ಚಾಮರಾಜನಗರ

ಹನೂರು | ಖಾಸಗಿ ಬಸ್‌ ಪಲ್ಟಿ ; ಓರ್ವ ಸಾವು, 35ಕ್ಕೂ ಹೆಚ್ಚು ಮಂದಿಗೆ ಗಾಯ

ತೆಳ್ಳನೂರು -ಬಂಡಳ್ಳಿ ಮಾರ್ಗ ಮಧ್ಯದಲ್ಲಿ ದುರ್ಘಟನೆ
ಹನೂರು: ಮದುವೆ ನಿಶ್ಚಿತಾರ್ಥಕ್ಕೆ ತೆರಳಿದ್ದ ಬಸ್‌ವೊಂದು ಅಪಘಾತಕ್ಕಿಡಾಗಿ ಓರ್ವ ಮೃತಪಟ್ಟು,  35ಕ್ಕೂ ಹೆಚ್ಚು ಮಂದಿಗೆ ಗಾಯಗಳಾಗಿರುವ ಘಟನೆ ಜರುಗಿದೆ.

ದೊಡ್ಡಿಂದುವಾಡಿ ಗ್ರಾಮದ ನವೀನ್ (೩೨) ಮೃತಪಟ್ಟವರು. ಮದುವೆ ನಿಶ್ಚಿತಾರ್ಥ ಮುಗಿಸಿ ವಾಪಸ್ ಗ್ರಾಮಕ್ಕೆ ಬರುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ. ಬಸ್ಸಿನಲ್ಲಿ 70ಕ್ಕೂ ಹೆಚ್ಚು ಮಂದಿ ಇದ್ದರು.

ಘಟನೆಯ ವಿವರ: ಹನೂರು ತಾಲ್ಲೂಕಿನ ಶಾಗ್ಯ ಗ್ರಾಮದ ಯುವಕನಿಗೂ ಕನಕಪುರ ಸಮೀಪದ ಹನಿಯೂರು ಗ್ರಾಮದ ಯುವತಿಗೂ ನಿಶ್ಚಿತಾರ್ಥ ನಿಶ್ಚಯವಾಗಿತ್ತು.

ಅದರಂತೆ ನಿಶ್ಚಿತಾರ್ಥ ಕಾರ್ಯಕ್ರಮಕ್ಕೆ ಶಾಗ್ಯ ಗ್ರಾಮದ ಯುವಕನ ಸಂಬಂಧಿಕರು, ಸ್ನೇಹಿತರು ಖಾಸಗಿ ಬಸ್‌ನಲ್ಲಿ ತೆರಳಿ ನಿಶ್ಚಿತಾರ್ಥ ಮುಗಿಸಿಕೊಂಡು ವಾಪಸ್ ಗ್ರಾಮಕ್ಕೆ ಆಗಮಿಸುವಾಗ ತೆಳ್ಳನೂರು -ಬಂಡಳ್ಳಿ ಮಾರ್ಗ ಮಧ್ಯದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿಯಾಗಿದೆ.

ಈ ವೇಳೆ ಬಸ್ ಡೋರ್‌ನಲ್ಲಿ ನಿಂತಿದ್ದ ಕ್ಲೀನರ್ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಸುನಿಲ್ ಎಂಬವರು ಬಸ್ ಕೆಳಗೆ ಸಿಲುಕಿಕೊಂಡು ಎರಡು ಕಾಲುಗಳು ತುಂಡಾಗಿ ನರಳಾಡುತ್ತಿದ್ದರು. ಇದನ್ನು ನೋಡಿದ ದಾರಿಹೋಕರು ಬಂಡಳ್ಳಿ ಗ್ರಾಮಸ್ಥರು ಹಾಗೂ ಸಂಬಂಧಿಕರಿಗೆ ವಿಚಾರ ತಿಳಿಸಿದ್ದಾರೆ.

ತಕ್ಷಣ ಬಂಡಳ್ಳಿ ಗ್ರಾಮದ ನಿವಾಸಿಗಳು ಹಾಗೂ ಸಂಬಂಧಿಕರು ಸ್ಥಳಕ್ಕಾಗಮಿಸಿ ಬಸ್ ಅನ್ನು ಜೆಸಿಬಿ ಮೂಲಕ ಮೇಲೆ ಎತ್ತಿಸಿ, ಗಾಯಗೊಂಡಿದ್ದ ಸುನಿಲ್ ರವರನ್ನು ಆಂಬ್ಯುಲೆನ್ಸ್ ಮೂಲಕ ಕೊಳ್ಳೇಗಾಲ ಆಸ್ಪತ್ರೆಗೆ ಕಳುಹಿಸಿಕೊಟ್ಟಿದ್ದಾರೆ. ಉಳಿದಂತೆ ಬಂಡಳ್ಳಿ ಗ್ರಾಮದ ಖಾಸಗಿ ಆಸ್ಪತ್ರೆ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ ಕೊಳ್ಳೇಗಾಲ ಉಪ ವಿಭಾಗ ಆಸ್ಪತ್ರೆಗೆ ಕಳುಹಿಸಿಕೊಟ್ಟಿದ್ದಾರೆ.

ಈ ಘಟನೆಯಲ್ಲಿ ಸುಮಾರು 35 ಮಂದಿಗೂ ಹೆಚ್ಚು ಜನರು ಗಾಯಗಳಾಗಿದೆ. ಈ ಪೈಕಿ ಬಸವರಾಜು ಎಂಬವರಿಗೆ ಕೈ ಮುರಿದಿದೆ. ಉಳಿದಂತೆ ರಾಚಪ್ಪ, ನೂತನ್, ರಾಚಯ್ಯ, ಚೆನ್ನಮ್ಮ, ವಸಂತ, ಶಂಕರ್, ಸಿಂಧು, ಸಿದ್ದಮ್ಮ, ಮಾದೇವ ತಂಬಡಿ, ಮನು, ರಾಚಯ್ಯ, ರಾಜಮ್ಮ ಮಹದೇವಮ್ಮ, ಸಿದ್ದಯ್ಯ, ಹರೀಶ್, ಅರುಣ್, ನಿಖಿಲ್, ಪ್ರೇಮ್ ಎಂಬವರಿಗೆ ಕೈ, ತೋಳು, ತಲೆಗೆ ಪೆಟ್ಟಾಗಿದೆ.

ವಿಚಾರ ತಿಳಿಯುತ್ತಿದ್ದಂತೆ ಕೊಳ್ಳೇಗಾಲ ಉಪ ವಿಭಾಗದ ಡಿವೈಎಸ್ಪಿ ಧರ್ಮೇಂದ್ರ, ಹನೂರು ಪೊಲೀಸ್ ಠಾಣೆಯ ಎಸ್‌ಐ ಮಂಜುನಾಥ್ ಪ್ರಸಾದ್ ಹಾಗೂ ಕೊಳ್ಳೇಗಾಲ ಗ್ರಾಮಾಂತರ ಪೊಲೀಸ್ ಠಾಣೆಯ ಎಸ್‌ಐ, ಘಟನಾ ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿ ಗಾಯಾಳುಗಳಿಗೆ ಅಗತ್ಯ ಸೌಕರ್ಯಗಳನ್ನು ಕಲ್ಪಿಸಿದ್ದಾರೆ.

ಸೂಚನಾ ಫಲಕ ಅಳವಡಿಸಿ
ತೆಳ್ಳನೂರು ಗ್ರಾಮದಿಂದ ಬಂಡಳ್ಳಿ ಗ್ರಾಮದವರೆಗೆ ರಸ್ತೆ ತೀವ್ರ ತಿರುವುಗಳಿಂದ ಕೂಡಿದ್ದು, ಇಲ್ಲಿ ಹತ್ತಕ್ಕೂ ಹೆಚ್ಚು ಅಪಘಾತಗಳು ನಡೆದಿವೆ. ಈ ಜಾಗದಲ್ಲಿ ಸಂಬಂಧಪಟ್ಟ ಅಧಿಕಾರಿಗಳು ಸೂಚನಾ  ಫಲಕ ಅಳವಡಿಸಬೇಕೆಂದು ಸ್ಥಳೀಯರು ಒತ್ತಾಯಿಸಿದ್ದಾರೆ.

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ತಿರುವಿನಲ್ಲಿ ಉರುಳಿಬಿದ್ದ ಲಾರಿ: ತಪ್ಪಿದ ಭಾರೀ ಅನಾಹುತ

ಕೊಡಗು: ಕೊಡಗು ಜಿಲ್ಲೆ ಶನಿವಾರಸಂತೆ ಬಳಿಯ ಗುಡುಗಳಲೆಯಲ್ಲಿ ಸಿಮೆಂಟ್ ತುಂಬಿದ್ದ ಲಾರಿ ಉರುಳಿಬಿದ್ದಿದೆ. ಶನಿವಾರಸಂತೆ–ಅರಕಲಗೂಡು ರಸ್ತೆಯ ಗುಡುಗಳಲೆ ತಿರುವಿನಲ್ಲಿ ಘಟನೆ…

2 hours ago

ದುಬಾರೆ ಆನೆ ಶಿಬಿರದಲ್ಲಿ19 ವರ್ಷದ ಗಂಡಾನೆ ಸಾವು

ಕುಶಾಲನಗರ: ದುಬಾರೆ ಆನೆ ಶಿಬಿರದಲ್ಲಿದ್ದ ಸುಮಾರು 19 ವರ್ಷ ಪ್ರಾಯದ ಗಂಡಾನೆಯೊಂದು ಐದು ತಿಂಗಳಿಗೂ ಹೆಚ್ಚು ಕಾಲ ನಿರಂತರ ಚಿಕಿತ್ಸೆ…

3 hours ago

ಪ್ರೀತಿಗೆ ನಿರಾಕರಣೆ: ಮೈಸೂರಿನಲ್ಲಿ ಬೆಚ್ಚಿಬೀಳಿಸಿದ ಒನ್‌ ಸೈಡ್‌ ಲವ್‌ ಕೃತ್ಯ

ಮೈಸೂರು: ಪ್ರೀತಿಗೆ ನಿರಾಕರಿಸಿದ ಪರಿಣಾಮ ಯುವಕನೋರ್ವ ಯುವತಿಯನ್ನು ತಬ್ಬಿಕೊಂಡು ಪೆಟ್ರೋಲ್‌ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮೈಸೂರಿನ ವಿಜಯನಗರದ ಬಳಿ…

5 hours ago

ಮನ್​​ಮುಲ್​ ಹಾಲಿನ ಪುಡಿ ಕಲಬೆರಕೆ ಪ್ರಕರಣ: ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಅಧ್ಯಕ್ಷ ಶಿವಕುಮಾರ್ ಅರೆಸ್ಟ್​!

ಮಂಡ್ಯ: ಮನ್​​ಮುಲ್​ ಹಾಲಿನ ಪುಡಿ ಕಲಬೆರಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಮನ್ ಮುಲ್ ಅಧ್ಯಕ್ಷ ಶಿವಕುಮಾರ್(ಶಿವಪ್ಪ)…

6 hours ago

ಭಾರೀ ಮಳೆಗೆ ರೈತರ ಬೆಳೆ ನಾಶ: ಲಕ್ಷಾಂತರ ರೂ. ನಷ್ಟ, ಮನೆ ಗೋಡೆ ಕುಸಿತ

ಹನೂರು: ಸೋಮವಾರ ತಡರಾತ್ರಿ ಸುರಿದ ಭಾರಿ ಮಳೆಗೆ ಕ್ಷೇತ್ರದ ಹಲವು ಜಮೀನುಗಳಲ್ಲಿ ಬೆಳೆದಿದ್ದ ಬೆಳೆಗಳು ಸಂಪೂರ್ಣ ಜಲಾವೃತಗೊಂಡು ಲಕ್ಷಾಂತರ ರೂಪಾಯಿ…

7 hours ago

ಸ್ಕೂಲ್ ಬಸ್‌ ಹರಿದು ಒಂದೂವರೆ ವರ್ಷದ ಮಗು ಸಾವು

ಮೈಸೂರು: ಜಿಲ್ಲೆಯ ಹುಣಸೂರು ತಾಲೂಕಿನ ನಂಜಾಪುರ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ರಸ್ತೆ ಬದಿ ನಿಂತಿದ್ದ ಒಂದೂವರೆ ವರ್ಷದ ಪುಟ್ಟ…

7 hours ago