ಚಾಮರಾಜನಗರ

ಹನೂರು: ಮಲೆ ಮಹದೇಶ್ವರ ಬೆಟ್ಟದಲ್ಲಿ ಸಾಮೂಹಿಕ ವಿವಾಹ

ಚಾಮರಾಜನಗರ: ಪವಾಡ ಪುರುಷ ನೆಲೆಸಿರುವ ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ 95 ಜೋಡಿಗಳು ದಾಂಪತ್ಯ ಜೀವನಕ್ಕೆ ಕಾಲಿಟ್ಟರು.

ಪ್ರಾಧಿಕಾರ ರಂಗಮಂದಿರದಲ್ಲಿ ಇಂದು ಬೆಳಿಗ್ಗೆ 9.20ರಿಂದ 10.10ರೊಳಗೆ ಸಲ್ಲುವ ಶುಭ ಕನ್ಯಾ ಲಗ್ನದಲ್ಲಿ ಸಾಮೂಹಿಕ ವಿವಾಹ ಮಹೋತ್ಸವ ನೆರವೇರಿತು.

ತಮಿಳುನಾಡು ಸೇರಿದಂತೆ ರಾಜ್ಯದ ಚಾಮರಾಜನಗರ, ಬೆಂಗಳೂರು, ಮೈಸೂರು, ಮಂಡ್ಯ, ರಾಮನಗರ, ತುಮಕೂರು, ಕೊಡಗು ಸೇರಿದಂತೆ ಇನ್ನಿತರ ಜಿಲ್ಲೆಗಳಲ್ಲಿ ವ್ಯಾಪಕ ಪ್ರಚಾರ ನಡೆಸಿದ ಪರಿಣಾಮ 15 ವರ್ಷಗಳ ನಂತರ 95 ಜೋಡಿಗಳು ಹೊಸ ಜೀವನಕ್ಕೆ ಕಾಲಿಟ್ಟಿದ್ದಾರೆ.

ವಧುವಿಗೆ ನಾಲ್ಕು ಗ್ರಾಂ ಚಿನ್ನದ ತಾಳಿ, ಬೆಳ್ಳಿ ಕಾಲುಂಗುರ, ಸೀರೆ, ರವಿಕೆ, ವರನಿಗೆ ಪಂಚ್‌ ಶರ್ಟ್‌, ಪೇಟವನ್ನು ನೀಡಲಾಗಿತ್ತು.

ಇನ್ನು ಉಚಿತ ಸಾಮೂಹಿಕ ವಿವಾಹ ಕಾರ್ಯಕ್ರಮದ ಪ್ರಯುಕ್ತ ಶ್ರೀ ಮಹದೇಶ್ವರ ಸ್ವಾಮಿಯ ಹೊರ, ಒಳ ಆವರಣ, ರಾಜಗೋಪುರ, ಅತಿಥಿ ಗಣ್ಯರ ಮುಖ್ಯದ್ವಾರ ಸೇರಿದಂತೆ ಪ್ರಮುಖ ಸ್ಥಳಗಳಲ್ಲಿ ವಿವಿಧ ಬಗೆಯ ಫಲ ಪುಷ್ಪಗಳಿಂದ ಅಲಂಕಾರ ಮಾಡಲಾಗಿತ್ತು.

ಕಾರ್ಯಕ್ರಮದಲ್ಲಿ ಸುತ್ತೂರು ಶ್ರೀ ಶಿವರಾತ್ರಿ ದೇಶಿಕೇಂದ್ರ ಶ್ರೀಗಳು, ಶಾಸಕ ಎಂ.ಆರ್.ಮಂಜುನಾಥ್‌, ಮಹದೇಶ್ವರ ಬೆಟ್ಟದ ಪ್ರಾಧಿಕಾರ ಕಾರ್ಯದರ್ಶಿ ಎ.ಇ.ರಘು ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

ಆಂದೋಲನ ಡೆಸ್ಕ್

Recent Posts

ಮೈಸೂರು ದಸರಾ | ಯುವ ಸಂಭ್ರಮ ಉದ್ಘಾಟನೆಗೆ ವಿಜಯಪ್ರಕಾಶ್‌

ಮೈಸೂರು : ದಸರಾ ಮಹೋತ್ಸವಕ್ಕೆ ಆರಂಭದ ಮುನ್ನುಡಿಯಂತಿರುವ ಯುವ ಸಂಭ್ರಮಕ್ಕೆ ಈ ಬಾರಿ ಮೈಸೂರಿನ ಮನೆ ಮಗ ಖ್ಯಾತ ಗಾಯಕ…

2 hours ago

ಕೊಡಗು: ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ

ಕೊಡಗು: ಜಿಲ್ಲೆಯ ನೆಲ್ಯಹುದಿಕೇರಿ ಸಮೀಪದ ಅತ್ತಿಮಂಗಲದಲ್ಲಿ ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ ನಡೆಸಿದೆ. ಸ್ಕೂಟರ್‌ನಲ್ಲಿ ತೆರಳುತ್ತಿದ್ದ 60…

7 hours ago

ಓದುಗರ ಪತ್ರ: ಗ್ರಹಣ..!

ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…

11 hours ago

ಓದುಗರ ಪತ್ರ: ಪೆಟ್ರೋಲ್ ಬಂಕ್‌ಗಳಲ್ಲಿ ಮೋಸ: ಗರಿಷ್ಟ ಕ್ರಮ ಕೈಗೊಳ್ಳಲಿ

ರಾಜ್ಯದ ೮೦೫ ಪೆಟ್ರೋಲ್ ಬಂಕ್‌ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್‌ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…

11 hours ago

ಓದುಗರ ಪತ್ರ: ಉದ್ಯೋಗ ಸೃಷ್ಟಿ : ಫ್ಲಿಪ್‌ಕಾರ್ಟ್ ನಡೆ ಸ್ವಾಗತಾರ್ಹ

ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…

11 hours ago

ಸುಗಮ ಸಂಗೀತದ ಅದ್ಬುತ ಗಾಯಕ ಮಡಿಕೇರಿ ನಾಗೇಂದ್ರ

ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…

14 hours ago