್ತ ಪರಿಹಾರಕ್ಕೆ ಆಗ್ರಹ
ಕಾಡಾನೆಗಳ ದಾಳಿಯಿಂದ ಬಾಳೆ ಮಾವು ತೆಂಗು ಅಡಿಕೆ ಮರಗಳು ಸಂಪೂರ್ಣ ನಾಶವಾಗಿರುವುದರಿಂದ ಲಕ್ಷಾಂತರ ರೂಪಾಯಿ ನಷ್ಟವಾಗಿದೆ ಸಂಬಂಧಪಟ್ಟ ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳ ಮಹಜರ್ ನಡೆಸಿ ಅತಿ ಶೀಘ್ರದಲ್ಲಿ ನೊಂದ ರೈತನಿಗೆ ಸೂಕ್ತ ಪರಿಹಾರ ನೀಡುವಂತೆ ರೈತ ಮುಖಂಡರು ಮನವಿ ಮಾಡಿದ್ದಾರೆ.
ಈಗಾಗಲೇ ಹಲವು ತಿಂಗಳಿನಿಂದ ಚಿರತೆ ನಿರಂತರವಾಗಿ ದಾಳಿ ಮಾಡುತ್ತಿರುವುದರಿಂದ ರೈತರು ಸಾಕಿರುವ ಸಾಕು ಪ್ರಾಣಿಗಳನ್ನು ಬಲಿ ತೆಗೆದುಕೊಂಡಿದೆ.
ಕಾಡು ಪ್ರಾಣಿಗಳ ಹಾವಳಿ ನಿಯಂತ್ರಣ ಯಾವಾಗ?
ಹಲವಾರು ದಿನಗಳಿಂದ ಕಾಡು ಪ್ರಾಣಿಗಳ ಹಾವಳಿ ಮಿತಿಮೀರಿದೆ ಕಾಡುಪ್ರಾಣಿಗಳ ಹಾವಳಿಗೆ ಸೂಕ್ತ ಕ್ರಮ ವಹಿಸುವಂತೆ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಹಲವು ಬಾರಿ ಮನವಿ ಸಲ್ಲಿಸಿದರು ಯಾವುದೇ ಪ್ರಯೋಜನವಾಗಿಲ್ಲ, ಮುಂದಿನ ದಿನಗಳಲ್ಲಿ ಮರುಕಳಿಸಿದರೆ ರೈತ ಸಂಘಟನೆಗಳು ಹಾಗೂ ಸ್ಥಳೀಯ ಕನ್ನಡ ಪರ ಸಂಘಟನೆಗಳು ರೈತರಿಗೆ ಬೆಂಬಲವಾಗಿ ನಿಂತು ಬೃಹತ್ ಹೋರಾಟವನ್ನು ಹಮ್ಮಿಕೊಳ್ಳಬೇಕಾಗುತ್ತದೆ ಎಂದು ನಮ್ಮ ಕನ್ನಡಿಗರ ವಿಜಯ ಸೇನೆಯ ರಾಜ್ಯ ಸಂಘಟನಾ ಕಾರ್ಯದರ್ಶಿ ಪೊನ್ನಾಚಿ ಸ್ನೇಹಜೀವಿ ರಾಜು ಎಚ್ಚರಿಕೆ ನೀಡಿದ್ದಾರೆ.
ಮೈಸೂರಿನ ಪ್ರಮುಖ ಜೀವವೈವಿಧ್ಯ ತಾಣ ಕುಕ್ಕರಹಳ್ಳಿ ಕೆರೆಗೆ ಪ್ರತಿದಿನ ನೂರಾರು ಸಂಖ್ಯೆಯಲ್ಲಿ ವಾಯುವಿಹಾರಿಗಳು, ಪ್ರವಾಸಿಗರು ಮತ್ತು ಸ್ಥಳೀಯರು ಭೇಟಿ ನೀಡುತ್ತಾರೆ.…
ಬೆಂಗಳೂರಿನ ಯಶವಂತಪುರ ಎಪಿಎಂಸಿ ಮಾರುಕಟ್ಟೆಗೆ ದಿಢೀರ್ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿಗಳ ಬಗ್ಗೆ ಪರಿಶೀಲಿಸುವ ವೇಳೆ ಅಪ್ರಾಪ್ತ ಮಕ್ಕಳಿಂದ ಕೆಲಸ…
ಮುಂಗಾರು ಬೆಳೆ ಸಮೀಕ್ಷೆಗೆ ಮೊಬೈಲ್ ಆಪ್ ಕಡ್ಡಾಯಗೊಳಿಸಿರುವುದು ತಾಂತ್ರಿಕವಾಗಿ ಉತ್ತಮ ಹೆಜ್ಜೆಯಾದರೂ, ವಾಸ್ತವದಲ್ಲಿ ಇದು ರೈತರಿಗೆ ಕಂಟಕವಾಗುತ್ತಿದೆ. ರಾಜ್ಯದಲ್ಲಿ ಶೇ.೮೦ಕ್ಕೂ…
ಡಾ. ಕೆ. ಪಿ. ಸಿದ್ಧಲಿಂಗಸ್ವಾಮಿ, ಸಂಶೋಧಕರು, ಸಿಎಸ್‌ಎಸ್‌ಐ, ಮಂಗಳೂರು ವಿಶ್ವವಿದ್ಯಾನಿಲಯ ಸೆಪ್ಟೆಂಬರ್ ೧೦ ವಿಶ್ವ ಆತ್ಮಹತ್ಯೆ ತಡೆ ದಿನ. ಇದು…
ಎಸ್.ಎಸ್.ಭಟ್ ಕೃಷ್ಣಾಪುರ-ದೊಡ್ಡಹುಂಡಿ ಗ್ರಾಮಗಳ ನಡುವೆ ವಿವಾದ ನಂಜನಗೂಡು: ಕೆರೆ ನೀರಿನ ವಿಚಾರವಾಗಿ ನಂಜನಗೂಡು ತಾಲ್ಲೂಕಿನ ಕೃಷ್ಣಾಪುರ ಹಾಗೂ ಗುಂಡ್ಲುಪೇಟೆ ತಾಲ್ಲೂಕಿನ…
ಹೇಮಂತ್‌ಕುಮಾರ್ ಎಚ್ಚರ ತಪ್ಪಿದರೆ ಬಿದ್ದು ಕೈಕಾಲು ಮುರಿದುಕೊಳ್ಳುವುದು ಖಚಿತ ಮಂಡ್ಯ: ನಗರದ ಜಯಚಾಮರಾಜ ವೃತ್ತ(ಸಂಜಯ ಸರ್ಕಲ್)ದಿಂದ ಹೊಳಲು ವೃತ್ತ, ಪೇಟೆ…