ಚಾಮರಾಜನಗರ

ಹನೂರು | ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಸಾರಿಗೆ ಬಸ್‌ : ತಪ್ಪಿದ ಭಾರಿ ಅನಾಹುತ

ಹನೂರು : ಪಟ್ಟಣದಿಂದ ಹೂಗ್ಯಂಗೆ ತೆರಳುತ್ತಿದ್ದ ಕೆ.ಎಸ್.ಆರ್.ಟಿ.ಸಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದಿರುವ ಘಟನೆ ರಾಮಪುರ ಪೊಲೀಸ್ ಠಾಣಾ ವ್ಯಾಪ್ತಿಯ ನಾಲ್ ರೋಡ್ ಸಮೀಪ ಜರುಗಿದೆ.

ಹನೂರು ಪಟ್ಟಣದಿಂದ ಅಜ್ಜಿಪುರ ರಾಮಾಪುರ ಮಾರ್ಗವಾಗಿ ನಾಲ್ ರೋಡ್ ಹೂಗ್ಯಂಗೆ ತೆರಳುತ್ತಿದ್ದ ಕೆಎಸ್ಆರ್ಟಿಸಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಅರಣ್ಯದ ತಡೆಗೋಡೆಗೆ ಹೊಡೆದು ಮರಕ್ಕೆ ಡಿಕ್ಕಿ ಹೊಡೆದಿದೆ ಪರಿಣಾಮ ಬಸ್ಸಿನಲ್ಲಿದ್ದ 39 ಮಂದಿ ಪ್ರಯಾಣಿಕರು ಪ್ರಾಣಪಾಯದಿಂದ ಪಾರಾಗಿದ್ದಾರೆ. ಬಸ್ಸಿನ ಮುಂಭಾಗದಲ್ಲಿ ಕುಳಿತಿದ್ದ ಕೆಲವು ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿದೆ. ಉಳಿದವರು ಪ್ರಾಣಪಾಯದಿಂದ ಪಾರಾಗಿದ್ದಾರೆ.

ತಪ್ಪಿದ ಬಾರಿ ಅನಾಹುತ
ಹನೂರು ಪಟ್ಟಣದಿಂದ ಹೂಗ್ಯಂಗೆ ತೆರಳುತ್ತಿದ್ದ ಬಸ್ಸಿನ ಸ್ಟೇರಿಂಗ್ ಲಾಕ್ ಆದ ಪರಿಣಾಮ ಬಸ್ ಚಾಲಕನ ನಿಯಂತ್ರಣಕ್ಕೆ ಸಿಕ್ಕಿಲ್ಲ ಈ ವೇಳೆ ಚಾಲಕ ರಸ್ತೆ ಭಾಗದಲ್ಲಿದ್ದ ತಡೆಗೋಡೆಗೆ ಡಿಕ್ಕಿ ಹೊಡೆದಿದ್ದಾರೆ ಆದರೆ ಅತಿ ವೇಗದಲ್ಲಿದ್ದ ಬಸ್ ತಡೆಗೋಡೆಯನ್ನು ದಾಟಿ ಅರಣ್ಯದಲ್ಲಿದ್ದ ಬೃಹತ್ ಮರಕ್ಕೆ ಡಿಕ್ಕಿ ಹೊಡೆದಿದೆ ಮರ ಇಲ್ಲದಿದ್ದರೆ ಬಸ್ ಪಲ್ಟಿಯಾಗಿ ದೊಡ್ಡ ಅನಾಹುತವೇ ಸಂಭವಿಸುತ್ತಿತ್ತು ಅದೃಷ್ಟವಶಾತ್ ಯಾವುದೇ ಅಹಿತಕರ ಘಟನೆ ನಡೆದಿಲ್ಲ.

ವಿಚಾರ ತಿಳಿಯುತ್ತಿದ್ದಂತೆ ರಾಮಾಪುರ ಪೊಲೀಸ್ ಠಾಣೆಯ ಸಿಬ್ಬಂದಿ ವರ್ಗದವರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಮುಂದಿನ ಕ್ರಮ ವಹಿಸಿದ್ದಾರೆ.

ಇನ್ನು ಹನೂರು ತಾಲೂಕಿನ ಗ್ರಾಮೀಣ ಭಾಗದಲ್ಲಿ ಸಂಚರಿಸುತ್ತಿರುವ ಕೆಎಸ್ಆರ್ಟಿಸಿ ಬಸ್ ಗಳನ್ನು ಸಮರ್ಪಕವಾಗಿ ನಿರ್ವಹಣೆ ಮಾಡದೇ ಇರುವುದರಿಂದ ಇಂತಹ ಘಟನೆಗಳು ಮರುಕಳಿಸುತ್ತಿವೆ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ. ಮುಂದಿನ ದಿನಗಳಲ್ಲಾದರು ಸಮರ್ಪಕ ನಿರ್ವಹಣೆಯೊಂದಿಗೆ ಗುಣಮಟ್ಟದ ಬಸ್ ಗಳನ್ನು ಸಂಚಾರಕ್ಕೆ ವ್ಯವಸ್ಥೆ ಮಾಡುವಂತೆ ನಾಗರಿಕರು ಮನವಿ ಮಾಡಿದ್ದಾರೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ‘ಪ್ರತಾಪ’ಕ್ಕೆ ಸವಾಲು ಈ ನೀಲಿ

‘ಪ್ರತಾಪ’ಕ್ಕೆ ಸವಾಲು ಈ ನೀಲಿ ಇದು ನಮ್ಮ ಸೂರು ಆಕಾಶದ ನೀಲಿ ಇದು ನನ್ನವ್ವ ಸುತ್ತಿಕೊಂಡ ಸೀರೆಯ ನೀಲಿ ನನಗೆ…

4 hours ago

ಓದುಗರ ಪತ್ರ: ಟೆಲಿಕಾಂ ಕಂಪೆನಿಗಳ ಹಗಲು ದರೋಡೆ ನಿಯಂತ್ರಿಸಿ

ಪ್ರಸ್ತುತ ಆಂಡ್ರಾಯ್ಡ ಮೊಬೈಲ್‌ನಿಂದಲೇ ದಿನನಿತ್ಯದ ಕೆಲಸಗಳು ಆರಂಭವಾಗಿ ಅವುಗಳಿಂದಲೇ ದಿನ ಮುಕ್ತಾಯ ಅನ್ನುವಷ್ಟರ ಮಟ್ಟಿಗೆ ಅನಿವಾರ್ಯತೆ ನಿರ್ಮಾಣವಾಗಿದೆ. ಮೊಬೈಲ್ ಇಲ್ಲದೆ…

4 hours ago

ಓದುಗರ ಪತ್ರ: ಸರ್ಕಾರಿ ಕಚೇರಿಗಳ ಅನಗತ್ಯ ಬಾಡಿಗೆ ವೆಚ್ಚಗಳನ್ನು ತಪ್ಪಿಸಿ

ಹೆಚ್. ಡಿ. ಕೋಟೆ ತಾಲ್ಲೂಕು ಕೇಂದ್ರ ಸ್ಥಳದಲ್ಲಿ ಕೆಲವು ಸರ್ಕಾರಿ ಇಲಾಖೆಗಳು ಹಾಗೂ ಹಾಸ್ಟೆಲ್‌ಗಳು ಖಾಸಗಿ ಕಟ್ಟಡಗಳಲ್ಲಿ ಕಾರ್ಯನಿರ್ವಣೆ ಮಾಡುತ್ತಿವೆ.…

4 hours ago

ರಂಗದ ಮೇಲೆ ಜಿನುಗಿದ ಜೀವಸೆಲೆ

ಜಿ.ಪಿ.ಬಸವರಾಜು ಯಾಂತ್ರಿಕ ಬದುಕಿನ ಹಲವು ಪ್ರಶ್ನೆಗಳಿಗೆ ಉತ್ತರಗಳನ್ನು ತೋರಿಸುವ ನಾಟಕ ‘ಅಮೃತಬಳ್ಳಿ ಕಷಾಯ’ ಮಾಯಾ ನಗರಿಯಂತೆ ಕಾಣುವ ಮುಂಬೈ ನಗರ…

4 hours ago

ಸಮವಸ್ತ್ರದ ಆತ್ಮಸಾಕ್ಷಿ ಮತ್ತು ಮೂರು ಪ್ರಜ್ಞೆಗಳು

ಎಸ್.ಎಲ್.ಚನ್ನಬಸವಣ್ಣ , ಉಪನಿರ್ದೇಶಕರು ಕರ್ನಾಟಕ ಪೊಲೀಸ್‌ ಅಕಾಡೆಮಿ ಮೈಸೂರು  ಸದಾ ಜಾಗೃತವಾಗಿರುವ ಸಮಯಪಾಲನೆಯ ವಿವೇಚನೆ ಕರ್ನಾಟಕ ಪೊಲೀಸ್ ಅಕಾಡೆಮಿ, ಮೈಸೂರು…

4 hours ago

ದಸರಾ ಕಾರ್ಯಕ್ರಮಕ್ಕೆ ಸವಾಲಾದ ಬಸ್ ಸೇವೆ

ಕೆ.ಬಿ.ರಮೇಶನಾಯಕ ಉತ್ತನಹಳ್ಳಿ ಗ್ರಾಮದ ಬಳಿ ಯುವ ದಸರಾ, ಸಾತಗಳ್ಳಿ ವಿಟಿಯು ಸಮೀಪ ಕಂಬಳ ಕ್ರೀಡೆ ಆಯೋಜನೆ; ವೀಕ್ಷಕರ ಬೇಡಿಕೆಗೆ ತಕ್ಕಂತೆ…

4 hours ago