ಹನೂರು : ಮಲೆ ಮಹದೇಶ್ವರ ವನ್ಯಜೀವಿ ವಿಭಾಗದ ರಾಮಪುರ ವನ್ಯಜೀವಿ ವಲಯದ ಕೌದಳ್ಳಿ ಶಾಖೆಯ ಕುರಟ್ಟಿ ಹೊಸೂರು ಸಮೀಪದ ದೊಡ್ಡಬಾಗೆಮರದ ಅರಣ್ಯ ಪ್ರದೇಶದಲ್ಲಿ ಹೆಣ್ಣಾನೆಯ ಮೃತ ದೇಹ ಪತ್ತೆಯಾಗಿದೆ.
ರಾಮಪುರ ವನ್ಯಜೀವಿ ವಲಯದ ಕೌದಳ್ಳಿ ಶಾಖೆಯ ಕುರಟ್ಟಿ ಹೊಸೂರು ಗಸ್ತಿನ ಸಿಪಿಟಿ ನಂಬರ್ 47ರ ದೊಡ್ಡಬಾಗೆಮರದ ಅರಣ್ಯ ಪ್ರದೇಶದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿಗಳು ಗಸ್ತು ನಡೆಸುತ್ತಿದ್ದಾಗ ಆನೆ ಮೃತಪಟ್ಟಿರುವುದು ತಿಳಿದು ಬಂದಿದೆ. ತಕ್ಷಣ ಎಸಿಎಫ್ ಉಮಾಪತಿ ನೇತೃತ್ವದಲ್ಲಿ ಅರಣ್ಯ ಇಲಾಖೆಯ ಸಿಬ್ಬಂದಿಗಳು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಇದನ್ನೂ ಓದಿ: ಶ್ರೀರಂಗಪಟ್ಟಣ ದಸರಾ ಉದ್ಘಾಟಿಸಲಿರುವ ನಿರ್ದೇಶಕ ನಾಗಭರಣ : 25 ರಂದು ಉದ್ಘಾಟನೆ
ಮೃತ ಹೆಣ್ಣಾನೆಗೆ ಸುಮಾರು 10 ರಿಂದ 12 ವರ್ಷ ವಯಸ್ಸಾಗಿದೆ ಎಂದು ಅಂದಾಜಿಸಲಾಗಿದೆ. ಮೇಲ್ನೋಟಕ್ಕೆ ಹೆಣ್ಣಾನೆಯೂ ಸ್ವಾಭಾವಿಕವಾಗಿ ಮೃತಪಟ್ಟಿರಬಹುದು ಎಂದು ತಿಳಿದುಬಂದಿದೆ.
ರಾಮಪುರ ವಲಯ ಅರಣ್ಯ ಅಧಿಕಾರಿಗಳು ಮಲೆ ಮಹದೇಶ್ವರ ವನ್ಯಜೀವಿಧಾಮದ ಡಿಸಿಎಫ್ ಭಾಸ್ಕರ್ ಅವರ ಮಾರ್ಗದರ್ಶನದಲ್ಲಿ ಇಲಾಖೆಯ ನಿಯಮದಂತೆ ಆನೆಯ ಮರಣೋತ್ತರ ಪರೀಕ್ಷೆ ನಡೆಸಿದ್ದಾರೆ. ವರದಿ ಬಂದ ನಂತರ ಆನೆಯ ಸಾವಿಗೆ ನಿಖರ ಮಾಹಿತಿ ತಿಳಿಯಲಿದೆ.
ಉಡುಪಿ: ಆಂಧ್ರಪ್ರದೇಶದ ಡಿಸಿಎಂ ಪವನ್ ಕಲ್ಯಾಣ್ ಉಡುಪಿಗೆ ಆಗಮಿಸಿದ್ದು, ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು. ಇಂದು…
ಹಾಸನ: ಕಾಫಿ ಬೆಳೆಗೆ ಉತ್ತಮ ಬೆಲೆ ಬಂದಿರುವ ಪರಿಣಾಮ ಮಲೆನಾಡು ಭಾಗದಲ್ಲಿ ಕಾಫಿ ಕಳವು ಪ್ರಕರಣ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ.…
ಮುಂಬೈ: ಭಾರತ ಮಹಿಳಾ ಕ್ರಿಕೆಟ್ ತಂಡದ ಉಪನಾಯಕಿ ಸ್ಮೃತಿ ಮಂದಾನ ಹಾಗೂ ಸಂಗೀತ ಸಂಯೋಜಕ ಪಲಾಶ್ ಮುಚ್ಚಲ್ ಮದುವೆ ಮುಂದೂಡಿಕೆಯಾಗಿತ್ತು.…
ಗುಂಡ್ಲುಪೇಟೆ: ಬಂಡೀಪುರ ರಾಜ್ಯದಲ್ಲೇ ಅತಿ ಹೆಚ್ಚು ಹುಲಿ, ಚಿರತೆ ಹಾಗೂ ಆನೆಗಳಿರುವ ತಾಣ. ಈ ಅರಣ್ಯದಲ್ಲಿ ದೇಶದಲ್ಲೇ ಮೊದಲ ಟ್ರ್ಯಾಕರ್…
ಬೆಳಗಾವಿ: ಬೆಳಗಾವಿಯಲ್ಲಿ ನಾಳೆಯಿಂದ ವಿಧಾನಮಂಡಲ ಚಳಿಗಾಲದ ಅಧಿವೇಶನ ಆರಂಭವಾಗಲಿದ್ದು, ಈ ಹಿನ್ನೆಲೆಯಲ್ಲಿ ನಿಗದಿಯಾಗಿದ್ದ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ಮುಂದೂಡಿಕೆ…
ಪಣಜಿ: ಗೋವಾದ ನೈಟ್‌ಕ್ಲಬ್‌ನಲ್ಲಿ ಸಂಭವಿಸಿದ ಬೆಂಕಿ ದುರಂತದಲ್ಲಿ 25 ಜನರು ಸಾವನ್ನಪ್ಪಿರುವ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ತನಿಖೆಗೆ ಆದೇಶ…