ಚಾಮರಾಜನಗರ

ಹನೂರು: ಬಿಜೆಪಿ ಮುಖಂಡ ನಿಶಾಂತ್‌ಗೆ ಉಪ್ಪಾರ ಸಮುದಾಯದ ಬೆಂಬಲ

ಹನೂರು: ಇಲ್ಲಿನ ವಿಧಾನಸಭಾ ಕ್ಷೇತ್ರದ ಬಿಜೆಪಿ ಯುವ ಮುಖಂಡ ನಿಶಾಂತ್ ರವರಿಗೆ ಯಾವುದೇ ಅಧಿಕಾರದಲ್ಲಿ ಇಲ್ಲದಿದ್ದರೂ ಕ್ಷೇತ್ರ ವ್ಯಾಪ್ತಿಯಲ್ಲಿ ಮಾಡುತ್ತಿರುವ ಸಮಾಜ ಸೇವೆ, ಮತದಾರರ ಕಷ್ಟ ಸುಖಗಳಿಗೆ ಸ್ಪಂದಿಸುತ್ತಿರುವ ಹಿನ್ನೆಲೆ ಮುಂದಿನ ದಿನಗಳಲ್ಲಿ ಅವರಿಗೆ ಬೆಂಬಲ ನೀಡಲಿದ್ದೇವೆ ಎಂದು ಉಪ್ಪಾರ ಸಮುದಾಯದ ಮುಖಂಡ ಚಿಕ್ಕನಂಜ ಶೆಟ್ಟಿ ತಿಳಿಸಿದರು.

ಕ್ಷೇತ್ರ ವ್ಯಾಪ್ತಿಯ ಮಧುವನಹಳ್ಳಿ ಗ್ರಾಮದಲ್ಲಿ ಮಾಧ್ಯಮದವರ ಮಾತನಾಡಿದ ಅವರು ಕಳೆದ ಐದು ವರ್ಷಗಳಿಂದ ಯುವ ಮುಖಂಡ ನಿಶಾಂತ್ ರವರು ಸಚಿವರು, ಶಾಸಕರಾಗಿ ಮಾಡುವ ಕೆಲಸವನ್ನು ಅಧಿಕಾರವಿಲ್ಲದೆ ಕ್ಷೇತ್ರದ ಜನರಿಗೆ ಉತ್ತಮ ಕೆಲಸ ಕಾರ್ಯಗಳನ್ನು ಮಾಡುತ್ತಿದ್ದಾರೆ. ಇವರಿಗೆ ಕೆಟ್ಟ ಹೆಸರು ತರಲು ಕಾಣದ ಕೈಗಳು ಜಿನಕನಹಳ್ಳಿ ಗ್ರಾಮದಲ್ಲಿ ನಿಶಾಂತ್ ರವರಿಗೆ ತರಾಟೆಗೆ ತೆಗೆದುಕೊಂಡಿದ್ದಾರೆ ಎಂದು ಯಾವುದೋ ವಿಡಿಯೋ ಕಳುಹಿಸಿ ಮಾಧ್ಯಮದಲ್ಲಿ ಬರುವಂತೆ ಮಾಡಿದ್ದಾರೆ. ಇದು ಸತ್ಯಕ್ಕೆ ದೂರವಾದ ವಿಚಾರ ನಿಶಾಂತ್ ರವರು ಪ್ರತಿಯೊಂದು ಹಳ್ಳಿಗೂ ತಮ್ಮದೇ ಆದ ಕೈಲಾದ ಸಹಾಯ ಮಾಡಿದ್ದಾರೆ. ಅಂಗವಿಕಲರು ಮಠಮಾನ್ಯಗಳು, ದೇವಸ್ಥಾನಗಳು ಸಮುದಾಯ ಭವನಗಳು ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಅನುಕೂಲ ಕಲ್ಪಿಸಿದ್ದಾರೆ ಇವರ ಸೇವೆಯನ್ನು ಮತ್ತಷ್ಟು ಪಡೆಯಬೇಕಾದರೆ ಇವರನ್ನು ಮುಂದಿನ ದಿನಗಳಲ್ಲಿ ನಮ್ಮ ಜನಪ್ರತಿನಿಧಿಯನ್ನಾಗಿ ಮಾಡಲು ಶ್ರಮಿಸುತ್ತೇವೆ ಎಂದರು.

ಇನ್ನು ಪಕ್ಷದ ಮುಖಂಡ ವೃಷಭೇಂದ್ರ ಎಂಬುವವರು ಇವರಿಗೆ ಕೆಟ್ಟ ಹೆಸರು ತರಲು ಮಾಧ್ಯಮಕ್ಕೆ ವಿಡಿಯೋ ಕಳುಹಿಸಿದ್ದಾರೆ. ಇವರಿಗೆ ಮುಂದಿನ ದಿನಗಳಲ್ಲಿ ತಕ್ಕ ಪಾಠ ಕಲಿಸುತ್ತೇವೆ ಎಂದರು.

ಮಧುವನಹಳ್ಳಿ ಗ್ರಾಮದ ಮಹದೇವಸ್ವಾಮಿ ಮಾತನಾಡಿ ಯುವ ಮುಖಂಡ ನಿಶಾಂತ್ ರವರ ಜನಪ್ರಿಯತೆಯನ್ನು ಸಹಿಸದ ಕೆಲವು ಕಿಡಿಗೇಡಿಗಳು ಅವರ ಹೆಸರಿಗೆ ಕೆಟ್ಟ ಹೆಸರು ತರಲು ಇನ್ನಿಲ್ಲದ ಪ್ರಯತ್ನ ಮಾಡುತ್ತಿದ್ದಾರೆ. ಮಧುವನಹಳ್ಳಿ ಗ್ರಾಮಕ್ಕೆ 28 ಲಕ್ಷಕ್ಕೂ ಹೆಚ್ಚು ಆರ್ಥಿಕವಾಗಿ ಸಹಾಯ ಮಾಡಿದ್ದಾರೆ. ಅವರಿಗೆ ಋಣಿಯಾಗಿ ಇರಬೇಕಾಗಿರುವುದು ನಮ್ಮ ಕರ್ತವ್ಯ ಮುಂದಿನ ದಿನಗಳಲ್ಲಿ ಆ ದೇವರು ಅವರಿಗೆ ಮತ್ತಷ್ಟು ಅಧಿಕಾರ ಕರುಣಿಸಲಿ, ರಾಜಕೀಯದಲ್ಲಿ ಸಣ್ಣಪುಟ್ಟ ವೈಷಮ್ಯ, ಟೀಕೆ ಟಿಪ್ಪಣಿಗಳು ಬರುವುದು ಸಹಜ ಇದನ್ನೆಲ್ಲವನ್ನು ಮೆಟ್ಟಿ ನಿಂತರೆ ಮಾತ್ರ ನಿಜವಾದ ಜನನಾಯಕನಾಗಲು ಸಾಧ್ಯ ನಿಮ್ಮ ಬೆಂಬಲಕ್ಕೆ ನಾವಿದ್ದೇವೆ ಯಾವುದಕ್ಕೂ ಹೆದರುವುದು ಬೇಡ ನೀವು ನಿಮ್ಮ ಸೇವೆಯನ್ನು ಮುಂದುವರೆಸಿ ಎಂದು ಧೈರ್ಯ ತುಂಬಿದರು.

ಈ ವೇಳೆ ಮಧುವನಹಳ್ಳಿ ಗ್ರಾಮದ ವಿವಿಧ ಸಮುದಾಯದ ಮುಖಂಡರುಗಳಾದ ಕಪ್ಪಣಶೆಟ್ಟರು ಮಾಸ್ಟರ್, ಕೆಂಪಶೆಟ್ರು, ಉತ್ತಮ್, ಮಹೇಶ್, ರಾಚಪ್ಪಾಜಿ, ನಿಂಗರಾಜು, ರಂಗಸ್ವಾಮಿ, ಆರ್.ಮಹದೇವಸ್ವಾಮಿ, ಆಟೋ ಚಾಲಕರ ಸಂಘದ ಅಧ್ಯಕ್ಷ ರಾಜೇಶ್, ಮಹದೇವಸ್ವಾಮಿ, ದೊಡ್ಡಸಿದ್ದಶೆಟ್ಟಿ ಸೇರಿದಂತೆ ಇನ್ನಿತರರು ಹಾಜರಿದ್ದರು.

ಮಹಾದೇಶ್ ಎಂ ಗೌಡ

ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕು ಹನೂರು ಪಟ್ಟಣದವನಾದ ನಾನು ಪಟ್ಟಣದ ಕ್ರಿಸ್ತರಾಜ ಪ್ರೌಢಶಾಲೆಯಲ್ಲಿ 10ನೇ ತರಗತಿ ವಿದ್ಯಾಭ್ಯಾಸ ಮಾಡಿದ್ದು ಕಳೆದ 11 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕೆಲಸ ಮಾಡುತ್ತಿದ್ದೇನೆ. ರಾಜ್ಯಮಟ್ಟದ ವಿಶ್ವವಾಣಿ, ಜಿಲ್ಲಾ ಮಟ್ಟದ ಸುದ್ದಿ ಬುದ್ಧಿ ಪತ್ರಿಕೆಯಲ್ಲಿ ನಾಲ್ಕು ವರ್ಷ ತಾಲೂಕು ವರದಿಗಾರನಾಗಿ ಕರ್ತವ್ಯ ನಿರ್ವಹಿಸಿದ್ದೇನೆ. ಕಳೆದ ಹತ್ತು ವರ್ಷಗಳಿಂದ ಆಂದೋಲನ ದಿನಪತ್ರಿಕೆಯಲ್ಲಿ ಹನೂರು ತಾಲೂಕು ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ.

Recent Posts

ಕಾಂಗ್ರೆಸ್‌ನವರು ನಕಲಿ ಹೋರಾಟಗಾರರು: ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌

ಬೆಳಗಾವಿ: ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್‌ ಅವರ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಆಕ್ಷೇಪಾರ್ಹ ಹೇಳಿಕೆ ಖಂಡಿಸಿ ಕಾಂಗ್ರೆಸ್‌…

23 mins ago

ಮೈಸೂರು ಮುಡಾ ಕೇಸ್:‌ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೆ ವಾಗ್ದಾಳಿ ನಡೆಸಿದ ಎಂ.ಲಕ್ಷ್ಮಣ್‌

ಮೈಸೂರು: ಸ್ನೇಹಮಯಿ ಕೃಷ್ಣಗೆ ಫಂಡಿಂಗ್‌ ಮಾಡುತ್ತಿರುವವರು ಯಾರು ಅನ್ನೋದು ಗೊತ್ತಿದೆ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್‌ ಕಿಡಿಕಾರಿದ್ದಾರೆ. ಮುಡಾ ಪ್ರಕರಣಕ್ಕೆ…

27 mins ago

ಬಿಜೆಪಿ ಸಂಸದರಿಂದ ನನ್ನ ಮೇಲೆ ಹಲ್ಲೆ ಆಗಿದೆ: ಸ್ಪೀಕರ್‌ಗೆ ಪತ್ರ ಬರೆದ ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ಸಂಸತ್‌ ಭವನದ ಸಂಕೀರ್ಣದಲ್ಲಿ ಬಿಜೆಪಿ ಸಂಸದರು ನನ್ನನ್ನು ತಳ್ಳಿದ್ದಾರೆ ಎಂದು ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ…

47 mins ago

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ವಿರುದ್ಧ ಅಸಂವಿಧಾನಿಕ ಪದ ಬಳಸಿದ ಸಿ.ಟಿ.ರವಿ?

ಬೆಳಗಾವಿ: ಕೇಂದ್ರ ಗ್ರಹ ಸಚಿವ ಅಮಿತ್‌ ಶಾ ಅವರು ಡಾ.ಬಿ.ಆರ್‌. ಅಂಬೇಡ್ಕರ್‌ ಕುರಿತು ನೀಡಿರುವ ಹೇಳಿಕೆ ವಿರುದ್ಧ ದೇಶಾದ್ಯಂತ ವ್ಯಾಪಕ…

1 hour ago

ಅಮಿತ್ ಶಾ ಹೇಳಿಕೆ ಖಂಡಿಸಿ ವಿಧಾನಸಭೆಯಲ್ಲೂ ಪ್ರತಿಭಟನೆ

ಬೆಳಗಾವಿ: ಸಂಸತ್ತಿನಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್‌ ಕುರಿತು ಕೇಂದ್ರ ಗೃಹ ಸಚಿವ ಅಮಿತ್‌ ಶಾ ನೀಡಿರುವ ಹೇಳಿಕೆಗೆ ಸಂಬಂಧಿಸಿದಂತೆ ಕರ್ನಾಟಕ…

2 hours ago

ಅಕ್ರಮ ವಾಸಿಗಳ ಪತ್ತೆಗೆ ಸರ್ಕಾರದಿಂದ ಹೊಸ ಕ್ರಮ: ಸಚಿವ ಜಿ.ಪರಮೇಶ್ವರ್‌ ಮಾಹಿತಿ

ಬೆಳಗಾವಿ: ನಕಲಿ ದಾಖಲೆ ಸೃಷ್ಟಿಸಿ ಅಕ್ರಮವಾಗಿ ರಾಜ್ಯದಲ್ಲಿ ನೆಲೆಸಿರುವ ಪಾಕಿಸ್ತಾನ ಹಾಗೂ ಬಾಂಗ್ಲಾದೇಶದ ಪ್ರಜೆಗಳನ್ನು ಬಂಧಿಸಲಾಗಿದೆ ಎಂದು ಗೃಹ ಸಚಿವ…

2 hours ago