ಚಾಮರಾಜನಗರ

ಹನೂರು: ಬಿಸಿಯೂಟಕ್ಕೂ ನೀರಿಲ್ಲ – ಖಾಲಿ ಬಿಂದಿಗೆ ಹಿಡಿದು ವಿದ್ಯಾರ್ಥಿಗಳ ಪ್ರತಿಭಟನೆ

ಹನೂರು: ತಾಲೂಕಿನ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಂದನಪಾಳ್ಯ ಗ್ರಾಮದ ಸೆಂಟ್ ಆಂಥೋನಿ ಶಾಲೆಯಲ್ಲಿ ಕಳೆದ ಆರು ತಿಂಗಳಿನಿಂದ ಕುಡಿಯುವ ನೀರಿನ ಸಮಸ್ಯೆ ಎದುರಾಗಿದ್ದು, ಬಿಸಿಯೂಟ ತಯಾರಿಕೆಗೂ ನೀರಿಲ್ಲದಂತಾಗಿದೆ. ಇದರಿಂದ ರೊಚ್ಚಿಗೆದ್ದ ವಿದ್ಯಾರ್ಥಿಗಳು ಮಂಗಳವಾರ ಮಧ್ಯಾಹ್ನ ಖಾಲಿ ಬಿಂದಿಗೆ, ನೀರಿನ ಬಾಟಲ್ ಹಿಡಿದು ವಿಭಿನ್ನವಾಗಿ ಪ್ರತಿಭಟನೆ ನಡೆಸಿದ ಘಟನೆ ನಡೆದಿದೆ.

ರಾಮಾಪುರ ಹೋಬಳಿ ಮಾರ್ಟಳ್ಳಿ ಪಂಚಾಯಿತಿ ವ್ಯಾಪ್ತಿಯ ಸಂದನಪಾಳ್ಯದ ಸರ್ಕಾರಿ ಅನುದಾನಿತ ಸೆಂಟ್ ಆಂಥೋನಿ ಶಾಲೆಯಲ್ಲಿ 1 ರಿಂದ 10ನೇ ತರಗತಿಯವರೆಗೆ 304 ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಕಳೆದ ಆರು ತಿಂಗಳಿನಿಂದ ಸಮರ್ಪಕವಾಗಿ ನಲ್ಲಿ ನೀರು ಪೂರೈಕೆಯಾಗುತ್ತಿಲ್ಲ. ಪ್ರತಿನಿತ್ಯ 800 ರೂಪಾಯಿ ಕೊಟ್ಟು ಟ್ಯಾಂಕರ್ ನೀರು ಖರೀದಿಸಿ ಬಿಸಿಯೂಟ, ಕುಡಿಯುವ ನೀರಿಗೆ ಬಳಕೆ ಮಾಡುತ್ತಿದ್ದೇವೆ. ಇದುವರೆಗೂ ಲಕ್ಷಾಂತರ ರೂಪಾಯಿ ಖರ್ಚು ಮಾಡಿದ್ದೇವೆ. ಈಗ ಅನುದಾನವೂ ಇಲ್ಲದೆ ತೀವ್ರ ತೊಂದರೆಯಾಗುತ್ತಿದೆ ಎಂದು ಶಾಲಾ ಆಡಳಿತ ಮಂಡಳಿ ಅಳಲು ತೋಡಿಕೊಂಡಿದೆ.

ಬಿಸಿಯೂಟಕ್ಕೆ ಸರ್ಕಾರದಿಂದ ಆಹಾರ ಪದಾರ್ಥಗಳು ಪೂರೈಕೆಯಾಗುತ್ತಿದ್ದರೂ, ಅಡುಗೆ ಮಾಡಲು ನೀರಿಲ್ಲದೆ ಪರದಾಡುವಂತಾಗಿದೆ. ಈ ಸಂಬಂಧ ಗ್ರಾಮ ಪಂಚಾಯಿತಿಗೆ ಹಲವು ಬಾರಿ ಮನವಿ ಮಾಡಿದರೂ, ಪಿಡಿಓ ಅವರು ಅನುದಾನ ಇಲ್ಲ ಎಂದು ಹೇಳಿ ಜಾರಿಕೊಳ್ಳುತ್ತಿದ್ದಾರೆ ಎಂದು ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನೀರಿನ ಸಮಸ್ಯೆ ಬಗೆಹರಿಸಲು ಶಾಸಕರು, ಸಂಸದರು ಸೇರಿದಂತೆ ಸ್ಥಳೀಯ ಜನಪ್ರತಿನಿಧಿಗಳು ವಿಫಲರಾಗಿದ್ದಾರೆ ಎಂದು ಆರೋಪಿಸಿ ವಿದ್ಯಾರ್ಥಿಗಳು ಶಾಲಾ ಆವರಣದಲ್ಲಿ ಖಾಲಿ ಬಿಂದಿಗೆಗಳನ್ನು ಹಿಡಿದು ಪ್ರತಿಭಟನೆ ನಡೆಸಿ ಅಧಿಕಾರಿಗಳ ಗಮನ ಸೆಳೆದರು.

ತಕ್ಷಣ ಸಂಬಂಧಪಟ್ಟ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಶಾಶ್ವತ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಬೇಕು ಎಂದು ಪೋಷಕರು ಮತ್ತು ಗ್ರಾಮಸ್ಥರು ಒತ್ತಾಯಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಸೆಪ್ಟೆಂಬರ್ ತಿಂಗಳಲ್ಲೇ ಕರ್ನಾಟಕದಲ್ಲಿ ಬಿರು ಬೇಸಿಗೆಯ ವಾತಾವರಣ

ಬೆಂಗಳೂರು: ಮುಂಗಾರು ಮಳೆಯ ಅಬ್ಬರ ಕಾಣಬೇಕಿದ್ದ ಸೆಪ್ಟೆಂಬರ್ ತಿಂಗಳಲ್ಲೇ ಕರ್ನಾಟಕದಲ್ಲಿ ಬಿರು ಬೇಸಿಗೆಯ ವಾತಾವರಣ ನಿರ್ಮಾಣವಾಗಿದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ…

23 mins ago

ಅದ್ದೂರಿ ಶ್ರೀರಂಗಪಟ್ಟಣ ದಸರಾ ಬದಲು ಸಾಂಪ್ರದಾಯಿಕ ಆಚರಣೆ: ಸಚಿವ ಎನ್. ಚಲುವರಾಯಸ್ವಾಮಿ

ಮಂಡ್ಯ: ಮೈಸೂರು ದಸರಾಗಿಂತಲೂ ಪುರಾತನವಾದ ಶ್ರೀರಂಗಪಟ್ಟಣ ದಸರಾವನ್ನು ಈ ಬಾರಿ ಬರಗಾಲದ ಹಿನ್ನೆಲೆಯಲ್ಲಿ ಅದ್ದೂರಿತನದ ಬದಲು ಸಾಂಪ್ರದಾಯಿಕವಾಗಿ ಆಚರಿಸಲು ತೀರ್ಮಾನಿಸಲಾಗಿದೆ…

29 mins ago

ಮದ್ದೂರಿನಲ್ಲಿ ಬೆಳ್ಳಂಬೆಳಗ್ಗೆ ಜವರಾಯನ ಅಟ್ಟಹಾಸ: ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ಮೂವರು ಸಾವು

ಮಂಡ್ಯ: ಬೈಕ್‌ಗೆ ಹಾಲಿನ ಟ್ಯಾಂಕರ್ ಡಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ಮಂಡ್ಯ…

4 hours ago

ರಾಜ್ಯದಲ್ಲಿ ಮಳೆ ಕೊರತೆ: ತಾಪಮಾನ ಏರಿಕೆ: ಹವಾಮಾನ ಇಲಾಖೆ ಮಹತ್ವದ ಮುನ್ಸೂಚನೆ

ಬೆಂಗಳೂರು: ರಾಜ್ಯದ ಬಹುತೇಕ ಕಡೆ ಮಳೆ ಕೊರತೆ ಮುಂದುವರಿದಿದ್ದು, ತಾಪಮಾನ ಏರಿಕೆಯಾಗುವ ಸಾಧ್ಯತೆ ಇದೆ. ಈ ಬಾರಿ ಮುಂಗಾರು ಕೊರತೆ…

9 hours ago

ಕೊಡಗು: ಪತ್ನಿಗೆ ಗುಂಡಿಕ್ಕಿ ಕೊಂದು ತಾನೂ ಗುಂಡು ಹಾರಿಸಿಕೊಂಡು ವೃದ್ಧ ಆತ್ಮಹತ್ಯೆ

ಸೋಮವಾರಪೇಟೆ: ತಾಲೂಕಿನ ಮಾದಾಪುರ ಹೋಬಳಿ ವ್ಯಾಪ್ತಿಯ ಕುಂಬಾರಗಡಿಗೆ ಗ್ರಾಮದಲ್ಲಿ ಕೌಟುಂಬಿಕ ಕಲಹ ಶಂಕೆಯಡಿ ವೃದ್ಧ ದಂಪತಿ ಶವವಾಗಿ ಪತ್ತೆಯಾಗಿದ್ದಾರೆ. ಕನ್ನಿಕಂಡ…

9 hours ago

ಬಿಗ್‌ಬಾಸ್ ಮನೆಯಿಂದ ದಿಢೀರ್ ಹೊರಬಂದ ಓಂ ಪ್ರಕಾಶ್ ರಾವ್: ಆಸ್ಪತ್ರೆಗೆ ದಾಖಲು..!!

ಬೆಂಗಳೂರು: ಬಿಗ್‌ಬಾಸ್ ಮನೆಯಲ್ಲಿ ಇದ್ದ ಓಂ ಪ್ರಕಾಶ್ ರಾವ್ ದಿಢೀರ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಹಿಂದೆ ಅಪಘಾತವೊಂದರಲ್ಲಿ ಓಂ ಪ್ರಕಾಶ್…

9 hours ago