ಹನೂರು: ಒಕ್ಕಣೆ ಮಾಡಲು ಕಟಾವು ಮಾಡಿ ಕಣದಲ್ಲಿ ಹಾಕಿದ್ದ ಮೆಕ್ಕೆಜೋಳವನ್ನು ಕಾಡಾನೆಗಳ ಹಿಂಡು ತಿಂದು ನಾಶ ಮಾಡಿರುವ ಘಟನೆ ಪಿ.ಜಿ ಪಾಳ್ಯ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೊರಮನ ಕತ್ತರಿ ಗ್ರಾಮದಲ್ಲಿ ನಡೆದಿದೆ.
ರಾಬರ್ಟ್ ಎಂಬವವರ 3 ಎಕರೆ ಜಮೀನನ್ನು ಮಹದೇವಸ್ವಾಮಿ ಎಂಬುವವರು ಗುತ್ತಿಗೆ ಪಡೆದು ಉತ್ತಮವಾಗಿ ಜೋಳದ ಫಸಲನ್ನು ಬೆಳೆದಿದ್ದರು. ಕಳೆದ ಎರಡು ದಿನಗಳಿಂದ ಮಳೆಯಿದ್ದ ಹಿನ್ನೆಲೆ ಜೋಳದ ಫಸಲನ್ನು ಮನೆಯ ಮುಂಭಾಗ ಮೆದೆ ಹಾಕಿದ್ದರು. ಆದರೆ ಸಮೀಪದ ಅರಣ್ಯ ಪ್ರದೇಶದಿಂದ ಮೇವನ್ನರಸಿ ಆಗಮಿಸಿದ ಕಾಡಾನೆಗಳ ಹಿಂಡು ಒಕ್ಕಣೆ ಕಣದಲ್ಲಿದ್ದ ಸುಮಾರು ೧೦ ಕ್ವಿಂಟಾಲ್ ಗೂ ಹೆಚ್ಚು ಜೋಳವನ್ನು ತಿಂದು ನಾಶ ಮಾಡಿದೆ. ನೊಂದ ರೈತ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ಅರಣ್ಯ ಇಲಾಖೆ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ.
ಕಳೆದ ಹಲವಾರು ದಿನಗಳಿಂದ ಕಾಡುಪ್ರಾಣಿಗಳ ಹಾವಳಿ ಹೆಚ್ಚಾಗಿದ್ದು ಕಡಿವಾಣ ಹಾಕುವಂತೆ ಎಷ್ಟೇ ಮನವಿ ಮಾಡಿದ್ದರು ಇದುವರೆಗೂ ಪ್ರಯೋಜನವಾಗಿಲ್ಲ. ಇನ್ನೂ ಮುಂದಾದರೂ ಕಾಡುಪ್ರಾಣಿಗಳ ಉಪಟಳಕ್ಕೆ ಕಡಿವಾಣ ಹಾಕುವಂತೆ ರೈತರು ಮನವಿ ಮಾಡಿದ್ದಾರೆ.
ಕಳೆದ ಮೂರು ತಿಂಗಳಿನಿಂದ ಕಷ್ಟಪಟ್ಟು 3 ಎಕರೆ ಜಮೀನಿನಲ್ಲಿ ಜೋಳ ಬೆಳೆಯಲಾಗಿತ್ತು. ಮಳೆ ಇದ್ದ ಹಿನ್ನೆಲೆ ಜೋಳ ಬಿಡಿಸಿರಲಿಲ್ಲ. ಕಾಡಾನೆಗಳ ಹಿಂಡು ಜೋಳದ ಫಸಲು ತಿಂದು ನಾಶ ಮಾಡಿ ಸುಮಾರು ಒಂದು ಲಕ್ಷಕ್ಕೆ ಹೆಚ್ಚು ನಷ್ಟ ಉಂಟು ಮಾಡಿದೆ. ಸಂಬಂಧ ಪಟ್ಟ ಅರಣ್ಯ ಇಲಾಖೆ ಅಧಿಕಾರಿಗಳು ಇಲಾಖೆಯಿಂದ ಸೂಕ್ತ ಪರಿಹಾರ ಕೊಡಿಸಬೇಕು. ಮಹದೇವಸ್ವಾಮಿ ನೊಂದ ರೈತ
ಬೆಂಗಳೂರು: ರಾಜ್ಯದ ಎಲ್ಲಾ ಮಾದರಿ ಬೋರ್ಡ್‌ಗಳು ಕಡ್ಡಾಯವಾಗಿ ಕನ್ನಡ ಭಾಷೆ ಕಲಿಸಬೇಕು. ಇಲ್ಲದೇ ಹೋದರೆ ಅಂತಹ ಶಾಲೆಗಳ ಮೇಲೆ ಕ್ರಮ…
ಹನೂರು: ತಾಲೂಕಿನ ಮಿಣ್ಯಂ ಗ್ರಾಮದಿಂದ ಹನೂರಿಗೆ ಆಗಮಿಸುತ್ತಿದ್ದ ಪ್ರಯಾಣಿಕರಿಗೆ ಅರಣ್ಯ ವ್ಯಾಪ್ತಿಯಲ್ಲಿ ಹುಲಿರಾಯ ದರ್ಶನ ನೀಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ…
ಬೆಳಗಾವಿ: ಆದಷ್ಟು ಬೇಗ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸಲಾಗುತ್ತದೆ ಎಂದು ಸಚಿವ ರಹೀಂ ಖಾನ್ ತಿಳಿಸಿದರು. ವಿಧಾನಪರಿಷತ್ ಕಲಾಪದಲ್ಲಿ…
ಮಂಡ್ಯ: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರ ಹುಟ್ಟುಹಬ್ಬವನ್ನು ಮಂಡ್ಯ ಜಿಲ್ಲೆಯ ಜೆಡಿಎಸ್ ಕಾರ್ಯಕರ್ತರು ಅದ್ಧೂರಿಯಾಗಿ ಆಚರಣೆ ಮಾಡಿದರು. ಮದ್ದೂರಿನಲ್ಲಿ ಮಾಜಿ…
ಬೆಳಗಾವಿ: ಕೋಳಿ ಮೊಟ್ಟೆ ಸೇವಿಸಿದರೆ ಕ್ಯಾನ್ಸರ್ ಬರುವ ವದಂತಿ ಎಲ್ಲೆಡೆ ಹಬ್ಬಿರುವ ಹಿನ್ನೆಲೆಯಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಪ್ರತಿಕ್ರಿಯೆ…
ಮಳವಳ್ಳಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಮಳವಳ್ಳಿಯಲ್ಲಿ ನಡೆಯಲಿರುವ ಸುತ್ತೂರಿನ ಆದಿ ಜಗದ್ಗುರು ಶ್ರೀ ಶಿವರಾತ್ರಿ ಶಿವ ಯೋಗಿಗಳರವರ 1066ನೇ ಜಯಂತಿ…