ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು
ಹನೂರು: ತಾಲೂಕಿನ ಮಲೆಮಹದೇಶ್ವರ ಬೆಟ್ಟದಲ್ಲಿನ ಇಂಡಿಗನತ್ತದಲ್ಲಿ ಚಿರತೆ ದಾಳಿಗೆ ಬಾಲಕ ಬಲಿಯಾದ ಪ್ರಕರಣ ಸಂಬಂಧ ಅರಣ್ಯ ಇಲಾಖೆಯು ನಿರಂತರ ಕಾರ್ಯಾಚರಣೆ ನಡೆಸುತ್ತಿದೆ.
ಮೂರನೇ ದಿನವೂ ಚಿರತೆ ಸೆರೆ ಕಾರ್ಯಾಚರಣೆ ಮುಂದುವರೆಸಿದ್ದು, ಚಿರತೆ ಸೆರೆ ಕಾರ್ಯಪಡೆ ಸೇರಿದಂತೆ 60ಕ್ಕೂ ಹೆಚ್ಚು ಸಿಬ್ಬಂದಿಯಿಂದ ಶೋಧಕಾರ್ಯ ಮುಂದುವರೆದಿದೆ. ಡ್ರೋಣ್ ಹಾಗೂ ಥರ್ಮಲ್ ಡ್ರೋಣ್ ಮೂಲಕ ಚಿರತೆ ಹುಡುಕಾಟ ಮುಂದುವರೆದಿದ್ದು, ಕ್ಯಾಮರಾ ಟ್ರ್ಯಾಪ್‌ನಲ್ಲಿ ಚಿರತೆ ಓಡಾಟದ ದೃಶ್ಯ ಸೆರೆಯಾಗಿದೆ.
ಬೆಳಗಿನ ಜಾವ ಕ್ಯಾಮರಾ ಟ್ರ್ಯಾಪ್‌ನಲ್ಲಿ ಚಿರತೆ ದೃಶ್ಯ ಸೆರೆ ಸಿಕ್ಕಿದ್ದು, ಸದ್ಯ ಚಿರತೆ ಸೆರೆಗೆ ಅರಣ್ಯ ಇಲಾಖೆ ಹರಸಾಹಸ ಪಡುತ್ತಿದೆ.
ವಿವಿಧ ಮಾದರಿಯ ಬೋನುಗಳನ್ನು ಆಯಕಟ್ಟಿನ ಸ್ಥಳದಲ್ಲಿ ಇರಿಸಲಾಗಿದ್ದು, ಕಾರ್ಯಾಚರಣೆ ಮುಂದುವರೆದಿದೆ.





