ಹನೂರು: ತಾಲೂಕಿನ ಮಿಣ್ಯಂ ಗ್ರಾಮದಿಂದ ಹನೂರಿಗೆ ಆಗಮಿಸುತ್ತಿದ್ದ ಪ್ರಯಾಣಿಕರಿಗೆ ಅರಣ್ಯ ವ್ಯಾಪ್ತಿಯಲ್ಲಿ ಹುಲಿರಾಯ ದರ್ಶನ ನೀಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಹನೂರು ತಾಲ್ಲೂಕಿನ ಮಿಣ್ಯಂ ಗ್ರಾಮದಿಂದ ಖಾಸಗಿ ಬಸ್ ಮೂಲಕ ಹನೂರಿಗೆ ಆಗಮಿಸುತ್ತಿದ್ದ ಪ್ರಯಾಣಿಕರಿಗೆ ಮಲೆ ಮಹದೇಶ್ವರ ವನ್ಯಜೀವಿಧಾಮದ ಅರಣ್ಯ ಪ್ರದೇಶದಲ್ಲಿ ಬೆಳ್ಳಂಬೆಳಗ್ಗೆ ಹುಲಿ ದರ್ಶನ ನೀಡಿದೆ. ಬಸ್ಸಿನ ಚಾಲಕ ಹುಲಿಯನ್ನು ಕಂಡು ಕೆಲವು ಸಮಯ ರಸ್ತೆಯಲ್ಲಿ ನಿಲ್ಲಿಸಿದ್ದಾನೆ. ಈ ವೇಳೆ ಹುಲಿಯು ಒಂದು ಕಡೆಯಿಂದ ಮತ್ತೊಂದು ಕಡೆಗೆ ನಡೆದುಕೊಂಡು ಹೋಗುತ್ತಿರುವ ವಿಡಿಯೋವನ್ನು ಪ್ರಯಾಣಿಕರು ಸೆರೆ ಹಿಡಿದು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾರೆ.
ಇದನ್ನು ಓದಿ: ಎಚ್‌ಡಿಕೆ ಹುಟ್ಟುಹಬ್ಬ: ಮಂಡ್ಯದಲ್ಲಿ ಕಾರ್ಯಕರ್ತರಿಂದ ಅದ್ಧೂರಿ ಆಚರಣೆ
ಇನ್ನು ಈ ರಸ್ತೆಯ ಮೂಲಕ ದ್ವಿಚಕ್ರವಾಹನದಲ್ಲಿ ಹೋಗುವ ವಾಹನ ಸವಾರರು ಮುಂಜಾಗ್ರತಾ ಕ್ರಮ ವಹಿಸಬೇಕು. ಈ ಮಾರ್ಗದಲ್ಲಿ ಹುಲಿ ಚಿರತೆ ಆನೆ ಸೇರಿದಂತೆ ಇನ್ನಿತರ ಪ್ರಾಣಿಗಳು ಆಗಾಗ ಕಾಣಿಸಿಕೊಳ್ಳುತ್ತಿವೆ ಈ ನಿಟ್ಟಿನಲ್ಲಿ ಪ್ರತಿಯೊಬ್ಬರು ಎಚ್ಚರಿಕೆ ವಹಿಸುವಂತೆ ಪ್ರಜ್ಞಾವಂತ ನಾಗರಿಕರು ಮನವಿ ಮಾಡಿದ್ದಾರೆ.
ಕಳೆದ ಜೂನ್ ತಿಂಗಳಿನಲ್ಲಿಯೂ ಇದೆ ಅರಣ್ಯ ವ್ಯಾಪ್ತಿಯಲ್ಲಿ ಐದು ಹುಲಿಗಳನ್ನು ವಿಷ ಹಾಕಿಕೊಳ್ಳಲಾಗಿತ್ತು. ಈ ಅರಣ್ಯ ವ್ಯಾಪ್ತಿಯಲ್ಲಿಯೇ ಮತ್ತಷ್ಟು ಹುಲಿಗಳಿರುವುದು ವನ್ಯಪ್ರಿಯರಿಗೆ ಸಂತಸವನ್ನುಂಟು ಮಾಡಿದೆ.
ಮೈಸೂರಿನ ಪ್ರಮುಖ ಜೀವವೈವಿಧ್ಯ ತಾಣ ಕುಕ್ಕರಹಳ್ಳಿ ಕೆರೆಗೆ ಪ್ರತಿದಿನ ನೂರಾರು ಸಂಖ್ಯೆಯಲ್ಲಿ ವಾಯುವಿಹಾರಿಗಳು, ಪ್ರವಾಸಿಗರು ಮತ್ತು ಸ್ಥಳೀಯರು ಭೇಟಿ ನೀಡುತ್ತಾರೆ.…
ಬೆಂಗಳೂರಿನ ಯಶವಂತಪುರ ಎಪಿಎಂಸಿ ಮಾರುಕಟ್ಟೆಗೆ ದಿಢೀರ್ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿಗಳ ಬಗ್ಗೆ ಪರಿಶೀಲಿಸುವ ವೇಳೆ ಅಪ್ರಾಪ್ತ ಮಕ್ಕಳಿಂದ ಕೆಲಸ…
ಮುಂಗಾರು ಬೆಳೆ ಸಮೀಕ್ಷೆಗೆ ಮೊಬೈಲ್ ಆಪ್ ಕಡ್ಡಾಯಗೊಳಿಸಿರುವುದು ತಾಂತ್ರಿಕವಾಗಿ ಉತ್ತಮ ಹೆಜ್ಜೆಯಾದರೂ, ವಾಸ್ತವದಲ್ಲಿ ಇದು ರೈತರಿಗೆ ಕಂಟಕವಾಗುತ್ತಿದೆ. ರಾಜ್ಯದಲ್ಲಿ ಶೇ.೮೦ಕ್ಕೂ…
ಡಾ. ಕೆ. ಪಿ. ಸಿದ್ಧಲಿಂಗಸ್ವಾಮಿ, ಸಂಶೋಧಕರು, ಸಿಎಸ್‌ಎಸ್‌ಐ, ಮಂಗಳೂರು ವಿಶ್ವವಿದ್ಯಾನಿಲಯ ಸೆಪ್ಟೆಂಬರ್ ೧೦ ವಿಶ್ವ ಆತ್ಮಹತ್ಯೆ ತಡೆ ದಿನ. ಇದು…
ಎಸ್.ಎಸ್.ಭಟ್ ಕೃಷ್ಣಾಪುರ-ದೊಡ್ಡಹುಂಡಿ ಗ್ರಾಮಗಳ ನಡುವೆ ವಿವಾದ ನಂಜನಗೂಡು: ಕೆರೆ ನೀರಿನ ವಿಚಾರವಾಗಿ ನಂಜನಗೂಡು ತಾಲ್ಲೂಕಿನ ಕೃಷ್ಣಾಪುರ ಹಾಗೂ ಗುಂಡ್ಲುಪೇಟೆ ತಾಲ್ಲೂಕಿನ…
ಹೇಮಂತ್‌ಕುಮಾರ್ ಎಚ್ಚರ ತಪ್ಪಿದರೆ ಬಿದ್ದು ಕೈಕಾಲು ಮುರಿದುಕೊಳ್ಳುವುದು ಖಚಿತ ಮಂಡ್ಯ: ನಗರದ ಜಯಚಾಮರಾಜ ವೃತ್ತ(ಸಂಜಯ ಸರ್ಕಲ್)ದಿಂದ ಹೊಳಲು ವೃತ್ತ, ಪೇಟೆ…