ಚಾಮರಾಜನಗರ

ಹನೂರು: ಸಮರ್ಪಕ ಕುಡಿಯುವ ನೀರು ಪೂರೈಸುವಂತೆ ನಿವಾಸಿಗಳಿಂದ ಪ್ರತಿಭಟನೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು

ಹನೂರು: ತಾಲ್ಲೂಕಿನ ಹೂಗ್ಯಂ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಭೋವಿ ಸಮುದಾಯದ ಕಾಲೋನಿಗೆ ಸಮರ್ಪಕ ಕುಡಿಯುವ ನೀರು ಪೂರೈಕೆ ಮಾಡುವಂತೆ ಆಗ್ರಹಿಸಿ ನಿವಾಸಿಗಳು ಇಂದು ಬೆಳ್ಳಂ ಬೆಳ್ಳಗೆ ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಿದ್ದಾರೆ.

ಭೋನಿ ಕಾಲೋನಿಯಲ್ಲಿ ಸುಮಾರು 20 ಕುಟುಂಬಗಳಿದ್ದು, ನೂರಕ್ಕೂ ಹೆಚ್ಚು ಜನಸಂಖ್ಯೆಯನ್ನು ಹೊಂದಿದೆ. ಇಲ್ಲಿ ಕಳೆದ ಒಂದು ತಿಂಗಳಿನಿಂದ ಕುಡಿಯುವ ನೀರಿನ ಸಮಸ್ಯೆ ಉಂಟಾಗಿದೆ. ಈ ಸಂಬಂಧ ಗ್ರಾಮ ಪಂಚಾಯಿತಿ ಅಧಿಕಾರಿಗಳಿಗೆ ಹಲವಾರು ಬಾರಿ ಮನವಿ ಸಲ್ಲಿಸಿದರು ಇದುವರೆಗೂ ಯಾವುದೇ ಪ್ರಯೋಜನವಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿ ಏಕಾಏಕಿ ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಿದ್ದಾರೆ.

ಕಳೆದ ಒಂದು ತಿಂಗಳಿನಿಂದ ಮೋಟಾರ್ ದುರಸ್ತಿಗೊಂಡು ಬೋವಿ ಕಾಲೋನಿಗೆ ಸಮರ್ಪಕ ಕುಡಿಯುವ ನೀರು ಪೂರೈಕೆ ಆಗಿರಲಿಲ್ಲ. ಇದಾದ 15 ದಿನಗಳ ನಂತರ ಬೇರೆ ಮೋಟರ್ ಬಿಟ್ಟಿದ್ದಾರೆ. ಇದು ಸಹ ಸುಟ್ಟು ಹೋಗಿ ಒಂದು ವಾರವಾಗಿದೆ. ಆದರೂ ಸಂಬಂಧಪಟ್ಟ ಅಧಿಕಾರಿಗಳು ಟ್ಯಾಂಕರ್ ಮೂಲಕ ಕುಡಿಯುವ ನೀರು ಪೂರೈಕೆ ಮಾಡದೇ ನಿರ್ಲಕ್ಷ್ಯ ತೋರಿದ್ದಾರೆ ಎಂದು ಆಕ್ರೋಶ ಹೊರಹಾಕಿದರು.

ನಂತರ ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ನಾಗರಾಜು ಸ್ಥಳಕ್ಕೆ ಬಂದು ಕುಡಿಯುವ ನೀರಿನ ಸಮಸ್ಯೆಯನ್ನು ಬಗೆಹರಿಸಲಾಗುವುದು. ಏಕಾಏಕಿ ರಸ್ತೆ ತಡೆ ನಡೆಸುವುದರಿಂದ ವಾಹನ ಸವಾರರಿಗೆ ತೊಂದರೆಯಾಗುತ್ತದೆ ಎಂದು ಮನವರಿಕೆ ಮಾಡಿ ಪ್ರತಿಭಟನೆ ಹಿಂಪಡೆಯುವಂತೆ ಮನವಿ ಮಾಡಿದರು. ನಂತರ ಪ್ರತಿಭಟನಾಕಾರರು ವಾಹನ ಸಂಚಾರಕ್ಕೆ ಅನುಕೂಲ ಮಾಡಿ ಗ್ರಾಮ ಪಂಚಾಯಿತಿ ಅಧಿಕಾರಿಗಳ ವಿರುದ್ಧ ವಿವಿಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

 

 

 

ಆಂದೋಲನ ಡೆಸ್ಕ್

Recent Posts

ಹಳ್ಳಿಗಳಲ್ಲಿ ಗೃಹ ಬಳಕೆಯವರಿಗೆ 45 ದಿನಕ್ಕೆ ಒಂದು ಸಿಲಿಂಡರ್:‌ ಸಚಿವ ಮುನಿಯಪ್ಪ

ಬೆಂಗಳೂರು: ಹಳ್ಳಿಗಳಲ್ಲಿ ಗೃಹ ಬಳಕೆಯವರಿಗೆ 45 ದಿನಕ್ಕೆ ಒಂದು ಸಿಲಿಂಡರ್ ಪೂರೈಕೆ ಮಾಡಲಾಗುತ್ತದೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು…

3 mins ago

ಹನೂರು| ಕಾಡಾನೆ ದಾಳಿ: ಆಟೋ ಜಖಂ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಂಚಾಪುರ ಗ್ರಾಮದಿಂದ ಒಡೆಯರ ಪಾಳ್ಯ ಗ್ರಾಮಕ್ಕೆ ವ್ಯಾಪಾರ ಮಾಡಲು…

1 hour ago

ಪಶ್ಚಿಮ ಏಷ್ಯಾದಲ್ಲಿ ಹೆಚ್ಚಾದ ಉದ್ವಿಗ್ನತೆ: ಮನ್‌ ಕಿ ಬಾತ್‌ನಲ್ಲಿ ಪ್ರಧಾನಿ ಮೋದಿ ಹೇಳಿದ್ದಿಷ್ಟು.!

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವಂತೆ ಭಾರತೀಯ ನಾಗರಿಕರು ಒಗ್ಗಟ್ಟಾಗಿರುವಂತೆ ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ. ಪ್ರಧಾನಿ ನರೇಂದ್ರ…

2 hours ago

ಆರೋಗ್ಯ ಕೇಂದ್ರದ ಮುಂಭಾಗವೇ ವಾಹನಗಳ ಪಾರ್ಕಿಂಗ್:‌ ಸಾರ್ವಜನಿಕರಿಗೆ ಕಿರಿಕಿರಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದ ಪ್ರಾಥಮಿಕ ಆರೋಗ್ಯ ಕೇಂದ್ರದ…

2 hours ago

ನ್ಯಾಯ ವಿತರಣೆಯಲ್ಲಿ ಪೊಲೀಸರು ರಾಜಿಯಾಗಬಾರದು: ಸಿಎಂ ಸಿದ್ದರಾಮಯ್ಯ

ಮೈಸೂರು: ನ್ಯಾಯ ವಿತರಣೆಯಲ್ಲಿ ಪೊಲೀಸರು ರಾಜಿಯಾಗಬಾರದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಮೈಸೂರು ಘಟಕದ 46ನೇ ತಂಡದ ಸಿವಿಲ್‌ ಪೊಲೀಸ್‌…

2 hours ago

ಅಮೇರಿಕಾದಲ್ಲಿ ಡೊನಾಲ್ಡ್‌ ಟ್ರಂಪ್‌ ವಿರುದ್ಧವೇ ಭುಗಿಲೆದ್ದ ಆಕ್ರೋಶ

ಅಮೇರಿಕಾದಲ್ಲಿ ಡೊನಾಲ್ಡ್‌ ಟ್ರಂಪ್‌ ವಿರುದ್ಧವೇ ಭುಗಿಲೆದ್ದ ಆಕ್ರೋಶ 80 ಲಕ್ಷ ಜನರಿಂದ ನೋ ಕಿಂಗ್ಸ್‌ ಚಳುವಳಿ ಟ್ರಂಪ್‌ ನೀತಿ ವಿರೋಧಿಸಿ…

3 hours ago