Mysore
19
overcast clouds

Social Media

ಶನಿವಾರ, 10 ಜನವರಿ 2026
Light
Dark

ಹನೂರು: ಕಾಡಾನೆ ದಾಳಿಗೆ ಸಿಲುಕಿ ರೈತನ ಕಾಲು ಮುರಿತ

ಮಹಾದೇಶ್‌ ಎಂ ಗೌಡ

ಹನೂರು: ತನ್ನ ಜಮೀನಿನಲ್ಲಿ ಬೆಳೆಯಲಾಗಿದ್ದ ಜೋಳದ ಫಸಲು ಕಾಯುತ್ತಿದ್ದ ರೈತನ ಮೇಲೆ ಕಾಡಾನೆ ದಾಳಿ ನಡೆಸಿದ ಪರಿಣಾಮ ರೈತನ ಕಾಲು ಮುರಿದಿರುವ ಘಟನೆ ಜರುಗಿದೆ.

ಹನೂರು ತಾಲೂಕಿನ ಹೂಗ್ಯಂ ಗ್ರಾಮ ಪಂಚಾಯತ್ ವ್ಯಾಪ್ತಿಯ ಜಲ್ಲಿಪಾಳ್ಯ ಗ್ರಾಮದ ರೈತ ಚಿನ್ನಪ್ಪ ಆನೆ ದಾಳಿಗೆ ಒಳಗಾಗಿ ತಮಿಳುನಾಡಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಚೇತರಿಸಿಕೊಳ್ಳುತ್ತಿದ್ದಾರೆ.

ಘಟನೆ ವಿವರ: ರೈತ ಚಿನ್ನಪ್ಪ ತನ್ನ ಜಮೀನಿನಲ್ಲಿ ಬೆಳೆದಿರುವ ಜೋಳದ ಫಸಲನ್ನು ಎಂದಿನಂತೆ ಕಾವಲು ಕಾಯಲು ತೆರಳಿದ್ದ. ಭಾನುವಾರ ತಡರಾತ್ರಿ ಜಮೀನಿಗೆ ಲಗ್ಗೆ ಇಟ್ಟ ಕಾಡಾನೆಯೊಂದು ಜೋಳದ ಫಸಲು ನಾಶ ಮಾಡಿ ಕಾವಲು ಕಾಯುತ್ತಿದ್ದ ರೈತನ ಮೇಲೆ ಏಕಾಏಕಿ ದಾಳಿ ನಡೆಸಿದೆ. ಪರಿಣಾಮ ರೈತನ ಎಡ ಕಾಲು ಮುರಿದಿದೆ. ಕಿರಾಡಿಕೊಂಡು ಕಷ್ಟಪಟ್ಟು ದೂರ ಸರಿದು ಪ್ರಾಣ ಉಳಿಸಿಕೊಂಡಿದ್ದಾರೆ. ಸ್ಥಳೀಯರ ಸಹಕಾರದಿಂದ ಕುಟುಂಬಸ್ಥರು ತಮಿಳುನಾಡಿನ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ಮಾಡಿದ್ದಾರೆ.

ಮಾಹಿತಿ ತಿಳಿದ ತಕ್ಷಣ ಕರ್ನಾಟಕ ರಾಜ್ಯ ರೈತ ಸಂಘದ ತಾಲೂಕು ಅಧ್ಯಕ್ಷ ಅಮ್ಜದ್ ಖಾನ್ ಹಾಗೂ ರೈತ ಮುಖಂಡರುಗಳು ಆಸ್ಪತ್ರೆಗೆ ಭೇಟಿ ನೀಡಿ ರೈತರಿಗೆ ಸಾಂತ್ವನ ತಿಳಿಸಿ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ.

ಘಟನೆಯ ಮಾಹಿತಿ ಪಡೆದ ಅರಣ್ಯ ಇಲಾಖೆಯ ವಲಯ ಅರಣ್ಯಾಧಿಕಾರಿ ಜಿತೇಂದ್ರ ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುವಿನ ಆರೋಗ್ಯ ವಿಚಾರಿಸಿದ್ದಾರೆ.

ಈ ವೇಳೆ ಸ್ಥಳೀಯ ರೈತ ಮುಖಂಡರು ಮಾತನಾಡಿ, ಕಳೆದ ಒಂದು ತಿಂಗಳ ಅವಧಿಯಲ್ಲಿ ಈ ಪ್ರದೇಶದಲ್ಲಿ ಕಾಡಾನೆ ದಾಳಿಯಿಂದ ಒಬ್ಬರು ಮೃತಪಟ್ಟಿದ್ದು, ಮೂರಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಕೂಡಲೇ ಆನೆಗಳ ಚಲನವಲನದ ಮಾಹಿತಿ ಪಡೆದುಕೊಂಡು ಕಾಡು ಪ್ರಾಣಿಗಳ ಹಾವಳಿ ತಡೆಗಟ್ಟುವ ನಿಟ್ಟಿನಲ್ಲಿ ಶಾಶ್ವತ ಪರಿಹಾರ ಕ್ರಮ ಕೈಗೊಳ್ಳಬೇಕು, ಆನೆ ಕಾರಿಡಾರ್ ವ್ಯವಸ್ಥೆ ಜಾರಿಗೆ ತರಬೇಕು ಎಂದು ಒತ್ತಾಯಿಸಿದರು.

 

Tags:
error: Content is protected !!