ಹನೂರು: ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳಿ ಮಾದಪ್ಪನ ದರ್ಶನ ಪಡೆದು ವಾಪಸ್ ಬರುತ್ತಿದ್ದ ವೇಳೆ ಅಪರಿಚಿತ ವಾಹನವೊಂದು ಬೈಕ್‌ಗೆ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆಯ ಹನೂರಿನಲ್ಲಿ ನಡೆದಿದೆ.
ಬೆಂಗಳೂರು ಮೂಲದ ಲಗ್ಗೆರೆ ನಿವಾಸಿಗಳಾದ ಗಣೇಶ್ ಹಾಗೂ ನಾಗರಾಜು ಶುಕ್ರವಾರ ಮುಂಜಾನೆ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ವೇಳೆ ಹನೂರಿನಿಂದ ಕೊಳ್ಳೇಗಾಲಕ್ಕೆ ಹೋಗುತ್ತಿದ್ದ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದಿದೆ. ಪರಿಣಾಮ ದ್ವಿಚಕ್ರ ವಾಹನ ಸವಾರ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಹಿಂಬದಿಯಲ್ಲಿ ಕುಳಿತಿದ್ದ ನಾಗರಾಜು ತೀವ್ರ ಗಾಯಗೊಂಡಿದ್ದರಿಂದ 108 ಆಂಬುಲೆನ್ಸ್ ಮೂಲಕ ಕೊಳ್ಳೇಗಾಲ ಉಪ ವಿಭಾಗ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಅಪರಿಚಿತ ವಾಹನ ಪತ್ತೆಗೆ ಕಾರ್ಯಚರಣೆ: ದ್ವಿಚಕ್ರ ವಾಹನ ಸವಾರರಿಗೆ ಡಿಕ್ಕಿ ಹೊಡೆದು ಪರಾರಿಯಾಗಿರುವ ಅಪರಿಚಿತ ವಾಹನದ ಪತ್ತೆಗೆ ಇನ್ಸ್‌ಪೆಕ್ಟರ್ ಆನಂದಮೂರ್ತಿ ಪಟ್ಟಣದ ಮುಖ್ಯ ರಸ್ತೆಯಲ್ಲಿರುವ ಸಿಸಿ ಕ್ಯಾಮೆರಾಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ. ಈಗಾಗಲೇ ಅನುಮಾನದ ಮೇಲೆ ಒಂದು ಗೂಡ್ಸ್ ಬುಲೆರೋ ವಾಹನವನ್ನು ವಶಕ್ಕೆ ಪಡೆದಿದ್ದು ವಿಚಾರಣೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ. ಈ ಸಂಬಂಧ ಹನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಹಾದೇಶ್ ಎಂ.ಗೌಡ ೫ ದಿನಗಳ ಮಹೋತ್ಸವದಲ್ಲಿ ಲಾಡು ಮಾರಾಟದಲ್ಲೇ ದಾಖಲೆ; ಕಳೆದ ವರ್ಷಕ್ಕಿಂತ ಆದಾಯ ಹೆಚ್ಚಳ ಹನೂರು: ಮಲೆ ಮಹದೇಶ್ವರ…
ಕೆ.ಬಿ.ರಮೇಶನಾಯಕ ಜುಲೈನಲ್ಲಿ ಅಂತಾರಾಷ್ಟ್ರೀಯ ಸಹಕಾರ ದಿನ ಆಚರಣೆಗೆ ಸೂಚನೆ ಸಪ್ತಾಹದ ಶೀರ್ಷಿಕೆಯೇ ಬದಲು; ನ.೧೪ರಂದು ನೆಹರು ಜನ್ಮದಿನ ಮರೆಸಲು ಯತ್ನ?…
ನವೀನ್ ಡಿಸೋಜ ಮಿಷನ್ ಶಕ್ತಿ ಯೋಜನೆಯಡಿ ಕೊಡಗಿನಲ್ಲಿ ೭೨ ಅರಿವು ಕಾರ್ಯಾಗಾರ; ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಜಾಗೃತಿ ಮಡಿಕೇರಿ: ಮಹಿಳೆಯರ…
ಯಳಂದೂರು: ಚಾಮರಾಜನಗರ ಜಿಲ್ಲೆ ಯಳಂದೂರು ತಾಲ್ಲೂಕಿನ ಪ್ರಸಿದ್ಧ ಯಾತ್ರಾ ಸ್ಥಳ ಬಿಳಿಗಿರಿರಂಗನ ಬೆಟ್ಟದ ಶ್ರೀ ಬಿಳಿಗಿರಿ ರಂಗನಾಥಸ್ವಾಮಿ ದೇವಸ್ಥಾನದಲ್ಲಿ ಗುರುವಾರ…
ಬೆಂಗಳೂರು: ಪೆಟ್ರೋಲ್‌ನಲ್ಲಿ ಮಿತಿ ಮೀರಿದ ಎಥೆನಾಲ್ ಮಿಶ್ರಣದ ಆರೋಪಕ್ಕೆ ಸಂಬಂಧಿಸಿದಂತೆ ಪರೀಕ್ಷೆಗೆ ಕಳುಹಿಸಿದ್ದ 63 ಸ್ಯಾಂಪಲ್‌ಗಳ ಫಲಿತಾಂಶ ನೀಡಿಲ್ಲ ಎಂದು…
ಯಳಂದೂರು: ಚಾಮರಾಜನಗರ ಜಿಲ್ಲೆಯ ಪವಿತ್ರ ಯಾತ್ರಾ ಕ್ಷೇತ್ರ ಬಿಳಿಗಿರಿರಂಗನ ಬೆಟ್ಟದ ಶ್ರೀ ತಿರುವೆಂಗಳನಾಥ ಸ್ವಾಮಿ ದೇವಾಲಯಕ್ಕೂ ಯಳಂದೂರು ಮೂಲದ ವರದೇ…