Mysore
34
few clouds

Social Media

ಸೋಮವಾರ, 27 ಏಪ್ರಿಲ 2026
Light
Dark

ಹನೂರು | ವೃದ್ಧರು, ರೋಗಿಗಳಿಗೆ ಹಣ್ಣು ಹಂಪಲು ವಿತರಿಸಿ ಹೆಚ್‌ಸಿಎಂ ಹುಟ್ಟುಹಬ್ಬ ಆಚರಣೆ

ಹನೂರು : ತಾಲೂಕಿನ ಕೌದಳ್ಳಿ ಗ್ರಾಮದ ವೃದ್ಧಾಶ್ರಮದಲ್ಲಿನ ವಯೋವೃದ್ಧರಿಗೆ ಹಾಗೂ ರಾಮಪುರ ಸಮುದಾಯ ಆರೋಗ್ಯ ಕೇಂದ್ರದ ಹೊರರೋಗಿಗಳಿಗೆ ಹಣ್ಣು ಹಂಪಲು, ಸಸ್ಯಹಾರ, ಮಾಂಸಹಾರ ವ್ಯವಸ್ಥೆ ಮಾಡುವ ಮೂಲಕ ಸಮಾಜ ಕಲ್ಯಾಣ ಇಲಾಖೆ ಸಚಿವ ಹೆಚ್.ಸಿ ಮಹದೇವಪ್ಪ ಅವರ ಹುಟ್ಟುಹಬ್ಬವನ್ನು ಆಚರಣೆ ಮಾಡಲಾಯಿತು.

ಕಾಂಗ್ರೆಸ್ ಪಕ್ಷದ ಜಿಲ್ಲಾ ವಕ್ತಾರ ಮಧುವನಹಳ್ಳಿ ಶಿವಕುಮಾರ್ ಮಾತನಾಡಿ, ಸಮಾಜ ಕಲ್ಯಾಣ ಇಲಾಖೆ ಸಚಿವ ಹೆಚ್ ಸಿ ಮಹದೇವಪ್ಪ ರಾಜ್ಯದ ಧೀಮಂತ ನಾಯಕರಾಗಿದ್ದು, ಶೋಷಿತ ವರ್ಗಗಳ ಧ್ವನಿಯಾಗಿ ಸಮಾಜದ ಏಳಿಗೆಗೆ ಕಟ್ಟಿ ಬದ್ಧರಾಗಿ ಅನೇಕ ತೀರ್ಮಾನಗಳನ್ನು ತೆಗೆದುಕೊಂಡಿದ್ದಾರೆ. ಹಿಂದುಳಿದ ವರ್ಗದವರನ್ನು ಸಮಾಜದ ಮುಖ್ಯ ವಾಹಿನಿಗೆ ತರಲು ಹತ್ತಾರು ವರ್ಷಗಳಿಂದ ಪ್ರಾಮಾಣಿಕ ಪ್ರಯತ್ನ ಮಾಡುತ್ತಿದ್ದಾರೆ. ಲೋಕೋಪಯೋಗಿ ಸಚಿವರಾಗಿ, ಆರೋಗ್ಯ ಸಚಿವರಾಗಿ ಪ್ರಸ್ತುತ ಸಮಾಜ ಕಲ್ಯಾಣ ಇಲಾಖೆಯ ಸಚಿವರಾಗಿ ಹಲವು ಬದಲಾವಣೆಗಳನ್ನು ತರುವ ಮೂಲಕ ಉತ್ತಮ ಆಡಳಿತ ನಡೆಸುತ್ತಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯರವರ ಸಚಿವ ಸಂಪುಟದಲ್ಲಿ ಸಮಾಜ ಕಲ್ಯಾಣ ಇಲಾಖೆಯ ಸಚಿವರಾಗಿ ರಾಜ್ಯದಲ್ಲಿಯೇ ಉತ್ತಮ ಆಡಳಿತ ನೀಡಿದ್ದಾರೆ. ಅವರಿಗೆ ಭಗವಂತ ಹೆಚ್ಚಿನ ಆರೋಗ್ಯ ಆಯಸ್ಸು ಕರುಣಿಸಲಿ ಮುಂದಿನ ದಿನಗಳಲ್ಲಿ ಉನ್ನತವಾದ ಹುದ್ದೆ ಸಿಗಲಿ ಎಂದು ಶುಭ ಕೋರಿದರು.

ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಕಾಂಗ್ರೆಸ್ ಪಕ್ಷವನ್ನು ಮಹಿಳಾ ವಿರೋಧಿ ಎಂದು ಬಿಂಬಿಸುತ್ತಿದ್ದಾರೆ. ಆದರೆ ಕಾಂಗ್ರೆಸ್ ಪಕ್ಷ ಅಂದಿನಿಂದಲೂ ಮಹಿಳೆಯರಿಗೆ ಸೂಕ್ತ ಸ್ಥಾನಮಾನ ನೀಡಿಕೊಂಡು ಬಂದಿದೆ. ಬಿಜೆಪಿಯವರು ಮಹಿಳೆಯರಿಗೆ ಶೇಕಡ 33% ಮೀಸಲಾತಿ ನೀಡಬೇಕೆಂದು ಎಂದಿಗೂ ಒತ್ತಾಯಿಸಿಲ್ಲ, ಸ್ಥಳೀಯ ಸಂಸ್ಥೆಗಳಲ್ಲಿ ಮಹಿಳಾ ಮೀಸಲಾತಿ ತಿದ್ದುಪಡಿಯನ್ನು ತಂದವರು ಪ್ರಧಾನಮಂತ್ರಿಯಾಗಿದ್ದ ರಾಜೀವ್ ಗಾಂಧಿ ಅವರು ಜಿಲ್ಲಾ ಮತ್ತು ತಾಲೂಕು ಪಂಚಾಯಿತಿಗಳಲ್ಲಿ ಮಹಿಳೆಯರಿಗೆ 33% ಮೀಸಲಾತಿ ನೀಡಬೇಕೆಂದು ಬಿಜೆಪಿ ಎಂದಿಗೂ ಒತ್ತಾಯಿಸಿಲ್ಲ ಈಗ ಚುನಾವಣೆ ಇರುವುದರಿಂದ ಮಹಿಳಾ ಮೀಸಲಾತಿಗೆ ಒತ್ತಾಯಿಸಿ ರಾಜಕೀಯ ಮಾಡುತ್ತಿದ್ದಾರೆ. ಕಾಂಗ್ರೆಸ್ ಪಕ್ಷದ ಪರಮೋಚ್ಚ ನಾಯಕಿ ಸೋನಿಯಾ ಗಾಂಧಿ ರವರು ಚುನಾವಣೆ ಮುಗಿದ ನಂತರ ಎಲ್ಲಾ ಪಕ್ಷದವರನ್ನು ಸಭೆ ಕರೆದು ಉತ್ತಮ ನಿರ್ಧಾರ ತೆಗೆದುಕೊಳ್ಳೋಣ ಚುನಾವಣೆ ಮುಗಿಯುವವರೆಗೆ ಯಾವುದೇ ಚರ್ಚೆ ಬೇಡ ಎಂದು ತಿಳಿಸಿದರೂ ಬಿಜೆಪಿಯವರು ಮಾತ್ರ ಚುನಾವಣಾ ಪ್ರಚಾರದ ಲಾಭಕ್ಕಾಗಿ ಮಸೂದೆ ಮಂಡಿಸಿ ರಾಜಕೀಯ ಗಿಮಿಕ್ ಮಾಡುತ್ತಿದ್ದಾರೆ ಎಂದರು.

ಹನೂರು ಕ್ಷೇತ್ರದ ಸಮಗ್ರ ಅಭಿವೃದ್ಧಿ ಮಾಡುವ ನಿಟ್ಟಿನಲ್ಲಿ ಕಳೆದ ವರ್ಷ ಮಲೆ ಮಹದೇಶ್ವರ ಬೆಟ್ಟದಲ್ಲಿ ಸಚಿವ ಸಂಪುಟ ಸಭೆ ನಡೆಸಿ ನೀರಾವರಿ ಯೋಜನೆಗೆ ಹೆಚ್ಚಿನ ಆದ್ಯತೆ ನೀಡಿದ್ದಾರೆ. ಅಭಿವೃದ್ಧಿ ಆಸ್ಪತ್ರೆಗಳ ನಿರ್ಮಾಣ ಸೇರಿದಂತೆ ನೂರಾರು ಕೋಟಿ ಅನುದಾನ ಕೊಡಿಸಿದ್ದಾರೆ. ರಾಮಾಪುರ ಹೋಬಳಿ ವ್ಯಾಪ್ತಿಯ ಜನರಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ 490 ಕೋಟಿ ವೆಚ್ಚದಲ್ಲಿ ನೀರಾವರಿ ಯೋಜನೆಗೆ ಬಜೆಟ್ ನಲ್ಲಿ ಅನುಮೋದನೆ ಕೊಡುತ್ತಿದ್ದಾರೆ. ಒಟ್ಟಾರೆ ಹನೂರು ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಹೆಚ್ ಸಿ ಮಹದೇವಪ್ಪ ಹಾಗೂ ಸಂಸದ ಸುನಿಲ್ ಬೋಸ್ ಹಗಲಿರುಳು ಶ್ರಮಿಸುತ್ತಿದ್ದಾರೆ ಎಂದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಕೊಪ್ಪಳ ಮಹದೇವ ನಾಯಕ, ಕಂಠೀರವ ಸ್ಟುಡಿಯೋ ನ ಮಾಜಿ ನಿರ್ದೇಶಕರಾದ ಮಂಗಲ ಪುಟ್ಟರಾಜು ರಾಮಪುರ ವಿಭಾಗದ ಎಸ್ ಸಿ ಘಟಕದ ಅಧ್ಯಕ್ಷ ರಾಮಲಿಂಗಂ, ಉಪಾಧ್ಯಕ್ಷ ಗುರುದೇವ್, ರಾಮಪುರ ಬ್ಲಾಕ್ ಯೂಥ್ ಕಾಂಗ್ರೆಸ್ ಅಧ್ಯಕ್ಷ ರಮೇಶ್,ಯುವ ಮುಖಂಡರಾದ ಅಮೋಘ ರಾವ್, ಮುಖಂಡರಾದ ಶಿವಕುಮಾರ್, ನಾಗರಾಜು, ಶಿವು, ಶಿವಣ್ಣ ಸೇರಿದಂತೆ ಇನ್ನಿತರರು ಹಾಜರಿದ್ದರು.

Tags:
error: Content is protected !!