ಹನೂರು: ಗಂಡು ಜಿಂಕೆಯನ್ನು ಬೇಟೆಯಾಡಿ ಮಾಂಸವನ್ನಾಗಿ ಪರಿವರ್ತಿಸುವ ವೇಳೆ ಇಬ್ಬರು ಆರೋಪಿಗಳನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿರುವ ಘಟನೆ ಕೌದಳ್ಳಿ ವನ್ಯಜೀವಿ ವಲಯದಲ್ಲಿ ಜರುಗಿದೆ.
ತಾಲ್ಲೂಕಿನ ಹೊಸಳ್ಳಿ ಗ್ರಾಮದ ತಿಪ್ಪಬೋವಿ (55) ಇ ವಿಲೇಜ್ ಗ್ರಾಮದ ಸಿದ್ದರಾಜು (45) ಬಂಧಿತ ಆರೋಪಿಗಳಾಗಿದ್ದಾರೆ.
ಘಟನೆಯ ವಿವರ : ಕಾವೇರಿ ವನ್ಯಜೀವಿ ಉಪ ವಿಭಾಗ ಕೌದಳ್ಳಿ ವನ್ಯಜೀವಿ ವಲಯ ವ್ಯಾಪ್ತಿಯ ಚೆನ್ನೂರು ಗಸ್ತಿನ ಸಿಪಿಟಿ -44 ಮೂಲೆನಜರು ಅರಣ್ಯ ಪ್ರದೇಶ ವ್ಯಾಪ್ತಿಯಲ್ಲಿ ಜಿಂಕೆ ಬೇಟೆಯಾಡುತ್ತಿರುವ ಬಗ್ಗೆ ದೊರೆತ ಖಚಿತ ಮಾಹಿತಿ ಮೇರೆಗೆ ಕಾವೇರಿ ವನ್ಯಜೀವಿ ಉಪ ವಿಭಾಗ ಉಪ ಅರಣ್ಯ ಸಂರಕ್ಷಣಾಧಿಕಾರಿಗಳಾದ ನಂದೀಶ್ ಎಸ್ ಹಾಗೂ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಅಂಕರಾಜು ರವರ ಮಾರ್ಗದರ್ಶನದಲ್ಲಿ ವಲಯ ಅರಣ್ಯಾಧಿಕಾರಿ ಲೋಕೇಶ್ ಚೌಹಾಣ್ ಹಾಗೂ ಸಿಬ್ಬಂದಿಗಳು ದಾಳಿ ನಡೆಸಿ ಜಿಂಕೆ ಸಾಯಿಸಲು ಬಳಸಿದ್ದ ಆಯುಧಗಳು, ಜಿಂಕೆ ಚರ್ಮ, ಮಾಂಸ ಹಾಗೂ ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದು ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ ಪ್ರಕರಣ ದಾಖಲಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ದಾಳಿಯಲ್ಲಿ ಉಪ ವಲಯ ಅರಣ್ಯಾಧಿಕಾರಿ ಬಿ ಅನಂತರಾಮು, ಅರಣ್ಯ ರಕ್ಷಕರಾದ ಮಲ್ಲಿಕಾರ್ಜುನ್ ಭೀಮಪ್ಪ ಹಂಗರಗಿ, ಮಹೇಂದ್ರ ಎಸ್ ಎನ್, ಅಭಿಷೇಕ್ ಹಾಗೂ ಕ್ಷೇಮಾಭಿವೃದ್ಧಿ ನೌಕರ ನೀಲಶೆಟ್ಟಿ ಪಾಲ್ಗೊಂಡಿದ್ದರು.
ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…
ರಾಜ್ಯದ ೮೦೫ ಪೆಟ್ರೋಲ್ ಬಂಕ್‌ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್‌ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…
ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…
ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…
ಸತೀಶ್ ತಿಪಟೂರು ಕರ್ನಾಟಕದ ಯಾವುದೇ ಭಾಗದಲ್ಲಿ ಜಂಬೆ ಮೇಷ್ಟ್ರ ಹಿರಿ - ಕಿರಿಯ ವಿದ್ಯಾರ್ಥಿಗಳು ಮೂರ್ನಾಲ್ಕು ಜನ ಒಂದೆಡೆ ಸೇರಿದರೆಂದರೆ…
ಪ್ರತಿ ಭಾರತೀಯರ ಎದೆ ಬಡಿತದ ಚೇತನ ಗಾಂಧೀಜಿ: ಕೈಯಲ್ಲೊಂದು ಕೋಲು ಹಿಡಿದು, ದುಂಡು ಕನ್ನಡಕ ಧರಿಸಿ, ಸತ್ಯ, ಅಹಿಂಸೆಯ ಅಸದಿಂದ…