ಚಾಮರಾಜನಗರ

ಹನೂರು: ಬಿಆರ್‌ಟಿ ವನ್ಯಜೀವಿ ವ್ಯಾಪ್ತಿಯಲ್ಲಿ ಆನೆ ಸಾವು

ಹನೂರು: ಬಿ ಆರ್ ಟಿ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ಬೈಲೂರು ವನ್ಯಜೀವಿ ವಲಯದ ಪಿ.ಜಿ ಪಾಳ್ಯ ಶಾಖೆ ಮಾವತ್ತೂರು ಎ ಗಸ್ತಿನಲ್ಲಿ ಹೆಣ್ಣಾನೆಯೊಂದು ಮೃತಪಟ್ಟಿರುವ ಘಟನೆ ಜರುಗಿದೆ.

ಕಳೆದ 15 ದಿನಗಳ ಹಿಂದೆ ಬಿ ಆರ್ ಟಿ ಹುಲಿ ಸಂರಕ್ಷಿತ ಪ್ರದೇಶದ ಬೈಲೂರು ವನ್ಯಜೀವಿ ವಲಯದ ಆಳದ ಕೆರೆ ಅರಣ್ಯ ಪ್ರದೇಶದಲ್ಲಿ ಎಂಟು ತಿಂಗಳ ಹಿಂದೆ ಸ್ವಾಭಾವಿಕವಾಗಿ ಮೃತಪಟ್ಟಿದ್ದ ಗಂಡಾನೆಯ ಎರಡು ದಂತಗಳು ಪತ್ತೆಯಾಗಿತ್ತು.

ಇದಾದ ಎರಡೇ ದಿನಕ್ಕೆ ಆಗಸ್ಟ್ 30 ರಂದು ಬೈಲೂರು ವನ್ಯಜೀವಿ ವಲಯ ಪಿಜಿ ಪಾಳ್ಯ ಮಾವತ್ತೂರು ಶಾಖೆ ಬಿ ಗಸ್ತಿನಲ್ಲಿ ಸಿಬ್ಬಂದಿಗಳು ಗಸ್ತಿನಲ್ಲಿದ್ದಾಗ ಸುಮಾರು 60 ರಿಂದ 65 ವಯಸ್ಸಿನ ಹೆಣ್ಣಾನೆ ಮೃತಪಟ್ಟ ಎಂಟು ದಿನಗಳ ನಂತರ ಪತ್ತೇಯಾಗಿತ್ತು.

ಇದೀಗ ಸೆಪ್ಟೆಂಬರ್ 16ರಂದು ಬಿ.ಆರ್ ಟಿ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ಬೈಲೂರು ವನ್ಯಜೀವಿ ವಲಯದ ಪಿಜಿ ಪಾಳ್ಯ ಶಾಖೆ ಮಾವತ್ತೂರು ಎ ಗಸ್ತಿನಲ್ಲಿ ಹೆಣ್ಣಾನೆಯೊಂದು ಮೃತಪಟ್ಟಿರುವುದು ಕಂಡುಬಂದಿದೆ. ಹೆಣ್ಣಾನೆ ಮೃತಪಟ್ಟಿರುವ ವಿಚಾರ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಬಿ ಆರ್ ಟಿ ಉಪ ಅರಣ್ಯ ಸಂರಕ್ಷಣಾಧಿಕಾರಿ ಶ್ರೀಪತಿ, ಎಸಿಎಫ್ ಕೆ ಸುರೇಶ್, ಆರ್ ಎಫ್ ಒ ಪ್ರಮೋದ್ ಹಾಗೂ ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ ನಂತರ ಅರಣ್ಯ ಇಲಾಖೆಯ ಪಶು ವೈದ್ಯಾಧಿಕಾರಿ ಡಾ. ವಾಸಿಂ ಮಿರ್ಜಾ ರವರು ಆನೆಯ ಮರಣೋತ್ತರ ಪರೀಕ್ಷೆ ನಡೆಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

ವನ್ಯ ಜೀವಿ ಪ್ರಿಯರಲ್ಲಿ ಆತಂಕ: ಬಿ ಆರ್ ಟಿ ಹುಲಿ ಸಂರಕ್ಷಿತ ಅರಣ್ಯ ಪ್ರದೇಶ ವ್ಯಾಪ್ತಿಯಲ್ಲಿ ಕಳೆದ 20 ದಿನಗಳ ಅವಧಿಯಲ್ಲಿ ನಾಲ್ಕು ಆನೆಗಳು ಮೃತಪಟ್ಟಿರುವುದು ಬೆಳಕಿಗೆ ಬಂದಿದೆ. ಆನೆಗಳು ಸಾಲುಸಾಲಾಗಿ ಮೃತಪಡುತ್ತಿದ್ದರು ಸಂಬಂಧ ಪಟ್ಟ ಅರಣ್ಯ ಇಲಾಖೆ ಅಧಿಕಾರಿಗಳು ಆನೆಗಳ ಸಾವಿಗೆ ನಿಖರ ಕಾರಣ ಪತ್ತೆ ಹಚ್ಚಬೇಕು ಇಲ್ಲದಿದ್ದರೆ ಇನ್ನಷ್ಟು ಆನೆಗಳು ಸಾಯುವುದರಲ್ಲಿ ಯಾವುದೇ ಅನುಮಾನವಿಲ್ಲ ಈ ನಿಟ್ಟಿನಲ್ಲಿ ಹಿರಿಯ ಅಧಿಕಾರಿಗಳು ಮುನ್ನೆಚ್ಚರಿಕೆ ಕ್ರಮ ತೆಗೆದುಕೊಂಡು ಮುಂದೆ ಆನೆಗಳು ಸಾಯದಂತೆ ಎಚ್ಚರ ವಹಿಸಬೇಕು ಎಂದು ವನ್ಯಜೀವಿ ಪ್ರಿಯರು ಒತ್ತಾಯಿಸಿದ್ದಾರೆ.

ಬೈಲೂರು ವನ್ಯಜೀವಿ ವಲಯದ ಪಿಜಿ ಪಾಳ್ಯ ಮಾವತ್ತೂರು ಎ ಮತ್ತು ಬಿ ಗಸ್ತಿನಲ್ಲಿ 15 ದಿನಗಳ ಅಂತರದಲ್ಲಿ ಎರಡು ಆನೆಗಳು ಮೃತಪಟ್ಟಿರುವುದು ಹಲವು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ.

ಆಂದೋಲನ ಡೆಸ್ಕ್

Recent Posts

ವಿಶೇಷ ಚೇತನ ಮಕ್ಕಳು ಸಮಾಜಕ್ಕೆ ಶಾಪವಲ್ಲ, ವರ; ದೀಪಕ್‌ ಅಭಿಮತ

' ಗ್ರೇಸ್' ಪೋಷಕರ ದಿನಾಚರಣೆಯಲ್ಲಿ ಮೈಜಿಪಸಂ ಅಧ್ಯಕ್ಷ ಕೆ.ದೀಪಕ್ ಅಭಿಮತ ಮೈಸೂರು : ಹಣ ಆಸ್ತಿಗೆ ಹೆತ್ತವರ ಉಸಿರು ತೆಗೆಯುವ…

1 hour ago

ಸಕ್ಕರೆ ನಗರಿ ಅಂದ ಹೆಚ್ಚಿಸಿದ ದೀಪಾಲಂಕಾರ

ಕನ್ನಡ ಸಾಹಿತ್ಯ ಸಮ್ಮೇಳನ: ಪ್ರಮುಖ ರಸ್ತೆಗಳಿಗೆ ವಿದ್ಯುತ್‌ ದೀಪಾಲಂಕಾರ ಮಂಡ್ಯ:ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20 ರಿಂದ ಮೂರು ದಿನಗಳ ಕಾಲ…

2 hours ago

ಮಂಡ್ಯ ಸಮ್ಮೇಳನ | ನಗರ ದೀಪಾಲಂಕಾರಕ್ಕೆ ಸಚಿವ ಚಲುವರಾಯಸ್ವಾಮಿ ಚಾಲನೆ

ಮಂಡ್ಯ: 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಮಂಡ್ಯ ನಗರದಲ್ಲಿನ ವಿದ್ಯುತ್ ದೀಪಾಲಂಕಾರಕ್ಕೆ ಕೃಷಿ ಸಚಿವರು ಹಾಗೂ…

2 hours ago

ನಕಲಿ ಚಿನ್ನಾಭರಣ ಅಡವಿಟ್ಟು ಬರೋಬ್ಬರಿ 34 ಲಕ್ಷ ರೂ. ವಂಚನೆ..!

ಕೇರಳ ಮೂಲದ ಮಾಸ್ಟರ್ ಮೈಂಡ್ ಸೇರಿದಂತೆ 12 ಆರೋಪಿಗಳ ಬಂಧನ; ಮತ್ತೊಂದು ಮೋಸದ ಜಾಲ ಬಯಲಿಗೆಳೆದ ಕೊಡಗು ಜಿಲ್ಲಾ ಪೊಲೀಸರು…

2 hours ago

ಮುಡಾ ಪ್ರಕರಣ | ಸಿಬಿಐ ತನಿಖೆ ಕೋರಿ ಸಲ್ಲಿಸಿದ್ದ ಅರ್ಜಿ ಜ.15ಕ್ಕೆ ಮುಂದೂಡಿಕೆ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಮುಡಾ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕೆಂದು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್‌ ಜನವರಿ…

2 hours ago

ಸಮ್ಮೇಳನಕ್ಕೆ ಕ್ಷಣಗಣನೆ | ಸಮ್ಮೇಳನ ಸರ್ವಾಧ್ಯಕ್ಷ ಗೊ.ರು ಚನ್ನಬಸಪ್ಪಗೆ ಆತ್ಮೀಯ ಸ್ವಾಗತ

ಮಂಡ್ಯ: ೮೭ ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಕ್ಷಣಗಣನೆ ಆರಂಭವಾಗಿದೆ. ಈ ಹಿನ್ನೆಲೆ ಗುರುವಾರ ಸಂಜೆ ನಗರಕ್ಕೆ…

3 hours ago