ಹನೂರು: ತಾಲೂಕಿನ ಮಲೆಮಹದೇಶ್ವರ ವನ್ಯಧಾಮ ವ್ಯಾಪ್ತಿಯ ರಾಮಾಪುರ ದಿನ್ನಳ್ಳಿ ಮಾರ್ಗ ಮದ್ಯೆ ಜಿಂಕೆ ಬೇಟೆಯಾಡಿದ ಓರ್ವ ಆರೋಪಿಯನ್ನು ಬಂಧಿಸುವಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ. ಪ್ರಕರಣದಲ್ಲಿ ಭಾಗಿಯಾಗಿದ್ದ ಮತ್ತಿಬ್ಬರು ಆರೋಪಿಗಳು ತಲೆಮರೆಸಿಕೊಂಡಿದ್ದಾರೆ.
ಹನೂರು ತಾಲೂಕಿನ ರಾಮಾಪುರ ಗ್ರಾಮದ ಸುರೇಶ್ (35) ಬಂಧಿತ ಆರೋಪಿಯಾಗಿದ್ದಾನೆ.
ಘಟನೆ ವಿವರ: ಮಲೆಮಹದೇಶ್ವರ ವನ್ಯಧಾಮದ ಪಚ್ಚೆದೊಡ್ಡಿ ಗಸ್ತಿನ ದಿನ್ನಳ್ಳಿ- ರಾಮಾಪುರ ಮಾರ್ಗ ಜಿಂಕೆಯೊಂದನ್ನು ಬೇಟೆಯಾಡಿ ಸಾಗಿಸುತ್ತಿರುವ ಖಚಿತ ಮಾಹಿತಿಯ
ಮೇರೆಗೆ ಮಲೆ ಮಹದೇಶ್ವರ ವನ್ಯಜೀವಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿಗಳಾದ ಚಕ್ರಪಾಣಿ, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಗಳಾದ ಸ್ವಪ್ನಿಲ್ ಮನೋಹರ್ ಅಹಿರೇ, ಪರೀಕ್ಷಾರ್ಥ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಉಮಾಪತಿ, ಹನೂರು ಬಪ್ಪರ್ ವಲಯದ ಆರ್ ಎಫ್ ಒ ಗಳಾದ ಪ್ರವೀಣ್ ಮಾರ್ಗದರ್ಶನಲ್ಲಿ ಡಿ ಆರ್ ಎಫ್ ನಂದೀಶ್ ಹಾಗೂ ಅರಣ್ಯ ಇಲಾಖೆಯ ಸಿಬ್ಬಂದಿಗಳು ದಾಳಿ ನೆಡೆಸಿ ಸುರೇಶ್ ನನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಮತ್ತಿಬ್ಬರು ಆರೋಪಿಗಳಾದ ಗೋವಿಂದ,ಮೂರ್ತಿ ಎಂಬುವರು ಪರಾರಿಯಾಗಿ ತಲೆಮರೆಸಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.
ಈ ವೇಳೆ ಆರೋಪಿ ಸುರೇಶ್, ಕೃತ್ಯಕ್ಕೆ ಬಳಸಿದ್ದ ಆಟೋ , ಜಿಂಕೆಯ ಮೃತ ದೇಹ ವಶಕ್ಕೆ ಪಡೆದು ಪ್ರಕರಣ ದಾಖಲಿಸಲಾಗಿದೆ.
ಈ ಕಾರ್ಯಚರಣೆಯಲ್ಲಿ ಡಿಆರ್ ಎಫ್ ಒ ನಂದೀಶ್, ಗಸ್ತು ಅರಣ್ಯ ಪಾಲಕರಾದ ಭೀಮಶಿ ಮುನ್ನಾಳ, ಅಶೋಕ್ ಎಸ್ ಕೂಗುವರ್, ಸುರೇಶ್ ಪಿ ಹಾಗೂ ಸಿಬ್ಬಂದಿ ವರ್ಗದವರು ಪಾಲ್ಗೊಂಡಿದ್ದರು.
ಮಹಾದೇಶ್ ಎಂ ಗೌಡ ಹನೂರು: ತಮ್ಮ ಊರಿನಿಂದ ದೂರದಲ್ಲಿರುವ ಶಾಲಾ ಕಾಲೇಜುಗಳಿಗೆ ಹೋಗುವುದಕ್ಕೆ ಸಮರ್ಪಕವಾಗಿ ಬಸ್ ಸೌಲಭ್ಯ ಕಲ್ಪಿಸಲು ಕೋರಿ…
ಬಿ.ಎಸ್.ವಿನಯ್ ಮೊನ್ನೆ ಯಳಂದೂರಿನ ಬೀದಿಯಲ್ಲಿ ಸಾಗುತ್ತಿದ್ದಾಗ ಬಳೆಮಂಟಪದ ಮುಂದೆ ಪರಿಚಿತ ಹಿರಿಯರೊಬ್ಬರು ಎದುರಾದರು. ‘ಯಜಮಾನರೇ, ಕಾರ್ಯಕ್ರಮಕ್ಕೆ ಯಾಕೆ ಬರಲಿಲ್ಲ?’ ಕೇಳಿದರೆ…
ವಿನುತ ಕೋರಮಂಗಲ ನಮ್ಮ ಹಟ್ಟಿಯಿಂದ ನಾಲ್ಕೈದು ಕಿ.ಮೀ. ದೂರವಿರುವ ನಮ್ಮೂರಿನ ಕೆರೆಯ ಅಂಗಳಕ್ಕೆ ನಾವೇನು ನಡೆದುಕೊಂಡು ಹೋಗುತ್ತಿರಲಿಲ್ಲ. ಗಂಗೆ ಎಂದು…
ಅಕ್ಷತಾ ಖಾಲಿ ಹಾಳೆಯ ಒಂದೇ ಮಗ್ಗುಲಿನಲ್ಲಿ ಚಿತ್ತಿಲ್ಲದಂತೆ ಬರೆದು, ಪದ ಮಿತಿಯನ್ನು ಬೆರಳು ಲೆಕ್ಕದಲ್ಲಿ ಎಣಿಸಿ, ಪತ್ರಿಕೆಯ ವಿಳಾಸಕ್ಕೆ ಕಳುಹಿಸಿದ…
ಹನೂರು: ತಾಲೂಕಿನ ಲೊಕ್ಕನಹಳ್ಳಿ ಹೋಬಳಿ ವ್ಯಾಪ್ತಿಯ ಮಲೆ ಮಹದೇಶ್ವರ ಅರಣ್ಯ ಪ್ರದೇಶ ವ್ಯಾಪ್ತಿಯ ಬಳಗುಡ್ಡ ಬಿಟ್ ವ್ಯಾಪ್ತಿಯಲ್ಲಿ ಏಕಕಾಲಕ್ಕೆ ಎರಡು…