ಚಾಮರಾಜನಗರ

ಹನೂರು | ಬಾವಿಯಲ್ಲಿ ಮುಳುಗಿ ತಾಯಿ, ಇಬ್ಬರು ಮಕ್ಕಳ ಸಾವು

ಹನೂರು: ಮಹದೇಶ್ವರ ಬೆಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಾಡುಹೊಲ ಗ್ರಾಮದ ಬಾವಿಯಲ್ಲಿ ತಾಯಿ ಮತ್ತು ಇಬ್ಬರು ಮಕ್ಕಳು ಮುಳುಗಿ ಮೃತಪಟ್ಟಿರುವ ಘಟನೆ ಸೋಮವಾರ ಮುಂಜಾನೆ ನಡೆದಿದೆ.

ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಾಡುಹೊಲ ಗ್ರಾಮದ ಸುಶೀಲ (೩೦) ಮಕ್ಕಳಾದ ಚಂದ್ರು (೮) ದಿವ್ಯ (೧೧)  ಮೃತಪಟ್ಟವರು.

ಘಟನೆ ವಿವರ: ಕಾಡುಹೊಲ ಗ್ರಾಮದ ಸುಶೀಲರವರ ಮನೆಗೆ ಸುಶೀಲ ರವರ ತಮ್ಮ ಮಾದೇವ ಆಗಮಿಸಿ ಭಾವ ಮಹೇಶ್ ನ ಮೊಬೈಲ್ ಮತ್ತು ಹಣವನ್ನು ತೆಗೆದುಕೊಂಡು ಹೋಗಿದ್ದ ಎನ್ನಲಾಗಿದೆ. ಈ ಸಂಬಂಧ ಮಹೇಶ್ ಬಾಮೈದನಿಗೆ ಮೊಬೈಲ್ ಮತ್ತು ಹಣ ತೆಗೆದುಕೊಂಡು ಹೋಗಿರುವ ಬಗ್ಗೆ ದೂರವಾಣಿ ಕರೆ ಮಾಡಿದಾಗ ಇಬ್ಬರ ನಡುವೆ ವಾಗ್ವಾದ ನಡೆದಿದೆ. ಈ ಸಂಬಂಧ ಗಂಡ ಮಹೇಶ್ ಹೆಂಡತಿ ಸುಶೀಲ ರವರ ಜೊತೆ‌ ಕಷ್ಟಪಟ್ಟು ಸಂಪಾದನೆ ಮಾಡಿರುವ ಹಣ ಮತ್ತು ಮೊಬೈಲ್ ಅನು ನಿನ್ನ ತಮ್ಮ ತೆಗೆದುಕೊಂಡು ಹೋಗಿದ್ದಾನೆ ಎಂದು ಜಗಳವಾಡಿದ್ದಾನೆ. ಇದರಿಂದ ಬೇಸತ್ತ ಸುಶೀಲ ತನ್ನ ಇಬ್ಬರು ಮಕ್ಕಳ ಜೊತೆ ಭಾನುವಾರ ರಾತ್ರಿ ಮನೆಯಿಂದ ತೆರಳಿ ಕಾಡುಹೂಲ ಸಮೀಪದಲ್ಲಿನ ಜಮೀನೊಂದರ ಬಾವಿಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಸೋಮವಾರದಂದು ಜಮೀನಿನ ಮಾಲೀಕ ಬಾವಿಯಲ್ಲಿ ನೀರು ತರಲು ತೆರಳಿದಾಗ ಬಾವಿಯ ಬಳಿ ಚಪ್ಪಲಿ ತಾಳಿ ಹಾಗೂ ಇನ್ನಿತರ ವಸ್ತುಗಳು ಕಂಡು ಬಂದಿದೆ. ತಕ್ಷಣ ಗ್ರಾಮಸ್ಥರು ಹಾಗೂ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ ಸ್ಥಳಕ್ಕೆ ಆಗಮಿಸಿದ ಪೊಲೀಸರು ಸ್ಥಳೀಯರ ಸಹಕಾರದಿಂದ ಬಾವಿಯಲ್ಲಿ ಮುಳುಗಿದ್ದ ಮೂವರನ್ನು ಮೇಲೆತ್ತಿದ್ದಾರೆ.

ಈ ಸಂಬಂಧ ಸುಶೀಲರವರ ತಂದೆ ವೀರಣ್ಣ ಅಳಿಯ ಮಹೇಶ್ ಮೇಲೆ ಮಲೆ ಮಹದೇಶ್ವರ ಬೆಟ್ಟ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಮಲೆಮಾದೇಶ್ವರ ಬೆಟ್ಟ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

ಮೂವರ ಶವವನ್ನು ಮಲೆಮಹದೇಶ್ವರ ಬೆಟ್ಟ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ ವಾರಸುದಾರರಿಗೆ ಒಪ್ಪಿಸಲಾಗಿದೆ ಎಂದು ಇನ್ಸ್ಪೆಕ್ಟರ್ ಜಗದೀಶ್ ಆಂದೋಲನಕ್ಕೆ ತಿಳಿಸಿದರು.

ಆಂದೋಲನ ಡೆಸ್ಕ್

Recent Posts

ಆಧುನಿಕ ಕಾಲಕ್ಕೆ ತಕ್ಕಂತೆ ಮನ್ರೇಗಾ ಹೆಸರು ಬದಲಾವಣೆ : ಸಂಸದ ಯದುವೀರ್‌

ಮೈಸೂರು : ಆಧುನಿಕ ಕಾಲಕ್ಕೆ ತಕ್ಕಂತೆ ಮನ್ರೇಗಾ ಹೆಸರನ್ನು ಕೇಂದ್ರ ಸರ್ಕಾರ ಬದಲಾಯಿಸಿದೆ. ಆದರೆ, ಕಾಂಗ್ರೆಸ್ ಮಾಡುತ್ತಿರುವ ಆರೋಪಕ್ಕೆ ಯಾವ…

3 hours ago

ತಂತ್ರಜ್ಞಾನ ಅಳವಡಿಸಿಕೊಂಡು ಉತ್ತಮ ಇಳುವರಿ ಜೊತೆಗೆ ಹೆಚ್ಚಿನ ಆದಾಯ ಪಡೆಯರಿ : ರೈತರಿಗೆ ಸಿಎಂ ಕರೆ

ಬೆಳಗಾವಿ : ರಾಜ್ಯ ಸರ್ಕಾರ ರೈತ ಪರ ಸರಕಾರವಾಗಿದ್ದು, ಕಬ್ಬು ಬೆಳೆಯುವ ಪ್ರದೇಶದಲ್ಲಿ ಮಣ್ಣಿನ ಆರೋಗ್ಯ ಮತ್ತು ನೀರಿನ ಸಮಗ್ರ…

3 hours ago

ಟಿ-20 ವಿಶ್ವಕಪ್‌ಗೆ ಭಾರತ ತಂಡ ಪ್ರಕಟ :ಸೂರ್ಯಕುಮಾರ್ ಯಾದವ್ ನಾಯಕ

ಹೊಸದಿಲ್ಲಿ: ಮುಂಬರುವ ಐಸಿಸಿ ಟಿ-೨೦ ವಿಶ್ವಕಪ್‌ಗಾಗಿ ೧೫ ಸದಸ್ಯರ ಭಾರತ ತಂಡವನ್ನು ಪ್ರಕಟಿಸಲಾಗಿದೆ. ತಂಡವನ್ನು ಸೂರ್ಯಕುಮಾರ್ ಯಾದವ್ ಮುನ್ನಡೆಸಲಿದ್ದು, ಶುಭಮನ್…

3 hours ago

ಮೊಟ್ಟೆ ಕ್ಯಾನ್ಸರ್‌ ಕಾರಕವಲ್ಲ : ಕೇಂದ್ರ ವರದಿ

ಹೊಸದಿಲ್ಲಿ : ಮೊಟ್ಟೆ ಸೇವೆನೆಗೆ ಸುರಕ್ಷಿತವಾಗಿದ್ದು ಮೊಟ್ಟೆಯಲ್ಲಿ ಕ್ಯಾನ್ಸರ್ ಕಾರಕವಾಗುವ ಯಾವುದೇ ಅಂಶ ಪತ್ತೆ ಆಗಿಲ್ಲ ಎಂದು ಕೇಂದ್ರ ಆಹಾರ…

3 hours ago

‘ಅಂತರ್ಜಲ ಹೆಚ್ಚಳಕ್ಕೆ ಆದ್ಯತೆ ನೀಡಿ’ : ಶಿವಶಂಕರ್ ಸೂಚನೆ

ಚಾಮರಾಜನಗರ : ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಹೆಚ್ಚಿಸುವಂತಹ ಕಾಮಗಾರಿಗಳನ್ನು ಆದ್ಯತೆ ಮೇರೆಗೆ ಕೈಗೊಳ್ಳುವಂತೆ ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವಾಲಯದ ಜಲಶಕ್ತಿ ಮಂತ್ರಾಲಯದ…

3 hours ago

ಮೈಸೂರು | ನಾಳೆಯಿಂದ ಅರಮನೆ ಅಂಗಳದಲ್ಲಿ ಫಲಪುಷ್ಪ ಪ್ರದರ್ಶನ

ಮೈಸೂರು : ಕ್ರಿಸ್‌ಮಸ್ ಹಾಗೂ ಹೊಸ ವರ್ಷದ ಸಂಭ್ರಮಾಚರಣೆಗಾಗಿ ಪ್ರವಾಸಿಗರು, ಸ್ಥಳೀಯರಿಗೆ ಮನರಂಜನೆ ಒದಗಿಸಲು ಅರಮನೆ ಅಂಗಳದಲ್ಲಿ ಡಿ.೨೧ರಿಂದ ೩೧ರವರೆಗೆ…

4 hours ago