Mysore
26
scattered clouds
Light
Dark

ಹನೂರು: ಪಟ್ಟಣ ಪಂಚಾಯಿತಿ ಅಧ್ಯಕ್ಷರಾಗಿ ಮುಮ್ತಾಜ್ ಬಾನು ಉಪಾಧ್ಯಕ್ಷರಾಗಿ ಆನಂದ್ ಕುಮಾರ್ ಆಯ್ಕೆ

ಹನೂರು: ಹನೂರು ಪಟ್ಟಣ ಪಂಚಾಯಿತಿಯ ಎರಡನೇ ಅವಧಿಗೆ ನಡೆದ ಅಧ್ಯಕ್ಷ ಉಪಾಧ್ಯಕ್ಷ ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಒಂದನೇ ವಾರ್ಡಿನ ಮಮ್ತಾಜ್ ಭಾನು ರವರು ನಾಮಪತ್ರ ಸಲ್ಲಿಸಿದ್ದರು. ಅಧ್ಯಕ್ಷ ಸ್ಥಾನಕ್ಕೆ ಇವರೊಬ್ಬರೇ ನಾಮಪತ್ರ ಸಲ್ಲಿಸಿದ್ದರಿಂದ ಅವಿರೋಧ ಆಯ್ಕೆ ಎಂದು ಘೋಷಣೆ ಮಾಡಲಾಯಿತು.

ಉಪಾಧ್ಯಕ್ಷ ಸ್ಥಾನಕ್ಕೆ ಜಾ.ದಳದ ಎಂಟನೇ ವಾರ್ಡಿನ ಸದಸ್ಯ ಆನಂದ್ ಕುಮಾರ್ ಹಾಗೂ ಎರಡನೇ ವಾರ್ಡಿನ ಕಾಂಗ್ರೆಸ್ ಸದಸ್ಯ ಸುದೇಶ್ ರವರು ನಾಮಪತ್ರ ಸಲ್ಲಿಸಿದ್ದರು. ಆನಂದ್ ರವರಿಗೆ ಶಾಸಕ ಎಂಆರ್ ಮಂಜುನಾಥ್ ಬಿಜೆಪಿ ಸದಸ್ಯೆ ರೂಪ, ಜೆಡಿಎಸ್ ಪಕ್ಷದ 6 ಸದಸ್ಯರು ಸೇರಿದಂತೆ 8 ಎಂಟು ಮತಗಳು ಸುದೇಶ್ ರವರಿಗೆ ಕಾಂಗ್ರೆಸ್ ಪಕ್ಷದ ಐದು ಮತಗಳು ಬಿದ್ದಿದ್ದು ಮೂರು ಮತಗಳ ಅಂತರದಿಂದ ಪರಾಭವಗೊಂಡಿದ್ದಾರೆ. ಅಂತಿಮವಾಗಿ ಅಧ್ಯಕ್ಷರಾಗಿ ಮಮ್ತಾಜ್ ಬಾನು, ಉಪಾಧ್ಯಕ್ಷರಾಗಿ ಆನಂದ್ ಕುಮಾರ್ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ಹಾಗೂ ತಹಸಿಲ್ದಾರ್ ವೈ ಕೆ ಗುರುಪ್ರಸಾದ್ ಘೋಷಣೆ ಮಾಡಿದರು. ಮುಖ್ಯಾಧಿಕಾರಿ ಆರ್ ಅಶೋಕ್ ಚುನಾವಣೆಯಲ್ಲಿ ಪಾಲ್ಗೊಂಡಿದ್ದರು.

ಹನೂರು ಪಟ್ಟಣ ಪಂಚಾಯಿತಿಯಾಗಿ ಮೇಲ್ದರ್ಜೆಗೆ ಏರಿದ 18 ವರ್ಷಗಳ ಬಳಿಕ ಪಟ್ಟಣ ಪಂಚಾಯಿತಿಯಲ್ಲಿ ಜಾ.ದಳ ಪಕ್ಷ ಅಧಿಕಾರದ ಚುಕ್ಕಾಣಿ ಹಿಡಿದಿದೆ. ಮೊದಲ ಎರಡು ಅವಧಿಯಲ್ಲಿ ಕಾಂಗ್ರೆಸ್ ಪಕ್ಷದ ಸದಸ್ಯರುಗಳೇ ಬಹುಮತ ಪಡೆದುಕೊಂಡಿದ್ದರಿಂದ ಅಧಿಕಾರ ಪಡೆದುಕೊಂಡಿತ್ತು. ಮೂರನೇ ಅವಧಿಗೆ ನಡೆದ ಚುನಾವಣೆಯಲ್ಲಿ ಯಾವುದೇ ಪಕ್ಷಗಳಿಗೆ ಸ್ಪಷ್ಟ ಬಹುಮತ ಬಾರದೆ ಇದ್ದಿದ್ದರಿಂದ ಮೂರನೇ ಚುನಾವಣೆಯ ಮೊದಲ ಅವಧಿಗೆ ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷಗಳು ಮೈತ್ರಿ ಮಾಡಿಕೊಂಡು ಅಧ್ಯಕ್ಷರಾಗಿ ಬಿಜೆಪಿ ಸದಸ್ಯೆ ಚಂದ್ರಮ್ಮ ಉಪಾಧ್ಯಕ್ಷರಾಗಿ ಹರೀಶ್ ಕುಮಾರ್ ಆಯ್ಕೆಯಾಗಿದ್ದರು.

ಎರಡನೇ ಅವಧಿಯಲ್ಲಿ ಜೆಡಿಎಸ್- ಬಿಜೆಪಿ ಮೈತ್ರಿ ಸದಸ್ಯರುಗಳು 7 ಶಾಸಕ ಎಂಆರ್ ಮಂಜುನಾಥ್ ಸೇರಿದಂತೆ 8 ಸದಸ್ಯರು ಇರುವುದರಿಂದ ಮೊಟ್ಟಮೊದಲ ಬಾರಿಗೆ ಪಟ್ಟಣ ಪಂಚಾಯಿತಿ ಅಧಿಕಾರವನ್ನು ಜಾ.ದಳ ಪ್ರಪ್ರಥಮ ಬಾರಿಗೆ ಅಧಿಕಾರದ ಚುಕ್ಕಾಣಿ ಹಿಡಿದಿದೆ.

ಚುನಾವಣೆಯ ಬಳಿಕ ಶಾಸಕ ಎಂ ಆರ್ ಮಂಜುನಾಥ್ ಮಾತನಾಡಿ ಹನೂರು ಪಟ್ಟಣ ಪಂಚಾಯಿತಿಯಲ್ಲಿ ಮೊಟ್ಟ ಮೊದಲ ಬಾರಿಗೆ ಮೈತ್ರಿ ಪಕ್ಷದ ಸದಸ್ಯರ ಜೊತೆಗೂಡಿ ಅಧಿಕಾರದ ಚುಕ್ಕಾಣಿ ಹಿಡಿದಿದ್ದೇವೆ. ಮೊಟ್ಟ ಮೊದಲ ಬಾರಿಗೆ ಅಲ್ಪಸಂಖ್ಯಾತ ಸಮುದಾಯದ ಸದಸ್ಯರಾದ ಮುಮ್ತಾಜ್ ಬಾನು ರವರು ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಜಾದಳ ಪಕ್ಷದಲ್ಲಿ ಎಲ್ಲಾ ಸಮಾಜದವರನ್ನು ಒಗ್ಗೂಡಿಸಿಕೊಂಡು ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸುತ್ತಿದ್ದೇನೆ. ಇದೇ ನಿಟ್ಟಿನಲ್ಲಿ ಹನೂರು ಪಟ್ಟಣವನ್ನು ಮಾದರಿ ಪಟ್ಟಣವನ್ನಾಗಿ ಮಾಡಲು ಅವರಿಗೆ ಎಲ್ಲಾ ರೀತಿಯ ಸಹಕಾರ ನೀಡಲಾಗುವುದು ಎಂದು ತಿಳಿಸಿದರು.

ಕಾರ್ಯಕರ್ತರ ಸಂಭ್ರಮ: ಮೊಟ್ಟ ಮೊದಲ ಬಾರಿಗೆ ಹನೂರು ಪಟ್ಟಣದ ಇತಿಹಾಸದಲ್ಲಿಯೇ ಮಂಡಲ ಪಂಚಾಯಿತಿ, ಗ್ರಾಮ ಪಂಚಾಯಿತಿ ಪಟ್ಟಣ ಪಂಚಾಯಿತಿಯಲ್ಲಿ ಜಾದಳ ಅಧಿಕಾರ ಪಡೆದಿರಲಿಲ್ಲ, ಮೊದಲ ಬಾರಿಗೆ ಜಾದಳದ ಸದಸ್ಯರು ಪಟ್ಟಣ ಪಂಚಾಯಿತಿ ಚುಕ್ಕಾಣಿ ಅಲಂಕರಿಸಿದ ಹಿನ್ನೆಲೆ ಪಟ್ಟಣ ಪಂಚಾಯಿತಿ ಕಚೇರಿ ಮುಂಭಾಗ ಕಾರ್ಯಕರ್ತರು ಮುಖಂಡರುಗಳು ಪಟಾಕಿ ಸಿಡಿಸಿ ಸಂಭ್ರಮಿಸಿ ಸಿಹಿ ವಿತರಣೆ ಮಾಡಿದರು.