ಹನೂರು: ಪಟ್ಟಣದ ಚಿನ್ನದೊರೆ ಎಂಬುವವರ ಮನೆಯಲ್ಲಿ ನಗದು ಹಾಗೂ ಚಿನ್ನ ಕಳ್ಳತನವಾಗಿದ್ದ ಹಿನ್ನೆಲೆಯಲ್ಲಿ ಮಾಜಿ ಶಾಸಕ ಆರ್.ನರೇಂದ್ರ ಅವರು, ಚಿನ್ನದೊರೆ ನಿವಾಸಕ್ಕೆ ಭೇಟಿ ನೀಡಿ ಘಟನೆಯ ಸಂಬಂಧ ಮಾಹಿತಿ ಪಡೆದುಕೊಂಡು ಕುಟುಂಬಸ್ಥರಿಗೆ ಧೈರ್ಯ ತುಂಬಿದರು.
ಪರಿಶೀಲನೆ ನಂತರ ಆರ್.ನರೇಂದ್ರ ಅವರು, ದೂರವಾಣಿ ಮುಖಾಂತರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕವಿತಾರನ್ನು ಸಂಪರ್ಕಿಸಿ ತನಿಖೆಯ ಬಗ್ಗೆ ಮಾಹಿತಿ ಪಡೆದುಕೊಂಡರು. ಬಳಿಕ ಮಾತನಾಡಿದ ಅವರು, ಜಿಲ್ಲೆಯಲ್ಲಿಯೇ ಇದುವರೆಗೂ ಇಷ್ಟು ದೊಡ್ಡ ಮಟ್ಟದಲ್ಲಿ ಕಳ್ಳತನವಾಗಿರಲಿಲ್ಲ. ಇದೀಗ ಹನೂರು ಪಟ್ಟಣದಲ್ಲಿ ಕಳ್ಳತನ ನಡೆದಿರುವುದು ಸ್ಥಳೀಯರನ್ನು ಆತಂಕಕ್ಕೀಡು ಮಾಡಿದೆ. ಈಗಾಗಲೇ ಹಿರಿಯ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿ ಕಳ್ಳತನ ಪ್ರಕರಣವನ್ನು ಆದಷ್ಟು ಬೇಗ ಭೇದಿಸಿ ನಗದು ಹಾಗೂ ಚಿನ್ನವನ್ನು ಪತ್ತೆ ಹಚ್ಚುವಂತೆ ತಿಳಿಸಿದ್ದೇನೆ. ಈ ಕಳ್ಳತನ ಪ್ರಕರಣವನ್ನು ಪತ್ತೆಹಚ್ಚಲು ಈಗಾಗಲೇ ವಿಶೇಷ ತಂಡ ರಚನೆಯಾಗಿರುವುದು ತಿಳಿದು ಬಂದಿದೆ. ನಮ್ಮ ರಾಜ್ಯದ ಪೊಲೀಸರು ಇದಕ್ಕಿಂತಲೂ ವಿಭಿನ್ನವಾಗಿರುವ ಪ್ರಕರಣಗಳನ್ನು ಭೇದಿಸಿ ಇಡೀ ದೇಶದಲ್ಲಿಯೇ ಮನೆ ಮಾತಾಗಿದ್ದಾರೆ. ಈ ಪ್ರಕರಣವು ಸುಖಾಂತ್ಯ ಕಂಡು ನೊಂದವರಿಗೆ ನ್ಯಾಯ ಕೊಡಿಸುವ ಮೂಲಕ ರಾಜ್ಯದ ಪೊಲೀಸರು ಇತರೆ ರಾಜ್ಯದವರಿಗೆ ಮಾದರಿಯಾಗಲಿ ಎಂದರು.
ಘಟನೆಯ ಸಂಬಂಧ ಚಿನ್ನದೊರೆ ಮಾತನಾಡಿ, ನನ್ನ ಮೂರನೇ ಮಗಳು ದರ್ಶಿನಿ ರಾಜಸ್ಥಾನದ ಜೈಪುರ್‌ನಲ್ಲಿ ಸಾಫ್ಟ್‌ವೇರ್ ಇಂಜಿನಿಯರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದು, ಬರುವ ಸಂಬಳವನ್ನು ನಮಗೆ ಕಳುಹಿಸುತ್ತಿದ್ದರು. ನಾವು ನಮ್ಮ ಊರಿನಲ್ಲಿದ್ದ ಜಮೀನು ಮಾರಾಟ ಮಾಡಿ ಮನೆಯಲ್ಲಿ 20 ಲಕ್ಷ ನಗದು ಹಾಗೂ ಮದುವೆಗೆ ಚಿನ್ನ ಖರೀದಿ ಮಾಡಿ ಮನೆಯಲ್ಲಿ ಇಟ್ಟಿದ್ದೆವು. ನಮ್ಮ ಸಂಬಂಧಿಕರ ಕಾರ್ಯಕ್ರಮ ಇದ್ದ ಹಿನ್ನೆಲೆ ತಮಿಳುನಾಡಿಗೆ ತೆರಳಿ ವಾಪಸ್ ಮಧ್ಯರಾತ್ರಿ ಮನೆಗೆ ಬಂದಾಗ ಕಳ್ಳತನವಾಗಿರುವುದು ಬೆಳಕಿಗೆ ಬಂತು ಎಂದು ಘಟನೆ ಬಗ್ಗೆ ವಿವರಿಸಿದರು.
ಭೇಟಿಯ ವೇಳೆ ಪಟ್ಟಣ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಮಾದೇಶ್, ಮುಖಂಡರಾದ ರಮೇಶ್ ನಾಯ್ಡು, ಮಾದೇಶ್, ರಾಜೇಶ್, ಪ್ರದೀಪ್ ನಾಯ್ಡು, ನಾಗೇಶ್, ವೆಂಕಟೇಶ್ ಸೇರಿದಂತೆ ಇನ್ನಿತರರು ಹಾಜರಿದ್ದರು.
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…