ಚಾಮರಾಜನಗರ

ಹನೂರು: ಕೌದಳ್ಳಿ ಗ್ರಾಮ ಪಂಚಾಯಿತಿ ಬಡಾವಣೆ ಪರಿಶೀಲಿಸಿದ ಶಾಸಕ

ಹನೂರು: ತಾಲೂಕಿನ ಕೌದಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮೂರನೇ ವಾರ್ಡಿನ ಬಡಾವಣೆಗೆ ಶಾಸಕ ಎಂ.ಆರ್ ಮಂಜುನಾಥ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ತಾಲೂಕಿನ ಕೌದಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಬೂದು ನಿರ್ವಹಣಾ ಕಾಮಗಾರಿಗೆ ಚಾಲನೆ ನೀಡಿ ನಂತರ ಕೆಲವು ಬಡಾವಣೆಗಳಿಗೆ ಭೇಟಿ ನೀಡಿ ಜನರ ಕುಂದು ಕೊರತೆ ಆಲಿಸಿದರು.

ಈ ವೇಳೆ ವಾರ್ಡಿನ ನಿವಾಸಿಗಳು ಮಾತನಾಡಿ ಕೌದಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮೂರನೇ ಮತ್ತು ನಾಲ್ಕನೇ ವಾರ್ಡಿನಲ್ಲಿ ಸಮರ್ಪಕವಾಗಿ ಕಸ ವಿಲೇವಾರಿ ಮಾಡದೆ ಇರುವುದರಿಂದ ಕಸ ಕೊಳೆಯುತ್ತಿದೆ. ಇದರಿಂದ ವಾರ್ಡಿನ ನಿವಾಸಿಗಳು ಮೂಗು ಮುಚ್ಚಿಕೊಂಡು ಇರುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ .ಈ ಸಂಬಂಧ ಪಟ್ಟಂತೆ ಅಧಿಕಾರಿಗಳ ಗಮನಕ್ಕೆ ತಂದರು ಯಾವುದೇ ಪ್ರಯೋಜನವಾಗಿಲ್ಲ ಎಂದು ಆಕ್ರೋಶ ಹೊರ ಹಾಕಿದರು.

ಗ್ರಾಮದ ಬಡಾವಣೆಗಳಲ್ಲಿರುವ ಚರಂಡಿಗಳಲ್ಲಿ ಕಸ ಕಡ್ಡಿಗಳು ತುಂಬಿ ಸಾಂಕ್ರಮಿಕ ರೋಗಕ್ಕೆ ಅಹ್ವಾನ ನೀಡುತ್ತಿದೆ. ಚರಂಡಿಯಲ್ಲಿ ಸೊಳ್ಳೆಗಳು ಉತ್ಪತ್ತಿಯಾಗಿ ಡೆಂಗ್ಯೂ ಬರುವ ಸಾಧ್ಯತೆ ಇರುವುದರಿಂದ ಸೂಕ್ತ ಕ್ರಮವಹಿಸುವಂತೆ ನಿವಾಸಿಗಳು ಮನವಿ ಮಾಡಿದರು.

ಶಾಸಕ ಎಂಆರ್ ಮಂಜುನಾಥ ಸ್ಥಳದಲ್ಲಿಯೇ ಇದ್ದ ಗ್ರಾಮ ಪಂಚಾಯಿತಿ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಅಗತ್ಯ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಿ ಕೊಡಬೇಕು, ತಿಂಗಳಿಗೊಮ್ಮೆ ಚರಂಡಿ ಸ್ವಚ್ಛಗೊಳಿಸಬೇಕು ಪ್ರತಿದಿನ ಮನೆಗಳ ಕಸ ವಿಲೇವಾರಿ ಮಾಡಬೇಕು ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದರು.

ಈ ಸಂದರ್ಭದಲ್ಲಿ ಇಒ ಉಮೇಶ್, ಪಿಡಿಒ ಆಕಾಶ್ ಸೇರಿದಂತೆ ಇನ್ನಿತರರು ಹಾಜರಿದ್ದರು.

ಮಹಾದೇಶ್ ಎಂ ಗೌಡ

ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕು ಹನೂರು ಪಟ್ಟಣದವನಾದ ನಾನು ಪಟ್ಟಣದ ಕ್ರಿಸ್ತರಾಜ ಪ್ರೌಢಶಾಲೆಯಲ್ಲಿ 10ನೇ ತರಗತಿ ವಿದ್ಯಾಭ್ಯಾಸ ಮಾಡಿದ್ದು ಕಳೆದ 11 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕೆಲಸ ಮಾಡುತ್ತಿದ್ದೇನೆ. ರಾಜ್ಯಮಟ್ಟದ ವಿಶ್ವವಾಣಿ, ಜಿಲ್ಲಾ ಮಟ್ಟದ ಸುದ್ದಿ ಬುದ್ಧಿ ಪತ್ರಿಕೆಯಲ್ಲಿ ನಾಲ್ಕು ವರ್ಷ ತಾಲೂಕು ವರದಿಗಾರನಾಗಿ ಕರ್ತವ್ಯ ನಿರ್ವಹಿಸಿದ್ದೇನೆ. ಕಳೆದ ಹತ್ತು ವರ್ಷಗಳಿಂದ ಆಂದೋಲನ ದಿನಪತ್ರಿಕೆಯಲ್ಲಿ ಹನೂರು ತಾಲೂಕು ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ.

Recent Posts

ಆರತಿ ಉಕ್ಕಡದಲ್ಲಿ ʻತಡೆ‌ʼ ಒಡೆಸಿದ ನಟ ದರ್ಶನ್

ಶ್ರೀರಂಗಪಟ್ಟಣ: ತಾಲೂಕಿನ ಆರತಿ ಉಕ್ಕಡದ ಅಹಲ್ಯಾದೇವಿ ಮಾರಮ್ಮ ದೇವಾಲಯಕ್ಕೆ ನಟ ದರ್ಶನ್ ಬುಧವಾರ ಕುಟುಂಬ ಸದಸ್ಯರೊಂದಿಗೆ ಭೇಟಿ ನೀಡಿದರು. ಪತ್ನಿ…

12 mins ago

ವಿಜಯ್‌ ಹಜಾರೆ ಟ್ರೋಫಿ: 5ನೇ ಬಾರಿ ಫೈನಲ್‌ ಪ್ರವೇಶಿಸಿದ ಕರ್ನಾಟಕ

ಹರಿಯಾಣ: ವಿಜಯ್‌ ಹಜಾರೆ ಟೂರ್ನಿಯ ಮೊದಲ ಸೆಮಿಫೈನಲ್‌ ಪಂದ್ಯದಲ್ಲಿ ಉತ್ತಮ ಪ್ರದರ್ಶನ ನೀಡಿದ ಕರ್ನಾಟಕ,  ಹರಿಯಾಣ ತಂಡವನ್ನು ಐದು ವಿಕೆಟ್‌ಗಳಿಂದ…

39 mins ago

ಎಚ್.ಡಿ ಕೋಟೆ: ಕತ್ತು ಕೊಯ್ದು ಪತ್ನಿಯ ಬರ್ಬರ ಹತ್ಯೆ

ಎಚ್.ಡಿ.ಕೋಟೆ: ಪತ್ನಿಯ ನಡವಳಿಕೆಯಿಂದ ಬೇಸತ್ತ ಪತಿ ಪತ್ನಿಯನ್ನೇ ಕತ್ತು ಕೊಯ್ದು ಕೊಲೆ ಮಾಡಿ ಪೊಲೀಸ್ ಠಾಣೆಗೆ ಶರಣಾಗಿರುವ ಘಟನೆ ನಡೆದಿದೆ.…

2 hours ago

ಸಿದ್ದರಾಮಯ್ಯ ಒಕ್ಕಲಿಗ, ಲಿಂಗಾಯತರನ್ನು ಡಿ ಗ್ರೇಡ್ ಮಾಡ್ತಿದ್ದಾರೆ : ಕುಮಾರಸ್ವಾಮಿ ಆರೋಪ

ಬೆಂಗಳೂರು: ಜಾತಿ ಗಣತಿ ವರದಿ ಇಟ್ಟುಕೊಂಡು ಒಕ್ಕಲಿಗ, ಲಿಂಗಾಯತರನ್ನು ಡಿ ಗ್ರೇಡ್ ಮಾಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಹೊರಟಿದ್ದಾರೆ ಎಂದು ಕುಮಾರಸ್ವಾಮಿ…

2 hours ago

ಕಿಯೋನಿಕ್ಸ್ ವೆಂಡರ್ಸ್ ಬಿಲ್ ಬಾಕಿ; ಪ್ರಿಯಾಂಕ್ ಖರ್ಗೆಗೆ ಎಚ್.ಡಿ.ಕುಮಾರಸ್ವಾಮಿ ತರಾಟೆ

ಬೆಂಗಳೂರು: ಬಾಕಿ ಬಿಲ್ ಪಾವತಿ ಮಾಡದಿದ್ದರೆ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ವೆಂಡರ್ಸ್ ಪತ್ರ ಬರೆದಿರುವ ಪ್ರಕರಣ ಬಗ್ಗೆ ಸಚಿವ ಪ್ರಿಯಾಂಕ್ ಖರ್ಗೆ…

2 hours ago

ಮಕ್ಕಳ ಬಹುರೂಪಿ ಬೆಳೆಯಲಿ: ನಟ ಪ್ರಕಾಶ್‌ ರಾಜ್‌

ಮೈಸೂರು: ಮಕ್ಕಳಿಗೆ ಶಿಕ್ಷಣ ಎಷ್ಟು ಮುಖ್ಯವೋ ಅಷ್ಟೇ ರಂಗಭೂಮಿಯು ಸಹ ಮುಖ್ಯ. ಮಕ್ಕಳ ಬಹುರೂಪಿ ಎಂಬುದು ನಿಜವಾಗಿಯೂ ಒಂದು ಪ್ರಮುಖ…

2 hours ago