ಹನೂರು: ತಾಲ್ಲೂಕಿನ ಕಾಂಚಳ್ಳಿ-ಬಸಪ್ಪನ ದೊಡ್ಡಿ ಮಾರ್ಗ ಮಧ್ಯದಲ್ಲಿ ಬರುವ ಪ್ರಕಾಶ ಎಂಬುವವರ ತೋಟದಲ್ಲಿ ಎರಡು ಚಿರತೆ ಮರಿಗಳು ಪ್ರತ್ಯಕ್ಷವಾಗಿರುವ ಘಟನೆ ನಡೆದಿದೆ.
ತಾಲ್ಲೂಕಿನ ಹನೂರು ಪಟ್ಟಣದ ನಿವಾಸಿ ಪ್ರಕಾಶ್ ಎಂಬುವರಿಗೆ ಸೇರಿದ ಬಸಪ್ಪನ ದೊಡ್ಡಿ ಗ್ರಾಮದ ಜಮೀನಿನಲ್ಲಿ ಕಬ್ಬು ಕಟಾವು ಮಾಡುವ ವೇಳೆ ಎರಡು ಚಿರತೆ ಮರಿಗಳು ಪ್ರತ್ಯಕ್ಷವಾಗಿದ್ದು, ರೈತರನ್ನು ಮತ್ತಷ್ಟು ಆತಂಕಕ್ಕೀಡು ಮಾಡಿದೆ.
ಇದನ್ನೂ ಓದಿ: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ: ಸಿಎಂ, ಡಿಸಿಎಂಗೆ ವಿಶೇಷ ಉಡುಗೊರೆ ರೆಡಿ
ಚಿರತೆ ಮರಿಗಳು ಪ್ರತ್ಯಕ್ಷವಾಗಿರುವ ಎಂಬ ಮಾಹಿತಿ ತಿಳಿಯುತ್ತಿದ್ದಂತೆ ಹನೂರು ಬಫರ್ ವಲಯದ ವಲಯ ಅರಣ್ಯಾಧಿಕಾರಿ ನಾಗರಾಜು ಮತ್ತು ಸಿಬ್ಬಂದಿ ವರ್ಗದವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಚಿರತೆ ಮರಿಗಳನ್ನು ಸುರಕ್ಷಿತವಾಗಿ ರಕ್ಷಣೆ ಮಾಡಿ ಬೇರೆ ಕಡೆ ಸ್ಥಳಾಂತರಿಸಲು ಕ್ರಮ ವಹಿಸಿದ್ದಾರೆ.
ಮರಿ ಚಿರತೆ ಜೊತೆಗೆ ತಾಯಿ ಸಹ ಇದೆ ಎಂದು ಕಬ್ಬು ಕಟಾವು ಮಾಡಿರುವ ಕಾರ್ಮಿಕರು ಹೇಳಿದ್ದು, ತಕ್ಷಣ ಚಿರತೆ ಸೆರೆ ಹಿಡಿಯಲು ಅರಣ್ಯ ಇಲಾಖೆಯ ಅಧಿಕಾರಿಗಳು ಕ್ರಮ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.





