ಮಹಾದೇಶ್ ಎಂ ಗೌಡ
ಹನೂರು: ತನ್ನ ಜಮೀನಿನಲ್ಲಿ ಬೆಳೆಯಲಾಗಿದ್ದ ಜೋಳದ ಫಸಲು ಕಾಯುತ್ತಿದ್ದ ರೈತನ ಮೇಲೆ ಕಾಡಾನೆ ದಾಳಿ ನಡೆಸಿದ ಪರಿಣಾಮ ರೈತನ ಕಾಲು ಮುರಿದಿರುವ ಘಟನೆ ಜರುಗಿದೆ.
ಹನೂರು ತಾಲೂಕಿನ ಹೂಗ್ಯಂ ಗ್ರಾಮ ಪಂಚಾಯತ್ ವ್ಯಾಪ್ತಿಯ ಜಲ್ಲಿಪಾಳ್ಯ ಗ್ರಾಮದ ರೈತ ಚಿನ್ನಪ್ಪ ಆನೆ ದಾಳಿಗೆ ಒಳಗಾಗಿ ತಮಿಳುನಾಡಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಚೇತರಿಸಿಕೊಳ್ಳುತ್ತಿದ್ದಾರೆ.
ಘಟನೆ ವಿವರ: ರೈತ ಚಿನ್ನಪ್ಪ ತನ್ನ ಜಮೀನಿನಲ್ಲಿ ಬೆಳೆದಿರುವ ಜೋಳದ ಫಸಲನ್ನು ಎಂದಿನಂತೆ ಕಾವಲು ಕಾಯಲು ತೆರಳಿದ್ದ. ಭಾನುವಾರ ತಡರಾತ್ರಿ ಜಮೀನಿಗೆ ಲಗ್ಗೆ ಇಟ್ಟ ಕಾಡಾನೆಯೊಂದು ಜೋಳದ ಫಸಲು ನಾಶ ಮಾಡಿ ಕಾವಲು ಕಾಯುತ್ತಿದ್ದ ರೈತನ ಮೇಲೆ ಏಕಾಏಕಿ ದಾಳಿ ನಡೆಸಿದೆ. ಪರಿಣಾಮ ರೈತನ ಎಡ ಕಾಲು ಮುರಿದಿದೆ. ಕಿರಾಡಿಕೊಂಡು ಕಷ್ಟಪಟ್ಟು ದೂರ ಸರಿದು ಪ್ರಾಣ ಉಳಿಸಿಕೊಂಡಿದ್ದಾರೆ. ಸ್ಥಳೀಯರ ಸಹಕಾರದಿಂದ ಕುಟುಂಬಸ್ಥರು ತಮಿಳುನಾಡಿನ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ಮಾಡಿದ್ದಾರೆ.
ಮಾಹಿತಿ ತಿಳಿದ ತಕ್ಷಣ ಕರ್ನಾಟಕ ರಾಜ್ಯ ರೈತ ಸಂಘದ ತಾಲೂಕು ಅಧ್ಯಕ್ಷ ಅಮ್ಜದ್ ಖಾನ್ ಹಾಗೂ ರೈತ ಮುಖಂಡರುಗಳು ಆಸ್ಪತ್ರೆಗೆ ಭೇಟಿ ನೀಡಿ ರೈತರಿಗೆ ಸಾಂತ್ವನ ತಿಳಿಸಿ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ.
ಘಟನೆಯ ಮಾಹಿತಿ ಪಡೆದ ಅರಣ್ಯ ಇಲಾಖೆಯ ವಲಯ ಅರಣ್ಯಾಧಿಕಾರಿ ಜಿತೇಂದ್ರ ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುವಿನ ಆರೋಗ್ಯ ವಿಚಾರಿಸಿದ್ದಾರೆ.
ಈ ವೇಳೆ ಸ್ಥಳೀಯ ರೈತ ಮುಖಂಡರು ಮಾತನಾಡಿ, ಕಳೆದ ಒಂದು ತಿಂಗಳ ಅವಧಿಯಲ್ಲಿ ಈ ಪ್ರದೇಶದಲ್ಲಿ ಕಾಡಾನೆ ದಾಳಿಯಿಂದ ಒಬ್ಬರು ಮೃತಪಟ್ಟಿದ್ದು, ಮೂರಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಕೂಡಲೇ ಆನೆಗಳ ಚಲನವಲನದ ಮಾಹಿತಿ ಪಡೆದುಕೊಂಡು ಕಾಡು ಪ್ರಾಣಿಗಳ ಹಾವಳಿ ತಡೆಗಟ್ಟುವ ನಿಟ್ಟಿನಲ್ಲಿ ಶಾಶ್ವತ ಪರಿಹಾರ ಕ್ರಮ ಕೈಗೊಳ್ಳಬೇಕು, ಆನೆ ಕಾರಿಡಾರ್ ವ್ಯವಸ್ಥೆ ಜಾರಿಗೆ ತರಬೇಕು ಎಂದು ಒತ್ತಾಯಿಸಿದರು.
ಮೈಸೂರು : ಕರ್ನಾಟಕ ವಸ್ತುಪ್ರದರ್ಶನ ಪ್ರಾಧಿಕಾರದ ವತಿಯಿಂದ ಭಾರತದಲ್ಲೇ ಪ್ರಥಮವಾಗಿ ನಿರ್ಮಿಸಲಾಗಿರುವ ರಾಜೀವ್ ಗಾಂಧಿ ಡ್ರಾಗನ್ ಪಾಂಡ್‌ನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ…
ಹೊಸದಿಲ್ಲಿ : 2020ರ ದೆಹಲಿ ಗಲಭೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಜೆಎನ್‍ಯು ಮಾಜಿ ವಿದ್ಯಾರ್ಥಿ ಉಮರ್ ಖಾಲಿದ್ ಮತ್ತು ಶಾರ್ಜೀಲ್ ಇಮಾಮ್…
ಬೆಂಗಳೂರು : ಸಿ.ಎಂ.ಸಿದ್ದರಾಮಯ್ಯ ಅವರು ದೇವರಾಜು ಅರಸು ದಾಖಲೆ ಮುರಿಯುತ್ತಾರಂತೆ. ಯಾವ ಭಾಗ್ಯಕ್ಕೆ ಇದೆಲ್ಲಾ? ರಾಜ್ಯದ ಪರಿಸ್ಥಿತಿ ನೋಡಿದರೆ ಈ…
ಬೆಂಗಳೂರು : ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ತೀವ್ರ ವಾಕ್ಸಮರಕ್ಕೆ ಕಾರಣವಾಗಿರುವ ಬೆಂಗಳೂರು ನಗರದ ಕೋಗಿಲು ಲೇಔಟ್‍ನಲ್ಲಿ ವಲಸಿಗರು ಅನಧಿಕೃತವಾಗಿ…
ಬೆಂಗಳೂರು : ಚಿನ್ನದ ಹುಡುಗ ಜಾವೆಲಿನ್ ಥ್ರೋವರ್ ನೀರಜ್ ಚೋಪ್ರಾ ಮತ್ತು JSW ಸ್ಪೋರ್ಟ್ಸ್ ಸೋಮವಾರ ತಮ್ಮ ಅಧಿಕೃತ ಪಾಲುದಾರಿಕೆಯನ್ನು…
ಮೈಸೂರು : ಶಿಕ್ಷಣವಿಲ್ಲದಿದ್ದರೆ ಮನುಷ್ಯರಾಗಿ, ಸ್ವಾಭಿಮಾನಿಗಳಾಗಿ ಬದುಕಲು ಸಾಧ್ಯವಿಲ್ಲ. ಸಮಾಜದಲ್ಲಿ ಬದಲಾವಣೆ ತರಬೇಕಾದರೆ ವಿದ್ಯಾವಂತರಾಗಲೇಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.…