Mysore
24
broken clouds

Social Media

ಗುರುವಾರ, 15 ಜನವರಿ 2026
Light
Dark

ಹನೂರು| ರಸ್ತೆಯಲ್ಲಿ ಹುಲಿ ದರ್ಶನ: ವಿಡಿಯೋ ವೈರಲ್‌

ಹನೂರು: ತಾಲೂಕಿನ ಮಿಣ್ಯಂ ಗ್ರಾಮದಿಂದ ಹನೂರಿಗೆ ಆಗಮಿಸುತ್ತಿದ್ದ ಪ್ರಯಾಣಿಕರಿಗೆ ಅರಣ್ಯ ವ್ಯಾಪ್ತಿಯಲ್ಲಿ ಹುಲಿರಾಯ ದರ್ಶನ ನೀಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಹನೂರು ತಾಲ್ಲೂಕಿನ ಮಿಣ್ಯಂ ಗ್ರಾಮದಿಂದ ಖಾಸಗಿ ಬಸ್ ಮೂಲಕ ಹನೂರಿಗೆ ಆಗಮಿಸುತ್ತಿದ್ದ ಪ್ರಯಾಣಿಕರಿಗೆ ಮಲೆ ಮಹದೇಶ್ವರ ವನ್ಯಜೀವಿಧಾಮದ ಅರಣ್ಯ ಪ್ರದೇಶದಲ್ಲಿ ಬೆಳ್ಳಂಬೆಳಗ್ಗೆ ಹುಲಿ ದರ್ಶನ ನೀಡಿದೆ. ಬಸ್ಸಿನ ಚಾಲಕ ಹುಲಿಯನ್ನು ಕಂಡು ಕೆಲವು ಸಮಯ ರಸ್ತೆಯಲ್ಲಿ ನಿಲ್ಲಿಸಿದ್ದಾನೆ. ಈ ವೇಳೆ ಹುಲಿಯು ಒಂದು ಕಡೆಯಿಂದ ಮತ್ತೊಂದು ಕಡೆಗೆ ನಡೆದುಕೊಂಡು ಹೋಗುತ್ತಿರುವ ವಿಡಿಯೋವನ್ನು ಪ್ರಯಾಣಿಕರು ಸೆರೆ ಹಿಡಿದು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾರೆ.

ಇದನ್ನು ಓದಿ: ಎಚ್‌ಡಿಕೆ ಹುಟ್ಟುಹಬ್ಬ: ಮಂಡ್ಯದಲ್ಲಿ ಕಾರ್ಯಕರ್ತರಿಂದ ಅದ್ಧೂರಿ ಆಚರಣೆ

ಇನ್ನು ಈ ರಸ್ತೆಯ ಮೂಲಕ ದ್ವಿಚಕ್ರವಾಹನದಲ್ಲಿ ಹೋಗುವ ವಾಹನ ಸವಾರರು ಮುಂಜಾಗ್ರತಾ ಕ್ರಮ ವಹಿಸಬೇಕು. ಈ ಮಾರ್ಗದಲ್ಲಿ ಹುಲಿ ಚಿರತೆ ಆನೆ ಸೇರಿದಂತೆ ಇನ್ನಿತರ ಪ್ರಾಣಿಗಳು ಆಗಾಗ ಕಾಣಿಸಿಕೊಳ್ಳುತ್ತಿವೆ ಈ ನಿಟ್ಟಿನಲ್ಲಿ ಪ್ರತಿಯೊಬ್ಬರು ಎಚ್ಚರಿಕೆ ವಹಿಸುವಂತೆ ಪ್ರಜ್ಞಾವಂತ ನಾಗರಿಕರು ಮನವಿ ಮಾಡಿದ್ದಾರೆ.

ಕಳೆದ ಜೂನ್ ತಿಂಗಳಿನಲ್ಲಿಯೂ ಇದೆ ಅರಣ್ಯ ವ್ಯಾಪ್ತಿಯಲ್ಲಿ ಐದು ಹುಲಿಗಳನ್ನು ವಿಷ ಹಾಕಿಕೊಳ್ಳಲಾಗಿತ್ತು. ಈ ಅರಣ್ಯ ವ್ಯಾಪ್ತಿಯಲ್ಲಿಯೇ ಮತ್ತಷ್ಟು ಹುಲಿಗಳಿರುವುದು ವನ್ಯಪ್ರಿಯರಿಗೆ ಸಂತಸವನ್ನುಂಟು ಮಾಡಿದೆ.

Tags:
error: Content is protected !!