ಚಾಮರಾಜನಗರ: ಜಿಲ್ಲೆಯ ಹನೂರು ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಯುಗಾದಿ ಜಾತ್ರೆಯ ಸಡಗರ ಮನೆ ಮಾಡಿದೆ.
ಈ ಜಿಲ್ಲೆಯಲ್ಲಿ ಪ್ರಸಿದ್ಧ ಧಾರ್ಮಿಕ ಯಾತ್ರಾ ಸ್ಥಳವಾದ ಹನೂರು ತಾಲ್ಲೂಕಿನ ಮಾದೇಶ್ವರ ಸ್ವಾಮಿ ಸನ್ನಿಧಿಯಲ್ಲಿ ಯುಗಾದಿ ಜಾತ್ರಾ ಮಹೋತ್ಸವವು ಇಂದಿನಿಂದ 30ರವರೆಗೆ ನಡೆಯಲಿದೆ. ಹಾಗಾಗಿ ಜಾತ್ರಾ ಮಹೋತ್ಸವದ ಪ್ರಯುಕ್ತ ರಾಜ್ಯದ ನಾನಾ ಭಾಗಗಳಿಂದ, ನೆರೆಯ ತಮಿಳುನಾಡಿನಿಂದ ಕಾಲ್ನಡಿಗೆಯಲ್ಲಿ ಸಾವಿರಾರು ಭಕ್ತರು ಮಾದಪ್ಪನ ಸನ್ನಿಧಿಗೆ ಬರುತ್ತಿದ್ದಾರೆ.
ಇನ್ನು ಈ ಸಂಬಂಧ ರಂಗಮಂದಿರದ ಆವರಣ ಹಾಗೂ ಅಕ್ಕಪಕ್ಕದಲ್ಲಿ ಉಳಿಯಲು ವ್ಯವಸ್ಥೆ ಕಲ್ಪಿಸಲಾಗಿದೆ. ಗುರುವಾರ ಜಾತ್ರೆ ಪ್ರಾರಂಭವಾಗಿದ್ದು, ಶುಕ್ರವಾರ ಸ್ವಾಮಿಗೆ ಎಣ್ಣೆ ಮಜ್ಜನ ಸೇವೆ ಜರುಗಲಿದೆ.





