ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದ ರಂಗಮಂದಿರದ ಸಮೀಪ ಆನಧಿಕೃತವಾಗಿ ಮಳಿಗೆ ನಡೆಸುತ್ತಿದ್ದ ವ್ಯಾಪಾರಸ್ಥರನ್ನು ಪ್ರಾಧಿಕಾರದ ಕಾರ್ಯದರ್ಶಿ ಎಈ ರಘು ಹಾಗೂ ಸಿಬ್ಬಂದಿ ಇಂದು ಬೆಳಗ್ಗೆ ಕಾರ್ಯಚರಣೆ ಕೈಗೊಂಡು ತೆರವುಗೊಳಿಸುವ ಮೂಲಕ ಸಾರ್ವಜನಿಕರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.
ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದ ರಂಗಮಂದಿರ ಸಮೀಪ 40 ಮಳಿಗೆಗಳಿದ್ದು, 18 ಜನರು ನಿಯಮಾನುಸಾರ ಟೆಂಡರ್ ಪಡೆದು ಲಕ್ಷಾಂತರ ರೂಪಾಯಿ ಬಾಡಿಗೆ ಕಟ್ಟಿ ಅಂಗಡಿ ನಡೆಸುತ್ತಿದ್ದರು. ಆದರೆ 21 ಮಳಿಗೆದಾರರು ಕಳೆದ ಎಂಟು ವರ್ಷಗಳಿಂದ ಅನಧಿಕೃತವಾಗಿ ಮಳಿಗೆಗಳನ್ನು ನಡೆಸುತ್ತಾ ಪ್ರಾಧಿಕಾರದ ನೂರಾರು ಕೋಟಿ ಆದಾಯಕ್ಕೆ ಕುತ್ತು ತಂದಿದ್ದರು.
ಆದರೆ ಇದುವರೆಗೂ ಕರ್ತವ್ಯ ನಿರ್ವಹಿಸಿದ್ದ ಕಾರ್ಯದರ್ಶಿಗಳು ತೆರವು ಮಾಡಲು ಮನಸ್ಸು ಮಾಡಿರಲಿಲ್ಲ. ಈ ಬಗ್ಗೆ ಸಾರ್ವಜನಿಕ ವಲಯದಲ್ಲಿ ಚರ್ಚೆಗೂ ಗ್ರಾಸವಾಗಿತ್ತು. ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಅಭಿವೃದ್ಧಿ ಪ್ರಾಧಿಕಾರಕ್ಕೆ ನಷ್ಟವಾಗುತ್ತಿರುವ ಬಗ್ಗೆ ಪ್ರಾಧಿಕಾರದ ಕಾರ್ಯದರ್ಶಿ ಎಈ ರಘುರವರು ಸಂಬಂಧಪಟ್ಟ ಅಧಿಕಾರಿಗಳ ಜೊತೆ ಸುದೀರ್ಘ ಚರ್ಚೆ ಮಾಡಿ ಹೈಕೋರ್ಟ್‌ನಲ್ಲಿ ಕೆವಿಟ್ ಹಾಕಿ ಹಲವು ರಾಜಕೀಯ ಒತ್ತಡದ ನಡುವೆಯೂ ಕಳೆದ ವಾರ 21 ಅಂಗಡಿಗಳಿಗೆ ಟೆಂಡರ್ ಪ್ರಕ್ರಿಯೆ ಮುಗಿಸಿದ್ದರು.
ಟೆಂಡರ್ ಪ್ರಕ್ರಿಯೆ ಮುಗಿದಿದ್ದರೂ ಅನಧಿಕೃತವಾಗಿಟ್ಟುಕೊಂಡಿದ್ದ ಮಳಿಗೆದಾರರು ಅಂಗಡಿಗಳನ್ನು ತೆರವು ಮಾಡದೆ ಇದ್ದಿದ್ದರಿಂದ ಇಂದು ಬೆಳಗ್ಗೆ ಪೊಲೀಸರು, ಪ್ರಾಧಿಕಾರದ ಅಧಿಕಾರಿಗಳು, ಸಿಬ್ಬಂದಿ ವರ್ಗದವರ ಸಹಯೋಗದಲ್ಲಿ ಅಂಗಡಿಗಳನ್ನು ತೆರವುಗೊಳಿಸಿದ್ದಾರೆ. ಇದರಿಂದ ಕಳೆದ ಎಂಟು ವರ್ಷಗಳಿಂದ ನಡೆಯುತ್ತಿದ್ದ ಹಗ್ಗ ಜಗ್ಗಾಟಕ್ಕೆ ತೆರೆ ಬಿದ್ದಿದೆ.
ಕಳೆದ ಹಲವಾರು ವರ್ಷಗಳಿಂದ 21 ಮಳಿಗೆದಾರರು ಅನಧಿಕೃತವಾಗಿ ವ್ಯಾಪಾರ ಮಾಡುತ್ತಿದ್ದರು. ಇದರಿಂದ ಪ್ರಾಧಿಕಾರಕ್ಕೆ ನಷ್ಟ ಉಂಟಾಗಿದ್ದು, ಈ ಸಂಬಂಧ ಇದ್ದ ಸಮಸ್ಯೆಯನ್ನು ಬಗೆಹರಿಸಿ ಕಳೆದ ವಾರ 21 ಅಂಗಡಿಗಳನ್ನು 11 ತಿಂಗಳ ಅವಧಿಗೆ ೨.೩೪ ಕೋಟಿಗೆ ಹರಾಜು ಮಾಡಲಾಗಿದೆ. ಪ್ರಾಧಿಕಾರದ ಆಸ್ತಿ ಹಾಗೂ ಆದಾಯವನ್ನು ಸಂರಕ್ಷಿಸುವುದು ನಮ್ಮ ಜವಾಬ್ದಾರಿ ಅದನ್ನು ನಿಭಾಯಿಸಿದ್ದೇನೆ ಎಂದು ಎಈ ರಘು ಸಂತಸ ವ್ಯಕ್ತಪಡಿಸಿದ್ದಾರೆ.
ಮೈಸೂರು : ಮೈಸೂರು ಮಹಾನಗರಪಾಲಿಕೆ 2026-27ನೇ ಹಣಕಾಸು ವರ್ಷಕ್ಕೆ ಜಾರಿಗೊಳಿಸಲು ಘೋಷಿಸಿದ್ದ ಮೋಟಾರ್ ವಾಹನ ಸೆಸ್ ಅನ್ನು ರದ್ದುಗೊಳಿಸಿದೆ. ಇತ್ತೀಚಿಗೆ…
ಬೆಂಗಳೂರು : ಕರ್ನಾಟಕದ ಲೋಕಾಯುಕ್ತ ನಿವೃತ್ತ ನ್ಯಾಯಮೂರ್ತಿ ಎನ್.ಸಂತೋಷ್ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರೆ ಉಂಟಾಗಿ ಕುಸಿದು ಬಿದ್ದಿದ್ದು, ಆಸ್ಪತ್ರೆಗೆ…
ಮೈಸೂರು : ಬಟ್ಟೆ ಬ್ಯಾಗ್ ಖರೀದಿಯಲ್ಲಿ ಆಗಿರುವ ಅವ್ಯವಹಾರದ ಬಗ್ಗೆ ತನಿಖೆ ನಡೆಸಲು ಹೈಕೋರ್ಟ್ ಅನುಮತಿ ನೀಡಿರುವ ಕುರಿತು ಪ್ರತಿಕ್ರಿಯಿಸಿದ…
ಬೆಂಗಳೂರು : ಮಹೇಂದ್ರ ಸಿಂಗ್ ಧೋನಿ ಅವರು ಚೆನ್ನೈ ಸೂಪರ್ ಕಿಂಗ್ಸ್ ಅಭಿಮಾನಿಗಳಲ್ಲಿ ಹೊಸ ಆಶಾಕಿರಣ ಮೂಡಿಸಿದ್ದಾರೆ. ಸ್ನಾಯು ಸೆಳೆತದಿಂದ…
ಟೆಹ್ರಾನ್ : ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ಕಳೆದ 24 ಗಂಟೆಗಳಲ್ಲಿ ಅಮೆರಿಕದ ಎರಡು F-35 ಸ್ಟೆಲ್ತ್…
ಬಾಗಲಕೋಟೆ : ಸೋಮಣ್ಣ ಬಿಜೆಪಿಯಲ್ಲಿ ಕೆಲಸವಿಲ್ಲದಿರುವ ಮಂತ್ರಿ. ಅವರಿಗೆ ಯಾವ ಕಡತವೂ ಹೋಗುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದರು.…