ಹನೂರು: ತಾಲೂಕಿನ ಬಿ ಆರ್ ಟಿ ಹುಲಿ ಸಂರಕ್ಷಿತ ಅರಣ್ಯ ಪ್ರದೇಶದಲ್ಲಿ ನಾಲ್ಕು ದಿನಗಳ ಅಂತರದಲ್ಲಿ ಮೂರು ಆನೆಗಳ ಅಸ್ತಿಪಂಜರಗಳು ತಡವಾಗಿ ಕಾಣಿಸಿಕೊಂಡಿರುವುದು ಹಲವು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ.
ಬಿ ಆರ್ ಟಿ ಹುಲಿ ಸಂರಕ್ಷಿತ ಅರಣ್ಯ ಪ್ರದೇಶದಲ್ಲಿ ಪ್ರತಿದಿನ ಕಳ್ಳ ಬೇಟೆ ಶಿಬಿರ, ಬೀಟ್ ಸಿಬ್ಬಂದಿಗಳು ಪ್ರತಿದಿನ ಗಸ್ತುತಿರುಗುತ್ತಿದ್ದರು ಪ್ರಾಣಿಗಳು ಸಾಯುತ್ತಿರುವುದು ಏಕೆ ತಿಳಿಯುತ್ತಿಲ್ಲ ಎಂದು ಪ್ರಜ್ಞಾವಂತ ನಾಗರಿಕರು ಪ್ರಶ್ನೆ ಮಾಡಿದ್ದಾರೆ.
ಕಳೆದ ಮೂರು ದಿನಗಳ ಹಿಂದೆ ಬಿ ಆರ್ ಟಿ ಹುಲಿ ಸಂರಕ್ಷಿತ ಪ್ರದೇಶದ ಬೈಲೂರು ವನ್ಯಜೀವಿ ವಲಯ ಆಳದ ಕೆರೆ ಅರಣ್ಯ ಪ್ರದೇಶದಲ್ಲಿ ಎಂಟು ತಿಂಗಳ ಹಿಂದೆ ಸ್ವಾಭಾವಿಕವಾಗಿ ಗಂಡಾನೆ ಮೃತಪಟ್ಟಿರುವುದು ತಡವಾಗಿ ಬೆಳಕಿಗೆ ಬಂದಿದೆ. ಎಂಟು ತಿಂಗಳ ಹಿಂದೆ ಆನೆ ಮೃತಪಟ್ಟಿರುವುದು ತಕ್ಷಣ ಬೆಳಕಿಗೆ ಬಂದಿಲ್ಲವಾದರೆ ಗಸ್ತು ಸಿಬ್ಬಂದಿಗಳು ಅರಣ್ಯದಲ್ಲಿ ಯಾವ ರೀತಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ, ಏನು ಮಾಡುತ್ತಿದ್ದಾರೆ? ಗಸ್ತು ತಿರುಗುತ್ತಿದ್ದಾರೋ ಅಥವಾ ಕೇವಲ ಸಂಬಳ ಪಡೆದುಕೊಂಡು ಕಾಲಹರಣ ಮಾಡುತ್ತಿದ್ದಾರೆಯೋ ಎಂಬ ಅನುಮಾನ ಕಾಡುತ್ತಿದೆ.
ಆಗಸ್ಟ್ 27ರಂದೇ ಬಿ ಆರ್ ಟಿ ಹುಲಿ ಸಂರಕ್ಷಿತ ಅರಣ್ಯ ಪ್ರದೇಶ ಯಳಂದೂರು ವನ್ಯಜೀವಿ ವಲಯ ಪುರಾಣಿ ಶಾಖೆ ಬೇತಾಳ ಕಟ್ಟೆ ಗಸ್ತಿನಲ್ಲಿ ಸಿಬ್ಬಂದಿಗಳು ಗಸ್ತಿನಲ್ಲಿದ್ದಾಗ ಆಳಶೆಟ್ಟಿಕಟ್ಟೆ ಮೂಲೆ ಎಂಬ ಅರಣ್ಯ ಪ್ರದೇಶದಲ್ಲಿ ಗಂಡಾನೆಯು ಮೃತಪಟ್ಟಿತ್ತು.
ಇದೇ ರೀತಿ ಆಗಸ್ಟ್ 30 ರಂದು ಬಿ ಆರ್ ಟಿ ಹುಲಿ ಸಂರಕ್ಷಿತ ಅರಣ್ಯ ಪ್ರದೇಶ ವ್ಯಾಪ್ತಿಯ ಬೈಲೂರು ವ್ಯಾಪ್ತಿಯಲ್ಲಿ ಮತ್ತೊಂದು ಆನೆ ಶವ ಪತ್ತೆಯಾಗಿರುವುದು ಆತಂಕಕ್ಕೆ ಕಾರಣವಾಗಿದೆ. ಬೈಲೂರು ವನ್ಯ ಜೀವಿ ವಲಯ ಪಿ ಜಿ ಪಾಳ್ಯ ಮಾವತ್ತೂರು ಬಿ ಗಸ್ತಿನಲ್ಲಿ ಸಿಬ್ಬಂದಿಗಳು ಗಸ್ತು ಮಾಡುವಾಗ ದೂಪದ ಮರದ ಹೊಡ್ಡು ಅರಣ್ಯ ಪ್ರದೇಶದಲ್ಲಿ ಮೃತ ಆನೆ ಪತ್ತೆಯಾಗಿದೆ. ಸುಮಾರು 60 ರಿಂದ 65 ವಯಸ್ಸಿನ ಹೆಣ್ಣಾನೆಯಾಗಿದ್ದು ಸುಮಾರು 8 ದಿನಗಳ ಹಿಂದೆ ಸ್ವಾಭಾವಿಕವಾಗಿ ಮೃತಪಟ್ಟಿರಬಹುದು ಎಂದು ದೃಢಪಡಿಸಿದ್ದಾರೆ.
ಬೈಲೂರು ವನ್ಯಜೀವಿ ವಲಯ ವ್ಯಾಪ್ತಿಯಲ್ಲಿ ಯಾವುದಾದರೂ ಸಾಂಕ್ರಾಮಿಕ ರೋಗ ಕಾಣಿಸಿಕೊಂಡಿದೆಯೇ ಎಂಬ ಅನುಮಾನ ಕಾಡುತ್ತಿದೆ.
ಏಷ್ಯಾದ ಅತಿ ದೊಡ್ಡ ಅರಣ್ಯ ಪ್ರದೇಶ ಎಂಬ ಬಿರುದು ಪಡೆದಿರುವ ಬಿ ಆರ್ ಟಿ ಅರಣ್ಯ ಪ್ರದೇಶ ವ್ಯಾಪ್ತಿಯಲ್ಲಿ ವನ್ಯ ಪ್ರಾಣಿಗಳು ಮೃತಪಡುತ್ತಿರುವುದಕ್ಕೆ ವನ್ಯಜೀವಿ ಪ್ರಿಯರು ಆತಂಕ ವ್ಯಕ್ತಪಡಿಸಿದ್ದಾರೆ.
ಅರಣ್ಯ ಪ್ರದೇಶದ ರಸ್ತೆಯಿಂದ ಎರಡು ಕಿಲೋ ಮೀಟರ್ ದೂರದಲ್ಲಿರುವ ಬಿದಿರಿನ ಪೊದೆಯಲ್ಲಿ ಆನೆ ಮೃತಪಟ್ಟಿರುವುದರಿಂದ ತಡವಾಗಿ ಗೊತ್ತಾಗಿದೆ. ನಮ್ಮ ಸಿಬ್ಬಂದಿಗಳು ಪ್ರತಿದಿನ ಗಸ್ತು ಮಾಡುತ್ತಾರೆ. ಆನೆಗಳು ಸ್ವಾಭಾವಿಕವಾಗಿ ಮೃತಪಟ್ಟಿದೆ.
ಪ್ರಮೋದ್ ಆರ್ ಎಫ್ ಒ
ಬೈಲೂರು ವನ್ಯ ಜೀವಿ ವಲಯ
ಬಿ ಆರ್ ಟಿ ಅರಣ್ಯ ಪ್ರದೇಶದಲ್ಲಿ ಉತ್ತಮ ಮಳೆಯಾಗಿದ್ದು ಕಾಡು ಪ್ರಾಣಿಗಳಿಗೆ ಮೇವು ಹಾಗೂ ನೀರು ಚೆನ್ನಾಗಿ ಸಿಗುತ್ತಿದೆ. ಆದರೆ ಒಂದೇ ವಾರದಲ್ಲಿ ಎರಡು ಆನೆಗಳು ಮೃತಪಟ್ಟಿರುವುದು ಬೆಳಕಿಗೆ ಬಂದಿದೆ. ಆನೆಗಳಿಗೆ ಯಾವುದಾದರೂ ಸಾಂಕ್ರಾಮಿಕ ರೋಗ ತಗುಲಿದೆಯೇ ಎಂಬುದನ್ನು ಹಿರಿಯಾ ಅಧಿಕಾರಿಗಳು ಪರಿಶೀಲನೆ ನಡೆಸಿ ಮುನ್ನೆಚ್ಚರಿಕೆ ಕ್ರಮ ವಹಿಸಬೇಕು.
ಎನ್ ಕೃಷ್ಣಮೂರ್ತಿ
ಪರಿವರ್ತನ ಗ್ರಾಮ ಸಮಿತಿ ಅಧ್ಯಕ್ಷರು
ಚಿಕ್ಕರಂಗ ಶೆಟ್ಟಿ ದೊಡ್ಡಿ
ಬೆಳಗಾವಿ: ರಾಜ್ಯದಲ್ಲಿ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ 59,772 ಶಿಕ್ಷಕರ ಹುದ್ದೆಗಳು ಖಾಲಿ ಇವೆ ಎಂದು ಶಾಲಾ ಶಿಕ್ಷಣ ಮತ್ತು…
ಬೆಂಗಳೂರು: ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದಿರುವ ನಟ ದರ್ಶನ್ ಮೈಸೂರಿಗೆ ನಾಲ್ಕು ವಾರಗಳ ಕಾಲ ತೆರಳಲು ಅನುಮತಿ…
ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಅವರಿಗೆ ಅಶ್ಲೀಲ ಪದ ಬಳಸಿ ನಿಂದಿಸಿರುವ ಆರೋಪದ ಮೇಲೆ ಬಂಧಿತಾರಾಗಿರುವ ಬಿಜೆಪಿ ಎಂಎಲ್‌ಸಿ ಸಿ.ಟಿ…
ಮೈಸೂರು: ನಗರದ ಅಲ್ ಅನ್ಸಾರ್ ಆಸ್ಪತ್ರೆಯ ವೈದ್ಯರೊಬ್ಬರ ಮೇಲೆ ದುಷ್ಕರ್ಮಿಗಳು ಬುಧವಾರ ತಡರಾತ್ರಿ ಹಲ್ಲೆ ನಡೆಸಿದ ಘಟನೆ ನಡೆದಿದೆ. ಡಾ.…
' ಗ್ರೇಸ್' ಪೋಷಕರ ದಿನಾಚರಣೆಯಲ್ಲಿ ಮೈಜಿಪಸಂ ಅಧ್ಯಕ್ಷ ಕೆ.ದೀಪಕ್ ಅಭಿಮತ ಮೈಸೂರು : ಹಣ ಆಸ್ತಿಗೆ ಹೆತ್ತವರ ಉಸಿರು ತೆಗೆಯುವ…
ಕನ್ನಡ ಸಾಹಿತ್ಯ ಸಮ್ಮೇಳನ: ಪ್ರಮುಖ ರಸ್ತೆಗಳಿಗೆ ವಿದ್ಯುತ್ ದೀಪಾಲಂಕಾರ ಮಂಡ್ಯ:ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20 ರಿಂದ ಮೂರು ದಿನಗಳ ಕಾಲ…