ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು
ಹನೂರು: ತಾಲ್ಲೂಕಿನ ಪ್ರತಿ ಗ್ರಾಮಗಳಿಗೂ ಕೆಎಸ್‌ಆರ್‌ಟಿಸಿ ಸೌಲಭ್ಯ ಕಲ್ಪಿಸಲು ತಾಲೂಕು ಕೇಂದ್ರದಲ್ಲಿ ಒಂದು ತಿಂಗಳು ಒಳಗೆ ಬಸ್ ಡಿಪೋ ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಲಾಗುವುದು ಎಂದು ಶಾಸಕ ಎಂ.ಆರ್.ಮಂಜುನಾಥ್ ತಿಳಿಸಿದರು.
ಹನೂರು ತಾಲೂಕಿನ ಒಡಕೆ ಹಳ್ಳ ಗ್ರಾಮದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಹನೂರು ತಾಲೂಕು ಕೇಂದ್ರದಲ್ಲಿ ಬಸ್ ಡಿಪೋ ಇಲ್ಲದೆ ಇರುವುದರಿಂದ ಶಾಲಾ ಕಾಲೇಜು ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ. ಈಗಾಗಲೇ ಬಸ್ ಡಿಪೋ ನಿರ್ಮಾಣ ಮಾಡಲು ನಿವೇಶನ ಗುರುತಿಸಲಾಗಿದೆ. ನಿಗಮಕ್ಕೆ ಹಸ್ತಾಂತರ ಮಾಡಲಾಗಿದೆ. ಟೆಂಡರ್ ಪ್ರಕ್ರಿಯೆ ಪ್ರಗತಿಯಲ್ಲಿದ್ದು ಪೂರ್ಣಗೊಂಡ ನಂತರ ಬಸ್ ಡಿಪೋ ನಿರ್ಮಾಣಕ್ಕೆ ಚಾಲನೆ ನೀಡಲಾಗುವುದು ಎಂದರು.
ಹನೂರು ತಾಲ್ಲೂಕು ಕೇಂದ್ರದಲ್ಲಿ ಪ್ರಜಾಸೌಧ ಟೆಂಡರ್ ಪ್ರಕ್ರಿಯೆ ಅಂತಿಮ ಹಂತದಲ್ಲಿದೆ. ಪೂರ್ಣಗೊಂಡ ನಂತರ ಕಾಮಗಾರಿಗೆ ಚಾಲನೆ ನೀಡಲಾಗುವುದು. ಪಟ್ಟಣ ಪಂಚಾಯಿತಿ ತಾಲೂಕು ಪಂಚಾಯಿತಿ ಕಚೇರಿ ನಿರ್ಮಾಣ ಮಾಡಲು ಈಗಾಗಲೇ ಕ್ರಮವಹಿಸಲಾಗಿದ್ದು ನಿವೇಶನ ಗುರುತಿಸಲಾಗಿದೆ ಅನುದಾನ ಬಿಡುಗಡೆಯಾದ ನಂತರ ಕಟ್ಟಡ ನಿರ್ಮಾಣ ಮಾಡಲಾಗುವುದು ಎಂದು ಹೇಳಿದರು.
ಶ್ರೀರಂಗಪಟ್ಟಣ: ವಿದ್ಯುತ್ ಸ್ಪರ್ಶದಿಂದ ಕರ್ತವ್ಯ ನಿರತ ಲೈನ್‌ಮ್ಯಾನ್ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಹೆಬ್ಬಾಡಿ ಗ್ರಾಮದಲ್ಲಿ ನಡೆದಿದೆ.…
ಬೆಂಗಳೂರು: ರಾಜ್ಯದ ಹಲವೆಡೆ ಇಂದು ಧಾರಾಕಾರ ಮಳೆಯಾಗಿದ್ದು, ಭಾರೀ ಅವಾಂತರ ಸೃಷ್ಟಿ ಮಾಡಿದೆ. ಚಿಕ್ಕಮಗಳೂರು, ಶಿವಮೊಗ್ಗ ಸೇರಿದಂತೆ ರಾಜ್ಯದ ಹಲವೆಡೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಾರ್ಟಳ್ಳಿ, ಕೌದಳ್ಳಿ, ಶೆಟ್ಟಳ್ಳಿ, ಕುರಟ್ಟಿ ಹೊಸೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ…
ಮೈಸೂರು: ಅರಮನೆಗಳ ನಗರಿ ಮೈಸೂರಿನಲ್ಲಿ ಅವೈಜ್ಞಾನಿಕವಾಗಿ ಟ್ರಾಫಿಕ್ ಸಿಗ್ನಲ್ ಅಳವಡಿಸಲಾಗಿದೆ ಎಂದು ಸಾರ್ವಜನಿಕರು ಕಿಡಿಕಾರುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ಮಹದೇವಪ್ಪ…
ಕೋಲ್ಕತ್ತಾ: ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ದಿನಗಣನೆ ಶುರುವಾಗಿರುವ ಹಿನ್ನೆಲೆಯಲ್ಲಿ ಸಿಎಂ ಮಮತಾ ಬ್ಯಾನರ್ಜಿ ವಿರುದ್ಧ ಕೇಂದ್ರ ಗೃಹ ಸಚಿವ…
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಗಂಧರ್ಬಾಲ್ ಜಿಲ್ಲೆಯ ಝೋಜಿಲಾ ಪಾಸ್ ಬಳಿಯ ಝೀರೋ ಪಾಯಿಂಟ್‌ನಲ್ಲಿ ಸಂಭವಿಸಿದ ಭೀಕರ ಹಿಮಪಾತದಲ್ಲಿ ಹಲವಾರು…