Mysore
18
broken clouds

Social Media

ಶನಿವಾರ, 06 ಡಿಸೆಂಬರ್ 2025
Light
Dark

ಹನೂರು: ಏಕಕಾಲದಲ್ಲೇ ಕಾಣಿಸಿಕೊಂಡ ಎರಡು ಚಿರತೆಗಳು

ಹನೂರು: ತಾಲೂಕಿನ ಲೊಕ್ಕನಹಳ್ಳಿ ಹೋಬಳಿ ವ್ಯಾಪ್ತಿಯ ಮಲೆ ಮಹದೇಶ್ವರ ಅರಣ್ಯ ಪ್ರದೇಶ ವ್ಯಾಪ್ತಿಯ ಬಳಗುಡ್ಡ ಬಿಟ್ ವ್ಯಾಪ್ತಿಯಲ್ಲಿ ಏಕಕಾಲಕ್ಕೆ ಎರಡು ಚಿರತೆಗಳು ಕಾಣಿಸಿಕೊಂಡಿರುವ ಅಪರೂಪದ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಮಲೆ ಮಹದೇಶ್ವರ ವನ್ಯಜೀವಿಧಾಮದ ಪಿಜಿ ಪಾಳ್ಯ ಅರಣ್ಯಪ್ರದೇಶದಿಂದ ಅರಣ್ಯ ಸಮೀಪದ ಗುಡ್ಡೆಯಲ್ಲಿ ಕರಿ ಮತ್ತು ಅರಿಶಿಣ ಬಿಳಿ ಮಿಶ್ರಿತಾ ಬಣ್ಣದ ಎರಡು ಚಿರತೆ ಗುಡ್ಡದ ಮೇಲ್ಭಾಗದಲ್ಲಿ ಕುಳಿತಿರುವುದನ್ನು ಸ್ಥಳೀಯರು ಗಮನಿಸಿ ತಕ್ಷಣವೇ ಗಾಬರಿಯಾಗಿದ್ದಾರೆ. ಜೋಡಿಯಾಗಿ ಚಿರತೆಗಳು ಸ್ಪಷ್ಟವಾಗಿ ಕಾಣಿಸಿಕೊಂಡಿರುವುದು ಅಪರೂಪ ಎನ್ನಲಾಗಿದೆ.

ಇತ್ತೀಚೆಗೆ ಚಿರತೆಗಳು ನಿರಂತರವಾಗಿ ಕಾಣಿಸಿಕೊಳ್ಳುತ್ತಿದ್ದ ಸಾಕು ಪ್ರಾಣಿಗಳು ಹಾಗೂ ನಾಯಿಗಳ ಮೇಲೆ ನಿರಂತರವಾಗಿ ದಾಳಿ ಮಾಡುತ್ತಿದ್ದು ರೈತರಲ್ಲಿ ಆತಂಕ ಮನೆ ಮಾಡಿದೆ. ಈ ನಿಟ್ಟಿನಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಕಾಡುಪ್ರಾಣಿಗಳ ಹಾವಳಿಯನ್ನು ನಿಯಂತ್ರಿಸುವಂತೆ ರೈತರು ಮನವಿ ಮಾಡಿದ್ದಾರೆ.

ಸಾರ್ವಜನಿಕರಿಗೆ ಯಾವುದೇ ರೀತಿಯ ಅಪಾಯ ಉಂಟಾಗುವ ಮುನ್ನವೇ ಅರಣ್ಯ ಇಲಾಖೆ ಕ್ರಮ ಕೈಗೊಳ್ಳಬೇಕು ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ.

ಪಿ ಜಿ ಪಾಳ್ಯ ವಲಯ ವ್ಯಾಪ್ತಿಯಲ್ಲಿ ಕರಿ ಚಿರತೆ ಕಾಣಿಸಿಕೊಂಡಿರಲಿಲ್ಲ ಇದೀಗ ಕರಿ ಚಿರತೆ ಸಾರ್ವಜನಿಕವಾಗಿ ಕಾಣಿಸಿಕೊಂಡಿದೆ. ಆಗೊಮ್ಮೆ ಹೀಗೊಮ್ಮೆ ದಾಟ್ ಕಾಡು, ಬೂದಿಪಡಗ, ಬೋರೆದೊಡ್ಡಿ ವ್ಯಾಪ್ತಿಯಲ್ಲಿ ಅರಣ್ಯ ಇಲಾಖೆಯ ಅಧಿಕಾರಿಗಳು ಹಾಗೂ ಸ್ಥಳೀಯ ನಿವಾಸಿಗಳು ನೋಡಿರುವ ಬಗ್ಗೆ ಮಾಹಿತಿ ನೀಡಿದ್ದರು. ಆದರೆ ಅಧಿಕೃತವಾಗಿ ಕರಿ ಚಿರತೆ ಇರುವ ಬಗ್ಗೆ ಯಾವುದೇ ಸಾಕ್ಷಾಧಾರಗಳು ಇರಲಿಲ್ಲ. ಶನಿವಾರ ಮಧ್ಯಾಹ್ನ ಆಂಡಿ ಪಾಳ್ಯ ಬೀಟ್ ಅರಣ್ಯ ಪ್ರದೇಶದಲ್ಲಿ ಗಂಡು ಕರಿ ಚಿರತೆ ಕಾಣಿಸಿಕೊಂಡಿದೆ. ಇದುವರೆಗೂ ಸಫಾರಿಯಲ್ಲಿಯೂ ಕಾಣಿಸಿಕೊಂಡಿರಲಿಲ್ಲ ಎಂದು ವಲಯ ಅರಣ್ಯಾಧಿಕಾರಿ ಪುಟ್ಟರಾಜು ಆಂದೋಲನಕ್ಕೆ ಮಾಹಿತಿ ನೀಡಿದರು.

Tags:
error: Content is protected !!