ಚಾಮರಾಜನಗರ

ಹನೂರು : ಜಿಂಕೆ ಭೇಟೆ ; ಓರ್ವ ಬಂಧನ

ಹನೂರು: ತಾಲೂಕಿನ ಮಲೆಮಹದೇಶ್ವರ ವನ್ಯಧಾಮ ವ್ಯಾಪ್ತಿಯ ರಾಮಾಪುರ ದಿನ್ನಳ್ಳಿ ಮಾರ್ಗ ಮದ್ಯೆ ಜಿಂಕೆ ಬೇಟೆಯಾಡಿದ ಓರ್ವ ಆರೋಪಿಯನ್ನು ಬಂಧಿಸುವಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ. ಪ್ರಕರಣದಲ್ಲಿ ಭಾಗಿಯಾಗಿದ್ದ ಮತ್ತಿಬ್ಬರು ಆರೋಪಿಗಳು ತಲೆಮರೆಸಿಕೊಂಡಿದ್ದಾರೆ.

ಹನೂರು ತಾಲೂಕಿನ ರಾಮಾಪುರ ಗ್ರಾಮದ ಸುರೇಶ್ (35) ಬಂಧಿತ ಆರೋಪಿಯಾಗಿದ್ದಾನೆ.

ಘಟನೆ ವಿವರ: ಮಲೆಮಹದೇಶ್ವರ ವನ್ಯಧಾಮದ ಪಚ್ಚೆದೊಡ್ಡಿ ಗಸ್ತಿನ‌ ದಿನ್ನಳ್ಳಿ‌- ರಾಮಾಪುರ ಮಾರ್ಗ ಜಿಂಕೆಯೊಂದನ್ನು ಬೇಟೆಯಾಡಿ ಸಾಗಿಸುತ್ತಿರುವ ಖಚಿತ ಮಾಹಿತಿಯ
ಮೇರೆಗೆ ಮಲೆ ಮಹದೇಶ್ವರ ವನ್ಯಜೀವಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿಗಳಾದ ಚಕ್ರಪಾಣಿ, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಗಳಾದ ಸ್ವಪ್ನಿಲ್ ಮನೋಹರ್ ಅಹಿರೇ, ಪರೀಕ್ಷಾರ್ಥ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಉಮಾಪತಿ, ಹನೂರು ಬಪ್ಪರ್ ವಲಯದ ಆರ್ ಎಫ್ ಒ ಗಳಾದ ಪ್ರವೀಣ್ ಮಾರ್ಗದರ್ಶನಲ್ಲಿ ಡಿ ಆರ್ ಎಫ್ ನಂದೀಶ್ ಹಾಗೂ ಅರಣ್ಯ ಇಲಾಖೆಯ ಸಿಬ್ಬಂದಿಗಳು ದಾಳಿ‌ ನೆಡೆಸಿ ಸುರೇಶ್ ನನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಮತ್ತಿಬ್ಬರು ಆರೋಪಿಗಳಾದ ಗೋವಿಂದ,ಮೂರ್ತಿ ಎಂಬುವರು ಪರಾರಿಯಾಗಿ ತಲೆಮರೆಸಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ಈ ವೇಳೆ ಆರೋಪಿ ಸುರೇಶ್, ಕೃತ್ಯಕ್ಕೆ ಬಳಸಿದ್ದ ಆಟೋ , ಜಿಂಕೆಯ ಮೃತ ದೇಹ ವಶಕ್ಕೆ ಪಡೆದು ಪ್ರಕರಣ ದಾಖಲಿಸಲಾಗಿದೆ.

ಈ ಕಾರ್ಯಚರಣೆಯಲ್ಲಿ ಡಿಆರ್ ಎಫ್ ಒ ನಂದೀಶ್, ಗಸ್ತು ಅರಣ್ಯ ಪಾಲಕರಾದ ಭೀಮಶಿ ಮುನ್ನಾಳ, ಅಶೋಕ್ ಎಸ್ ಕೂಗುವರ್, ಸುರೇಶ್ ಪಿ ಹಾಗೂ ಸಿಬ್ಬಂದಿ ವರ್ಗದವರು ಪಾಲ್ಗೊಂಡಿದ್ದರು.

ಆಂದೋಲನ ಡೆಸ್ಕ್

Recent Posts

ದುಬಾರೆ ಆನೆ ಶಿಬಿರದಲ್ಲಿ19 ವರ್ಷದ ಗಂಡಾನೆ ಸಾವು

ಕುಶಾಲನಗರ: ದುಬಾರೆ ಆನೆ ಶಿಬಿರದಲ್ಲಿದ್ದ ಸುಮಾರು 19 ವರ್ಷ ಪ್ರಾಯದ ಗಂಡಾನೆಯೊಂದು ಐದು ತಿಂಗಳಿಗೂ ಹೆಚ್ಚು ಕಾಲ ನಿರಂತರ ಚಿಕಿತ್ಸೆ…

44 mins ago

ಪ್ರೀತಿಗೆ ನಿರಾಕರಣೆ: ಮೈಸೂರಿನಲ್ಲಿ ಬೆಚ್ಚಿಬೀಳಿಸಿದ ಒನ್‌ ಸೈಡ್‌ ಲವ್‌ ಕೃತ್ಯ

ಮೈಸೂರು: ಪ್ರೀತಿಗೆ ನಿರಾಕರಿಸಿದ ಪರಿಣಾಮ ಯುವಕನೋರ್ವ ಯುವತಿಯನ್ನು ತಬ್ಬಿಕೊಂಡು ಪೆಟ್ರೋಲ್‌ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮೈಸೂರಿನ ವಿಜಯನಗರದ ಬಳಿ…

2 hours ago

ಮನ್​​ಮುಲ್​ ಹಾಲಿನ ಪುಡಿ ಕಲಬೆರಕೆ ಪ್ರಕರಣ: ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಅಧ್ಯಕ್ಷ ಶಿವಕುಮಾರ್ ಅರೆಸ್ಟ್​!

ಮಂಡ್ಯ: ಮನ್​​ಮುಲ್​ ಹಾಲಿನ ಪುಡಿ ಕಲಬೆರಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಮನ್ ಮುಲ್ ಅಧ್ಯಕ್ಷ ಶಿವಕುಮಾರ್(ಶಿವಪ್ಪ)…

4 hours ago

ಭಾರೀ ಮಳೆಗೆ ರೈತರ ಬೆಳೆ ನಾಶ: ಲಕ್ಷಾಂತರ ರೂ. ನಷ್ಟ, ಮನೆ ಗೋಡೆ ಕುಸಿತ

ಹನೂರು: ಸೋಮವಾರ ತಡರಾತ್ರಿ ಸುರಿದ ಭಾರಿ ಮಳೆಗೆ ಕ್ಷೇತ್ರದ ಹಲವು ಜಮೀನುಗಳಲ್ಲಿ ಬೆಳೆದಿದ್ದ ಬೆಳೆಗಳು ಸಂಪೂರ್ಣ ಜಲಾವೃತಗೊಂಡು ಲಕ್ಷಾಂತರ ರೂಪಾಯಿ…

4 hours ago

ಸ್ಕೂಲ್ ಬಸ್‌ ಹರಿದು ಒಂದೂವರೆ ವರ್ಷದ ಮಗು ಸಾವು

ಮೈಸೂರು: ಜಿಲ್ಲೆಯ ಹುಣಸೂರು ತಾಲೂಕಿನ ನಂಜಾಪುರ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ರಸ್ತೆ ಬದಿ ನಿಂತಿದ್ದ ಒಂದೂವರೆ ವರ್ಷದ ಪುಟ್ಟ…

5 hours ago

ಓದುಗರ ಪತ್ರ: ‘ಪ್ರತಾಪ’ಕ್ಕೆ ಸವಾಲು ಈ ನೀಲಿ

‘ಪ್ರತಾಪ’ಕ್ಕೆ ಸವಾಲು ಈ ನೀಲಿ ಇದು ನಮ್ಮ ಸೂರು ಆಕಾಶದ ನೀಲಿ ಇದು ನನ್ನವ್ವ ಸುತ್ತಿಕೊಂಡ ಸೀರೆಯ ನೀಲಿ ನನಗೆ…

10 hours ago