ಚಾಮರಾಜನಗರ

ಹನೂರು: ಬಿಆರ್‌ಟಿ ವನ್ಯಜೀವಿ ವ್ಯಾಪ್ತಿಯಲ್ಲಿ ಕಾಡ್ಗಿಚ್ಚು: 80 ಎಕರೆಗೂ ಹೆಚ್ಚು ಅರಣ್ಯ ನಾಶ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು

ಹನೂರು: ತಾಲ್ಲೂಕಿನ ಬಿಆರ್‌ಟಿ ಹುಲಿ ಸಂರಕ್ಷಿತ ಪ್ರದೇಶ ಬೈಲೂರು ವಲಯ ವ್ಯಾಪ್ತಿಯ ಗುಂಡಿಮಾಳ ಹಾಗೂ ನೆಲ್ಲಿಕತ್ರಿ ಅರಣ್ಯ ವ್ಯಾಪ್ತಿಯಲ್ಲಿ 80 ಎಕರೆಗೂ ಹೆಚ್ಚು ಅರಣ್ಯ ಪ್ರದೇಶದಲ್ಲಿ ಕಾಡ್ಗಿಚ್ಚು ಉಂಟಾಗಿ ಬೆಂಕಿಗೆ ಆಹುತಿಯಾಗಿದೆ.

ಹನೂರು ತಾಲ್ಲೂಕಿನ ಬಿಆರ್‌ಟಿ ವನ್ಯಜೀವಿ ವಲಯ ವ್ಯಾಪ್ತಿಯ ನೆಲ್ಲಿಕತ್ರಿ ಅರಣ್ಯ ಪ್ರದೇಶದಲ್ಲಿ ಮಧ್ಯಾಹ್ನ 12 ಗಂಟೆ ವೇಳೆಗೆ ಬೆಂಕಿ ಕಾಣಿಸಿಕೊಂಡಿದೆ ಬಿಸಿಲಿನ ತಾಪಮಾನ ಹೆಚ್ಚಿರುವುದರಿಂದ ಹಾಗೂ ಗಾಳಿ ಹೆಚ್ಚಾಗಿರುವುದರಿಂದ ಏಕಾಏಕಿ ಕಾಡ್ಗಿಚ್ಚು ವ್ಯಾಪಿಸಿ ಸುಮಾರು 30 ಎಕರೆಗೂ ಹೆಚ್ಚು ಅರಣ್ಯ ಪ್ರದೇಶ ಬೆಂಕಿಗೆ ಆಹುತಿಯಾಗಿದೆ ಎಂದು ಅಂದಾಜಿಸಲಾಗಿದೆ.

ಮಧ್ಯಾಹ್ನ 1 ಗಂಟೆಯ ವೇಳೆ ಬೈಲೂರು ವನ್ಯಜೀವಿ ವಲಯ ವ್ಯಾಪ್ತಿಯ ಗುಂಡಿಮಾಳ ಗ್ರಾಮದ ಅರಣ್ಯ ಪ್ರದೇಶದಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡು 50 ಎಕರೆಗೂ ಹೆಚ್ಚು ಅರಣ್ಯ ಪ್ರದೇಶ ಸುಟ್ಟು ಕರಕಲಾಗಿದೆ. ಅರಣ್ಯಕ್ಕೆ ಬೆಂಕಿ ಕಾಣಿಸಿಕೊಂಡಿರುವುದು ವಿಚಾರ ತಿಳಿಯುತ್ತಿದ್ದಂತೆ ಬೈಲೂರು ವನ್ಯಜೀವಿ ವಲಯ ವ್ಯಾಪ್ತಿಯ ಆರ್‌ಎಫ್‌ಒ ಪ್ರಮೋದ್ ಹಾಗೂ ಸಿಬ್ಬಂದಿಗಳು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಅಗ್ನಿಶಾಮಕ ಠಾಣೆಗೆ ಮಾಹಿತಿ ನೀಡಿದ್ದಾರೆ.

ತಕ್ಷಣ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ಠಾಣೆಯ ಸಿಬ್ಬಂದಿ ವರ್ಗದವರು ಹಾಗೂ ಅರಣ್ಯ ಇಲಾಖೆಯ ಸಿಬ್ಬಂದಿಗಳು ಬೆಂಕಿಯನ್ನು ನಂದಿಸಿ, ಕಾಡ್ಗಿಚ್ಚು ಹರಡದಂತೆ ತಡೆಯುವಲ್ಲಿ ಯಶಸ್ವಿಯಾಗಿದ್ದಾರೆ.

ಬೈಲೂರು ವಲಯ ವ್ಯಾಪ್ತಿಯಲ್ಲಿ 15 ಎಕರೆ ಹಾಗೂ ಗುಂಡಿಮಾಳ ಅರಣ್ಯ ಪ್ರದೇಶದಲ್ಲಿ 20 ಎಕರೆಯಷ್ಟು ಕಾಡ್ಗಿಚ್ಚಿಗೆ ಆಹುತಿಯಾಗಿದೆ. ಅರಣ್ಯ ಇಲಾಖೆ ಸಿಬ್ಬಂದಿ ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿಗಳ ಜಂಟಿ ಕಾರ್ಯಚರಣೆಯಿಂದ ಬೆಂಕಿಯನ್ನು ಹತೋಟಿಗೆ ತರಲಾಗಿದೆ.

 

ಆಂದೋಲನ ಡೆಸ್ಕ್

Recent Posts

ಎಚ್‌.ಡಿ.ಕೋಟೆ: ಗುಜರಿ ಗೋಡೌನ್‌ಗೆ ಬೆಂಕಿ: ಲಕ್ಷಾಂತರ ರೂ ಬೆಲೆಬಾಳುವ ಸಾಮಗ್ರಿ ನಾಶ

ಎಚ್.ಡಿ.ಕೋಟೆ: ತಾಲೂಕಿನ ಹ್ಯಾಂಡ್‌ಪೋಸ್ಟ್ ಜಕ್ಕಳ್ಳಿ ಸಮೀಪವಿರುವ ಜಫ್ರುಲ್ಲಾ ಎಂಬುವರಿಗೆ ಸೇರಿದ ಗುಜರಿ ಗೋಡೌನ್‌ಗೆ ಬೆಂಕಿ ತಗುಲಿ, ಲಕ್ಷಾಂತರ ರೂಪಾಯಿ ವೆಚ್ಚದ…

6 hours ago

ವಂದೇ ಭಾರತ್‌ ರೈಲಿನಲ್ಲಿ ಕೊಟ್ಟ ಮೊಸರಿನಲ್ಲಿ ಹುಳು ಪತ್ತೆ: IRCTCಗೆ 10 ಲಕ್ಷ ರೂ ದಂಡ

ಪಾಟ್ನಾ: ವಂದೇ ಭಾರತ್‌ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಪ್ರಯಾಣಿಕರಿಗೆ ನೀಡಿದ ಮೊಸರಿನಲ್ಲಿ ಹುಳುಗಳು ಪತ್ತೆಯಾದ ಹಿನ್ನೆಲೆಯಲ್ಲಿ ರೈಲ್ವೆ ಇಲಾಖೆ ಐಆರ್‌ಸಿಟಿಸಿಗೆ 10…

6 hours ago

ಪಾಲಿಕೆ ಬಜೆಟ್‌ ಸತ್ವ ಇಲ್ಲದ ಬಜೆಟ್‌: ಮಾಜಿ ಮೇಯರ್‌ ಶಿವಕುಮಾರ್‌ ಆಕ್ರೋಶ

ಮೈಸೂರು: ಜನಸ್ನೇಹಿ ಪಾದಾಚಾರಿ ಮಾರ್ಗಗಳ ಅಭಿವೃದ್ಧಿಗೆ 10 ಕೋಟಿ ರೂ ಮೀಸಲಿಟ್ಟಿರುವ ಪಾಲಿಕೆಯು ಪಾರಂಪರಿಕ ಕಟ್ಟಡಗಳ ಅಭಿವೃದ್ಧಿಗೆ ನಯಾಪೈಸೆ ಅನುದಾನ…

6 hours ago

ಗುಂಡ್ಲುಪೇಟೆ| ಮದ್ದೂರು ವಲಯದಲ್ಲಿ ಮತ್ತೆರಡು ಹುಲಿ ಪ್ರತ್ಯಕ್ಷ

ಗುಂಡ್ಲುಪೇಟೆ: ತಾಲ್ಲೂಕಿನ ಮದ್ದೂರು ವಲಯದಲ್ಲಿ ಮತ್ತೆರಡು ಹುಲಿಗಳು ಪ್ರತ್ಯಕ್ಷವಾಗಿದ್ದು, ಸ್ಥಳೀಯರಲ್ಲಿ ಆತಂಕ ಮನೆಮಾಡಿದೆ. ಹುಲಿಗಳ ಚಲನವಲನದ ದೃಶ್ಯ ಡ್ರೋನ್ ಕ್ಯಾಮೆರಾದಲ್ಲಿ…

7 hours ago

ಬಜೆಟ್‌ ಮೂಲಕ ಜನರನ್ನು ಸಾಲದ ಕೂಪಕ್ಕೆ ತಳ್ಳಿದ ಸರ್ಕಾರ: ಆರ್‌.ಅಶೋಕ್‌ ವಾಗ್ದಾಳಿ

ಬೆಂಗಳೂರು: ಕಾಂಗ್ರೆಸ್‌ ಸರ್ಕಾರ ಬಜೆಟ್‌ ಮೂಲಕ ಜನರನ್ನು ಸಾಲದ ಕೂಪಕ್ಕೆ ತಳ್ಳಿರುವುದನ್ನು ಅಧಿವೇಶನದಲ್ಲಿ ಮನವರಿಕೆ ಮಾಡಿಕೊಟ್ಟಿದ್ದೇವೆ. ಹಾಗೆಯೇ ಅನೇಕ ಸಮಸ್ಯೆಗಳನ್ನು…

7 hours ago

ನಾಳೆ ಎಲ್ಲಾ ರಾಜ್ಯಗಳ ಸಿಎಂ ಜೊತೆಗೆ ಪ್ರಧಾನಿ ಮೋದಿ ಸಭೆ

ನವದೆಹಲಿ: ಪಶ್ಚಿಮ ಏಷ್ಯಾ ಸಂಘರ್ಷದ ಕುರಿತು ಪ್ರಧಾನಿ ನರೇಂದ್ರ ಮೋದಿ ನಾಳೆ ಸಂಜೆ ಎಲ್ಲಾ ರಾಜ್ಯಗಳ ಸಿಎಂಗಳ ಜೊತೆ ವಿಡಿಯೋ…

7 hours ago