ಮಹಾದೇಶ್ ಎಂ ಗೌಡ, ಹನೂರು
ಹನೂರು: ಆಕಸ್ಮಿಕವಾಗಿ ಬೆಂಕಿ ಬಿದ್ದ ಪರಿಣಾಮ ಒಂದು ಎಕರೆ ಬಾಳೆ ಬೆಳೆ ಸುಟ್ಟು ಕರಕಲಾಗಿ ಕೈ ಗೆ ಬಂದ ತುತ್ತು ಬಾಯಿಗೆ ಬಾರದಾಗಿರುವ ಘಟನೆ ಬಂಡಳ್ಳಿ ಗ್ರಾಮದ ಹೊರವಲಯದಲ್ಲಿ ಮಂಗಳವಾರ ಜರುಗಿದೆ.
ತಾಲೂಕಿನ ಬಂಡಳ್ಳಿ ಗ್ರಾಮದ ಶಿವಮ್ಮ ಎಂಬುವವರಿಗೆ ಸೇರಿದ ಜಮೀನಿಗೆ ಬೆಂಕಿ ಬಿದ್ದು ಬಾಳೆ ನಾಶವಾಗಿದೆ.
ಶಿವಮ್ಮ ಎಂಬುವವರು ಬಂಡಳ್ಳಿ ಹೊರವಲಯದಲ್ಲಿ ಕಷ್ಟಪಟ್ಟು ಬೆಳೆದಿರುವ ಬಾಳೆ ಬೆಳೆಗೆ ಆಕಸ್ಮಿಕವಾಗಿ ಬೆಂಕಿ ಬಿದ್ದು ಗೊನೆ ಬಿಟ್ಟಿರುವ ಬಾಳೆ ಬೆಂಕಿಯ ಕೆನ್ನಾಲಿಗೆಗೆ ಸುಟ್ಟು ಭಸ್ಮವಾಗಿದೆ.ಇದರಿಂದ ರೈತ ಸಂಕಷ್ಟಕ್ಕೆ ಸಿಲುಕಿದ್ದಾರೆ ಸಂಬಂಧಪಟ್ಟ ಅಧಿಕಾರಗಳು ಸ್ಥಳ ಪರಿಶೀಲನೆ ಮಾಡಿ ಸರ್ಕಾರದ ವತಿಯಿಂದ ಪರಿಹಾರ ಕೊಡಿಸಬೇಕೆಂದು ಮನವಿ ಮಾಡಿದ್ದಾರೆ.
ಲಕ್ಷಾಂತರ ರೂ. ಸಾಲ ಮಾಡಿ ಬೆಳೆದಿದ್ದ ಬಾಳೆ ಬೆಳೆ ಬೆಂಕಿಗೆ ಆಹುತಿಯಾಗಿದ್ದು ತುಂಬಲಾರದ ನಷ್ಟವಾಗಿದೆ. ಇದರಿಂದ ಈಗಾಗಲೇ ಸಾಲದ ಸುಳಿಯಲ್ಲಿ ನಲುಗಿರುವ ರೈತರಿಗೆ ಗಾಯದ ಮೇಲೆ ಬರೆ ಎಳೆದಂತೆ ಆಗಿದೆ.
ಕಳೆದೆರಡು ವರ್ಷಗಳಿಂದ ಸಮರ್ಪಕ ಮಳೆಯಾಗದೆ ಕಷ್ಟದಲ್ಲಿಯೇ ಜೀವನ ನಡೆಸುತ್ತಿದ್ದ ರೈತ ಮಹಿಳೆ ಈ ವರ್ಷವಾದರೂ ಉತ್ತಮ ಲಾಭಾಂಶ ಪಡೆಯಬಹುದು ಎಂದು ಬೆಳೆದಿದ್ದ ಬಾಳೆ ಬೆಳೆಯುವ ಬೆಂಕಿಗೆ ಆಹುತಿಯಾಗಿದೆ. ಈ ನಿಟ್ಟಿನಲ್ಲಿ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಇತ್ತ ಗಮನಹರಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು ಆ ಮೂಲಕ ನೊಂದ ರೈತ ಮಹಿಳೆಗೆ ಪರಿಹಾರ ನೀಡಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘದ ಉಪಾಧ್ಯಕ್ಷ ಗೌಡೇಗೌಡ ಒತ್ತಾಯಿಸಿದ್ದಾರೆ.
ಸುಂಟಿಕೊಪ್ಪದಲ್ಲಿ ೧೮ ಲಕ್ಷ ರೂ. ವೆಚ್ಚದ ಮಂಟಪ ನಿರ್ಮಾಣ ೩ ದಿನಗಳ ಧಾರ್ಮಿಕ ಕಾರ್ಯಕ್ರಮ ಸುಂಟಿಕೊಪ್ಪ: ಇಲ್ಲಿನ ಶ್ರೀ ಪುರಂ…
ಪಿರಿಯಾಪಟ್ಟಣ: ದೇಸಿ ಬೀಜಗಳನ್ನು ಉಳಿಸಿದರೆ ಮಾತ್ರ ಮುಂದಿನ ಯುವ ಜನಾಂಗಕ್ಕೆ ವಿಷಮುಕ್ತ ಆಹಾರ ನೀಡಲು ಸಾಧ್ಯ ಎಂದು ಸಾವಯವ ರೈತ…
ಮೈಸೂರು: ಕ್ರಿಸ್ಮಸ್ ಆಚರಣೆಗೆ ಕ್ಷಣಗಣನೆ ಶುರುವಾಗಿದ್ದು, ಮಾರುಕಟ್ಟೆಯಲ್ಲಿ ಖರೀದಿ ಭರಾಟೆ ಜೋರಾಗಿದ್ದರೆ, ಚರ್ಚ್ಗಳ ಅಂಗಳವನ್ನು ವಿದ್ಯುತ್ ದೀಪಗಳಿಂದ ಸಿಂಗರಿಸುವ ಕಾರ್ಯ…
ಕೆ.ಬಿ.ರಮೇಶನಾಯಕ ಟಿಎಚ್ಒ ಹುದ್ದೆಗೆ ಡಿಎಚ್ಒ ವರ್ಗಾವಣೆ ಸರ್ಕಾರದ ಆದೇಶಕ್ಕೆ ಹೈಕೋರ್ಟ್ ತಡೆ ಮೈಸೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ…
ಮಂಡ್ಯ: ಆಸ್ತಿಗಾಗಿ ತಂದೆಯನ್ನೇ ಪಾಪಿ ಮಗನೋರ್ವ ಕೊಲೆ ಮಾಡಿರುವ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲ್ಲೂಕಿನ ದಳವಾಯಿಕೋಡಿಯಲ್ಲಿ ನಡೆದಿದೆ. ಗ್ರಾಮದ…