ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು
ಹನೂರು: ತಮಿಳುನಾಡಿಗೆ ಭತ್ತ ತುಂಬಿಕೊಂಡು ಹೋಗುತ್ತಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿರುವ ಘಟನೆ ಹನೂರು ಪೊಲೀಸ್ ಠಾಣೆ ವ್ಯಾಪ್ತಿಯ ಎಲ್ಲೇಮಾಳ ಮುಖ್ಯ ರಸ್ತೆಯಲ್ಲಿ ಗುರುವಾರ ಮಧ್ಯಾಹ್ನ ಜರುಗಿದೆ .
ಕೊಳ್ಳೇಗಾಲ ತಾಲ್ಲೂಕಿನ ಜಾಗೇರಿ ಗ್ರಾಮದ ನಿವಾಸಿ ಪುನೀತ್ ರಾಜ್ (32) ಚಾಲಕ ಗಾಯಗೊಂಡವರಾಗಿದ್ದಾರೆ.
ಘಟನೆಯ ವಿವರ: ಮಂಡ್ಯ ಜಿಲ್ಲೆಯ ಕಿರುಗಾವಲಿನಿಂದ ತಮಿಳುನಾಡಿಗೆ ಭತ್ತ ತುಂಬಿಕೊಂಡು ಹೋಗುತ್ತಿದ್ದಾಗ ಹನೂರು ಪಟ್ಟಣ ಹೊರವಲಯದ ಎಲ್ಲೇಮಾಳ- ಮಲೆ ಮಹದೇಶ್ವರ ಬೆಟ್ಟ ಮುಖ್ಯ ರಸ್ತೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿಯಾಗಿ ಭತ್ತದ ಮೂಟೆಗಳೆಲ್ಲ ಚೆಲ್ಲಾಪಿಲ್ಲಿಯಾಗಿ, ಲಾರಿ ಮುಂಭಾಗ ಬೆಂಕಿ ಹೊತ್ತಿಕೊಂಡಿದೆ. ವಾಹನ ಸವಾರರು ಅಗ್ನಿಶಾಮಕ ಠಾಣೆ ಸಿಬ್ಬಂದಿಗೆ ಮಾಹಿತಿ ನೀಡಿದ್ದಾರೆ. ತಕ್ಷಣ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ಠಾಣೆ ಸಿಬ್ಬಂದಿ ಬೆಂಕಿಯನ್ನು ನಂದಿಸಿ ದೊಡ್ಡ ಅನಾಹುತವನ್ನು ತಪ್ಪಿಸಿದ್ದಾರೆ. ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಸುದ್ದಿ ತಿಳಿಯುತ್ತಿದ್ದಂತೆ ಹನೂರು ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಆನಂದಮೂರ್ತಿ, ಎ.ಎಸ್ಐ ಶಿವಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ. ಈ ಸಂಬಂಧ ಹನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಐತಿಹಾಸಿಕ ಸಂಗತಿ! ಸರ್ಕಾರದ ನಿರ್ದೇಶನದ ಮೇರೆಗೆ ಬೆಳಗಾವಿ ನಗರಪಾಲಿಕೆ ‘ಗಡಿ ವಿಷಯದಲ್ಲಿ ಮಹಾಜನ್ ವರದಿಯೇ ಅಂತಿಮ’ಎಂಬ ನಿರ್ಣಯ ಅಂಗೀಕರಿಸಿರುವುದು ಐತಿಹಾಸಿಕ…
ಟ್ರಾಫಿಕ್ ನಿಯಮ ಉಲ್ಲಂಘಿಸಿ ದಂಡ ಪಾವತಿಸದೆ ಬಾಕಿ ಉಳಿಸಿಕೊಂಡಿರುವವರಿಂದ ಹಣ ವಸೂಲಿ ಮಾಡಲು, ಆ ದಂಡದ ಮೊತ್ತವನ್ನು ಅವರ ಮನೆ…
ತನ್ನ ಪ್ರಾಣವನ್ನೇ ಒತ್ತೆಯಿಟ್ಟು ದುಬೈನಿಂದ ಇಸ್ರೇಲ್‌ನ ಅವೀವ್‌ಗೆ ತೆರಳುತ್ತಿದ್ದ -ದುಬೈ ವಿಮಾನ ಹೈಜಾಕ್ ತಪ್ಪಿಸಿದ ಭಾರತೀಯ ಪೈಲಟ್ ಕ್ಯಾಪ್ಟನ್ ಸ್ಮಿತ್…
ಡಾ . ಚೇತನ ಗುರುರಾಜು, ಮುಖ್ಯ ಶಿಕ್ಷಕಿ, ಅರಿವು ವಿದ್ಯಾಸಂಸ್ಥೆ, ಮೈಸೂರು ಸಾಮಾಜಿಕ ಮಾಧ್ಯಮಗಳ ಬಲೆಗೆ ಸಿಲುಕಿವೆ ಹಲವು ದೇಶಗಳು…
ಸ್ವಾವಲಂಬನೆಯ ಸಂಕೇತ ಮಹಾತ್ಮ ಗಾಂಧೀಜಿ ಮಹಾತ್ಮ ಗಾಂಧೀಜಿ ಅವರು ಭಾರತದ ಸ್ವಾತಂತ್ರ್ಯ ಹೋರಾಟದ ಮಹಾನ್ ನಾಯಕ ಹಾಗೂ ರಾಷ್ಟ್ರಪಿತ ಎಂದು…
ಪರಶುರಾಮ್, ನಿರ್ದೇಶಕರು, ಒಡನಾಡಿ ಸೇವಾ ಸಂಸ್ಥೆ ಗಾಂಧಿ ವಿಚಾರಗಳನ್ನು ಸಂವಾದದ ಮೂಲಕ ಮುನ್ನಡೆಸಲು ಸಾಧ್ಯವೇ? ಅಥವಾ ಅನುಸರಿಸಲು ಸಾಧ್ಯವಾಗದಿರುವ ನಡೆಯನ್ನು…