Mysore
26
broken clouds

Social Media

ಸೋಮವಾರ, 10 ಆಗಸ್ಟ್ 2026
Light
Dark

ಹನೂರು | ಕಾಡು ಹಂದಿ ದಾಳಿ ; ರೈತನಿಗೆ ಗಂಭೀರ ಗಾಯ

ಹನೂರು : ತಾಲ್ಲೂಕಿನ ದಿನ್ನಳ್ಳಿ ರಸ್ತೆಯ ಸಮೀಪದ ಜಮೀನೊಂದರಲ್ಲಿ ಕಾಡು ಹಂದಿ ದಾಳಿ ನಡೆಸಿ ರೈತನಿಗೆ ಗಂಭೀರ ಗಾಯಗೊಳಿಸಿರುವ ಘಟನೆ ಗುರುವಾರ ನಡೆದಿದೆ.

ರಾಮಾಪುರ ಸಮೀಪದ ಮಂಚಾಪುರ ನಿವಾಸಿ ಪಳನಿ ಗಾಯಗೊಂಡವರು.

ಪಳನಿ ಎಂಬವರು ಗುರುವಾರ ಬೆಳಿಗ್ಗೆ ತಮ್ಮ ತೋಟದ ಕೆಲಸಕ್ಕೆ ತೆರಳುತ್ತಿದ್ದ ವೇಳೆ ಕಾಡು ಹಂದಿ ದಾಳಿ ನಡೆಸಿದೆ. ದಾಳಿಯಿಂದ ಅವರು ತೀವ್ರವಾಗಿ ಗಾಯಗೊಂಡಿದ್ದಾರೆ.

ಘಟನೆಯ ಮಾಹಿತಿ ತಿಳಿದ ತಕ್ಷಣ ಅರಣ್ಯ ಇಲಾಖೆಯ ರಾಮಾಪುರ ವಲಯ ಅಧಿಕಾರಿ ಮಾದೇಶ್ ಹಾಗೂ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಗಾಯಾಳುವನ್ನು ಕಾಮಗೆರೆಯ ಹೋಲಿ ಕ್ರಾಸ್ ಆಸ್ಪತ್ರೆಗೆ ದಾಖಲಿಸಿದರು. ಬಳಿಕ ಹೆಚ್ಚಿನ ಚಿಕಿತ್ಸೆಗೆ ಮೈಸೂರು ನಗರದ ಆಸ್ಪತ್ರೆಗೆ ರವಾನಿಸಲಾಗಿದೆ.

ಈ ಭಾಗದಲ್ಲಿ ಕಾಡು ಪ್ರಾಣಿಗಳ ಹಾವಳಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರೈತರಲ್ಲಿ ಆತಂಕ ಹೆಚ್ಚಿದ್ದು, ಅರಣ್ಯ ಇಲಾಖೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ.

Tags:
error: Content is protected !!