ಚಾಮರಾಜನಗರ

ಹನೂರು| ಎಚ್‌ಸಿಎಂ ಹುಟ್ಟುಹಬ್ಬದ ಪ್ರಯುಕ್ತ ಉಚಿತ ಆರೋಗ್ಯ ತಪಾಸಣಾ ಶಿಬಿರ

ಹನೂರು: ರಾಜ್ಯದ ಹಿಂದುಳಿದ ವರ್ಗದವರು, ಅಸಹಾಯಕರ ಪರ ಸದಾ ಕಾಳಜಿ ಹೊಂದಿರುವ ಸಮಾಜ ಕಲ್ಯಾಣ ಇಲಾಖೆ ಸಚಿವ ಎಚ್.ಸಿ.ಮಹದೇವಪ್ಪ ಅವರ ಹುಟ್ಟುಹಬ್ಬದ ಪ್ರಯುಕ್ತ ಉಚಿತ ಆರೋಗ್ಯ ತಪಾಸಣಾ ಶಿಬಿರ ಆಯೋಜನೆ ಮಾಡಿರುವುದು ಸಂತಸದ ವಿಚಾರ ಎಂದು ಮಾಜಿ ಶಾಸಕ ಆರ್.ನರೇಂದ್ರ ತಿಳಿಸಿದರು.

ಹನೂರು ಪಟ್ಟಣದ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಎಸ್‌.ಸಿ.ಮಹದೇವಪ್ಪ ಅಭಿಮಾನಿ ಬಳಗ ಸಮೃದ್ಧಿ ಫೌಂಡೇಶನ್, ಚಾರಿಟೇಬಲ್ ಟ್ರಸ್ಟ್ ಬೆಂಗಳೂರು, ಈಸ್ಟ್ ಪಾಯಿಂಟ್ ಮೆಡಿಕಲ್ ಕಾಲೇಜು ಆಸ್ಪತ್ರೆ ಬೆಂಗಳೂರು ಇವರ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಉಚಿತ ಆರೋಗ್ಯ ತಪಾಸಣಾ ಶಿಬಿರ ಕಾರ್ಯಕ್ರಮ ಉದ್ಘಾಟನೆ ಮಾಡಿ ಅವರು ಮಾತನಾಡಿದರು.

ಪ್ರತಿಯೊಬ್ಬರು ಇಂದಿನ ದಿನಗಳಲ್ಲಿ ಆರೋಗ್ಯದ ಕಡೆ ಹೆಚ್ಚಿನ ಗಮನಹರಿಸಬೇಕು. ಆರೋಗ್ಯವಂತರಾಗಿದ್ದಾರೆ ಜೀವನದಲ್ಲಿ ಏನು ಬೇಕಾದರೂ ಸಾಧನೆ ಮಾಡಬಹುದು. ಈ ನಿಟ್ಟಿನಲ್ಲಿ ಸಮಾಜ ಕಲ್ಯಾಣ ಇಲಾಖೆ ಸಚಿವ ಎಸ್ ಸಿ ಮಹದೇವಪ್ಪರವರ ಹುಟ್ಟು ಹಬ್ಬದ ಪ್ರಯುಕ್ತ ಸಾಮಾಜಿಕ ಕಾರ್ಯಕ್ರಮ ಆಯೋಜನೆ ಮಾಡಿರುವುದರಿಂದ ನೂರಾರು ಜನರಿಗೆ ಹೆಚ್ಚಿನ ಅನುಕೂಲವಾಗಲಿದೆ. ಶಿಬಿರಕ್ಕೆ ಬಂದಿರುವ ಶಿಬಿರಾರ್ಥಿಗಳು ತಮ್ಮ ಯಾವುದೇ ಸಮಸ್ಯೆಗಳಿದ್ದರೂ ಮುಚ್ಚುಮರೆ ಇಲ್ಲದೆ ವೈದ್ಯಾಧಿಕಾರಿಗಳಿಗೆ ತಮ್ಮ ಸಮಸ್ಯೆ ಹೇಳಿಕೊಂಡರೆ ಉತ್ತಮ ಚಿಕಿತ್ಸೆ ಸಿಗಲಿದೆ. ಹೆಚ್ಚಿನ ಚಿಕಿತ್ಸೆ ಅವಶ್ಯಕತೆ ಇದ್ದರೆ ಬೆಂಗಳೂರಿನ ಆಸ್ಪತ್ರೆಯಲ್ಲಿ ಗುಣಮಟ್ಟದ ಚಿಕಿತ್ಸೆ ಕೊಡಿಸಿ ಗುಣಮುಖರನ್ನಾಗಿ ಮಾಡಿ ಮತ್ತೆ ವಾಪಸ್ ತಂದುಬಿಡುವ ಕಾರ್ಯವನ್ನು ಸಹ ಆಸ್ಪತ್ರೆಯವರು ಮಾಡುತ್ತಿರುವುದು ಶ್ಲಾಘನೀಯ ವಿಚಾರ ಎಂದರು.

ಕಾರ್ಯಕ್ರಮದಲ್ಲಿ ಚಾಮುಲ್ ಅಧ್ಯಕ್ಷ ನಂಜುಂಡಸ್ವಾಮಿ, ರಾಜ್ಯ ಉಪ್ಪಾರ ನಿಗಮದ ಮಾಜಿ ಅಧ್ಯಕ್ಷ ಶಿವಕುಮಾರ್, ನಿರ್ದೇಶಕರಾದ ಶಾಹುಲ್ ಅಹಮದ್, ಪಟ್ಟಣ ಪಂಚಾಯಿತಿ ಸದಸ್ಯ ಗಿರೀಶ್, ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಜಿಲ್ಲಾ ಉಪಾಧ್ಯಕ್ಷ ಸಿದ್ದರಾಜು, ಪಿಎಪಿಎಂಸಿ ಅಧ್ಯಕ್ಷ ನಟರಾಜು ಸೇರಿದಂತೆ ಮತ್ತಿತರರು ಭಾಗಿಯಾಗಿದ್ದರು.

ಆಂದೋಲನ ಡೆಸ್ಕ್

Recent Posts

ಜಿಪಂ, ತಾಪಂ ಕರಡು ಮೀಸಲಾತಿ ಪ್ರಕಟ; ಗರಿಗೆದರಿದ ರಾಜಕೀಯ

ಭೇರ್ಯ ಮಹೇಶ್ ಅವಳಿ ತಾಲ್ಲೂಕುಗಳ ಗ್ರಾಮೀಣ ಭಾಗಗಳಲ್ಲಿ ಚುನಾವಣಾ ಕಾವು ತೀವ್ರ ಕೆ.ಆರ್.ನಗರ: ರಾಜ್ಯ ಸರ್ಕಾರವು ಜಿಪಂ, ತಾಪಂ ಕ್ಷೇತ್ರಗಳ…

4 mins ago

ಈ ಬಾರಿ ಅಂಬಾರಿ ಹೊರುವ ಸಾರಥಿ ಯಾರು.?

ಚಿರಂಜೀವಿ ಸಿ.ಹುಲ್ಲಹಳ್ಳಿ ಮಹೇಂದ್ರ ಆನೆ ಹೊರಬಿದ್ದ ಬಳಿಕ ಸ್ಪರ್ಧೆ ಜೋರು: ಪ್ರಶಾಂತ್‌, ಧನಂಜಯ, ಸುಗ್ರೀವ, ಏಕಲವ್ಯ ನಡುವೆ ಪೈಪೋಟಿ ಭಾನುವಾರ…

10 mins ago

ಇಂದಿನಿಂದ ನಾಲ್ಕು ಶಕ್ತಿ ದೇವತೆಗಳ ಕರಗ ಉತ್ಸವ ಆರಂಭ

ನವೀನ್ ಡಿಸೋಜ ಮಡಿಕೇರಿ ದಸರಾಕ್ಕೆ ಕರಗಗಳೇ ಮುನ್ನುಡಿ ವಿಜಯದಶಮಿವರೆಗೆ ಮನೆಮನೆಗೆ ತೆರಳಿ ಆಶೀರ್ವಚನ ನೀಡುವ ಪರಂಪರೆ ಮಡಿಕೇರಿ: ಐತಿಹಾಸಿಕ ಮಡಿಕೇರಿ…

31 mins ago

ದಸರಾ ಸಂಭ್ರಮ ಶುರು

ಕೆ.ಬಿ.ರಮೇಶನಾಯಕ ಇಂದು ನಾಡಹಬ್ಬಕ್ಕೆ ವಿಧ್ಯುಕ್ತ ಚಾಲನೆ  ಕೊಪ್ಪಳದ ಗವಿಮಠ ಸಂಸ್ಥಾನದ ಶ್ರೀ ಅಭಿನವ ಗವಿಸಿದ್ದೇಶ್ವರ ಸ್ವಾಮೀಜಿ ಉದ್ಘಾಟನೆ ವಿದುಷಿ ಡಾ.ಮೈಸೂರು ನಾಗಮಣಿ ಶ್ರೀನಾಥ್‌ಗೆ…

39 mins ago

ಸಿಜೆಪಿ ನಾಯಕ ಅಭಿಜಿತ್ ದೀಪ್ಕೆ ಅಜ್ಜಿ ನಿಧನ

ಮುಂಬೈ: ಸಿಜೆಪಿ ಸಂಸ್ಥಾಪಕ ಅಭಿಜಿತ್‌ ದೀಪ್ಕೆ ಅವರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದ ಗಂಟೆಗಳಲ್ಲಿ ಅವರ ಅಜ್ಜಿ ನಿಧನರಾಗಿದ್ದಾರೆ. ದೀರ್ಘಕಾಲದ…

18 hours ago