ಚಾಮರಾಜನಗರ

ಹನೂರು | ಪ್ರತ್ಯೇಕ ಮನೆಕಳ್ಳತನ ; ಐವರ ಬಂಧನ

ಹನೂರು : ಮೂರು ಪ್ರತ್ಯೇಕ ಮನೆಗಳಲ್ಲಿ ಕಳ್ಳತನ ನಡೆಸಿ ನಗದು ಹಾಗೂ ಚಿನ್ನ ದೋಚಿಕೊಂಡು ಪರಾರಿಯಾಗಿದ್ದ ಐವರು ಆರೋಪಿಗಳನ್ನು ರಾಮಾಪುರ ಪೊಲೀಸ್ ಠಾಣೆಯ ಪೊಲೀಸರು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ಬಂಧಿತರು ಹನೂರು ತಾಲೂಕಿನ ದಿನ್ನಳ್ಳಿ ಗ್ರಾಮದ ಅಬ್ದುಲ್ ಮೋಮಿನ್ (28), ಅಮೀರ್ ಖಾನ್ (24), ಮುಜಾಹಿದ್ ಪಾಷಾ (24), ಮಹಮ್ಮದ್ ಸಾಹೀಲ್ (19) ಹಾಗೂ ಅಲಿಮುಲ್ಲಾ (19) ಎಂದು ಗುರುತಿಸಲಾಗಿದೆ.

ಘಟನೆ ವಿವರ
ಹುಣಸೆಮರದ ದೊಡ್ಡಿ ಯಡಿಯಾರಳ್ಳಿ ಗ್ರಾಮದ ಪುಟ್ಟಮಾದೇಗೌಡ ಹಾಗೂ ಅವರ ಇಬ್ಬರು ಮಕ್ಕಳು ಪ್ರತ್ಯೇಕವಾಗಿ ಮೂರು ಮನೆಗಳಲ್ಲಿ ವಾಸವಾಗಿದ್ದರು. ಇಬ್ಬರು ಮಕ್ಕಳು ಬೆಂಗಳೂರಿನಲ್ಲಿ ಕೆಲಸ ಮಾಡುತ್ತಿದ್ದರಿಂದ ಮನೆಗಳಿಗೆ ಬೀಗ ಹಾಕಲಾಗಿತ್ತು. ಈ ವೇಳೆ ಮನೆಯಲ್ಲಿ ಯಾರೂ ಇಲ್ಲದ ಸಮಯವನ್ನು ಗಮನಿಸಿದ ಆರೋಪಿಗಳು ಡಿಸೆಂಬರ್ 12ರಂದು ಮೂರು ಮನೆಗಳ ಬೀಗ ಒಡೆದು ಸುಮಾರು 22 ಗ್ರಾಂ ಚಿನ್ನ ಹಾಗೂ 10 ಸಾವಿರ ರೂಪಾಯಿ ನಗದು ಕಳವು ಮಾಡಿಕೊಂಡು ಪರಾರಿಯಾಗಿದ್ದರು.

ಈ ಕುರಿತು ಪುಟ್ಟಮಾದೇಗೌಡ ರಾಮಾಪುರ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮುತ್ತುರಾಜು, ಡಿವೈಎಸ್ಪಿ ಧರ್ಮೇಂದ್ರ ಮಾರ್ಗದರ್ಶನದಲ್ಲಿ ಇನ್ಸ್‌ಪೆಕ್ಟರ್ ಚಿಕ್ಕರಾಜಶೆಟ್ಟಿ ನೇತೃತ್ವದಲ್ಲಿ ಸಬ್‌ಇನ್ಸ್‌ಪೆಕ್ಟರ್ ಮಂಜುನಾಥ್ ಹಾಗೂ ಸಿಬ್ಬಂದಿ ಕಾರ್ಯಾಚರಣೆ ವೇಳೆ ದೊರೆತ ಖಚಿತ ಮಾಹಿತಿ ಮೇರೆಗೆ ದಿನ್ನಳ್ಳಿ ಗ್ರಾಮದ ಬಸ್ ನಿಲ್ದಾಣದಲ್ಲಿ ಐವರನ್ನು ಬಂಧಿಸಿ, ಕೊಳ್ಳೇಗಾಲ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು.

ನ್ಯಾಯಾಧೀಶರು ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಹೊರ್ಮುಜ್‌ ಬಿಕ್ಕಟ್ಟು | ಇರಾನ್‌ನ ಬಂದರುಗಳಿಗೆ ಅಮೆರಿಕದ ದಿಗ್ಬಂಧನ ಪ್ರಾರಂಭ

ಟೆಹ್ರಾನ್‌ : ಇರಾನಿನ ಬಂದರುಗಳು ಸಾಗುವ ಸಮುದ್ರ ಸಂಚಾರದ ಮೇಲೆ ಅಮೆರಿಕ ಮಿಲಿಟರಿ ದಿಗ್ಬಂಧನವನ್ನು ನಿಗದಿತ ಗಡುವಿನಂತೆ ಆರಂಭಿಸಿದೆ. ಈ…

1 hour ago

ರೋಹಿಣಿ ಸಿಂಧೂರಿ ವಿರುದ್ಧ ತನಿಖೆ : ಹೈಕೋರ್ಟ್‌ ಆದೇಶಕ್ಕೆ ಸುಪ್ರೀಂ ತಡೆ

ನವದೆಹಲಿ : ಮೈಸೂರಿನಲ್ಲಿ ಜಿಲ್ಲಾಧಿಕಾರಿಯಾಗಿದ್ದಾಗ ಬಟ್ಟೆ ಬ್ಯಾಗ್ ಖರೀದಿಯಲ್ಲಿ ಅಕ್ರಮ ಆರೋಪ ಸಂಬಂಧ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿಗೆ ಮಧ್ಯಂತರ…

2 hours ago

ಅನಗತ್ಯ ಹೇಳಿಕೆ ನೀಡಿದರೆ ಶಿಸ್ತುಕ್ರಮ ; ಕೈ ಶಾಸಕರಿಗೆ ಡಿ.ಕೆ.ಶಿ ಎಚ್ಚರಿಕೆ

ಬೆಂಗಳೂರು : ಪಕ್ಷದ ಶಾಸಕರು ಹೈಕಮಾಂಡ್ ವರಿಷ್ಠರನ್ನು ಭೇಟಿ ಮಾಡುವುದರಲ್ಲಿ ತಪ್ಪೇನಿಲ್ಲ. ಅನವಶ್ಯಕವಾಗಿ ಏನೇನೋ ಹೇಳಿಕೆ ನೀಡಿದರೆ ಶಿಸ್ತು ಕ್ರಮ…

2 hours ago

ಹೆದ್ದಾರಿ ತಡೆದು ಪ್ರತಿಭಟನೆ : ಬಂಡೀಪುರ ರಾತ್ರಿ ಸಂಚಾರ ತೆರವು ಮಾಡದಂತೆ ಆಗ್ರಹ

ಚಾಮರಾಜನಗರ : ವಯನಾಡು ಸಂಸದೆ ಪ್ರಿಯಾಂಕ ವಾದ್ರಾ ಅವರು ಬಂಡೀಪುರ ರಾತ್ರಿ ಸಂಚಾರ ನಿಷೇಧ ಮುಕ್ತ ಮಾಡುವುದಾಗಿ ಹೇಳಿರುವುದು ಮತ್ತು…

3 hours ago

ಕೊಡಗು | ತೆರೆದ ಬಾವಿಗೆ ಬಿದ್ದ ಕಾಡಾನೆ ಮರಿ , ರಕ್ಷಣೆ

ಮಡಿಕೇರಿ : ಕಾಡಾನೆ ಮರಿಯೊಂದು ಬಾವಿಗೆ ಬಿದ್ದು ನರಳಾಡಿದ ಘಟನೆ ಕೊಡಗು-ದಕ್ಷಿಣ ಕನ್ನಡ ಜಿಲ್ಲೆಯ ಗಡಿಭಾಗದ ಪೆರಾಜೆ ಸಮೀಪದ ಕಲ್ಚೆರ್ಪೆಯಲ್ಲಿ…

3 hours ago

ಹೊರ್ಮುಜ್‌ ಬಿಕ್ಕಟ್ಟು | ಅಮೆರಿಕ ದಿಗ್ಬಂಧನ ಬೆನ್ನಲ್ಲೇ ಇರಾನ್‌ ವಾರ್ನಿಂಗ್‌

ಟೆಹ್ರಾನ್ : ಕದನ ವಿರಾಮ ಒಪ್ಪಂದಕ್ಕೆ ಬರಲು ವಿಫಲವಾದ ನಂತರ, ಹಾರ್ಮುಜ್ ಜಲಸಂಧಿ ಮೂಲಕ ಸಾಗುವ ಹಡಗುಗಳಿಗೆ ದಿಗ್ಬಂಧನ ವಿಧಿಸುವುದಾಗಿ…

4 hours ago