ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು
ಹನೂರು: ರಾಮಾಪುರ ವ್ಯಾಪ್ತಿಯಲ್ಲಿ ಜಮೀನುಗಳಲ್ಲಿ ಇರುತ್ತಿದ್ದ ನೀರೆತ್ತುವ ಪಂಪ್ ಸೆಟ್ ಮೋಟಾರ್‌ಗಳನ್ನು ಕಳ್ಳತನ ಮಾಡುತ್ತಿದ್ದ ಆರೋಪಿಗಳನ್ನು ರಾಮಾಪುರ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ತಾಲ್ಲೂಕಿನ ಚಂಗದಾರಹಳ್ಳಿ ಗ್ರಾಮದ ಮಾರಸ್ವಾಮಿ, ಮಣಿಕಂಠ, ಶ್ರೀರಂಗ ಎಂಬುವವರೇ ಬಂಧಿತ ಆರೋಪಿಗಳಾಗಿದ್ದಾರೆ.
ಘಟನೆ ವಿವರ: ಚಂದದಾರಹಳ್ಳಿ ಗ್ರಾಮದ ಮಣಿ ಎಂಬುವವರು ಕಳೆದ ವಾರ ತನ್ನ ಜಮೀನಿನ ಶೆಡ್ ನಲ್ಲಿಟ್ಟಿದ್ದ ನೀರೆತ್ತುವ ಮೋಟಾರ್ ಹಾಗೂ ಇನ್ನಿತರ ವಸ್ತುಗಳು ಕಳುವಾಗಿರುವ ಬಗ್ಗೆ ರಾಮಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿದ್ದರು.
ತಕ್ಷಣ ಕಾರ್ಯ ಪ್ರವೃತ್ತರಾದ ರಾಮಾಪುರ ಠಾಣೆ ವಿವಿಧ ಆಯಾಮಗಳಲ್ಲಿ ತನಿಖೆ ನಡೆಸಿದ ನಂತರ ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತದಿಂದ ಕೃತ್ಯಕ್ಕೆ ಬಳಸಿದ್ದ ವಾಹನ, ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.
ಇನ್ನು ಪ್ರಕರಣ ಸಂಬಂಧ ಮತ್ತೋರ್ವ ಆರೋಪಿ ಪರಾರಿಯಾಗಿದ್ದು, ಆತನಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.
ನಾಗಮಂಗಲ : ಎರಡು ವರ್ಷಗಳ ಹಿಂದೆ ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದು ಪಟ್ಟಣ ಕೋಮು…
ಬೆಂಗಳೂರು : ತಾಂತ್ರಿಕ ದೋಷ ಹಾಗೂ ಸರ್ವರ್ ಮಂದಗತಿಯ ಕಾರಣದಿಂದ ನ್ಯಾಯಬೆಲೆ ಅಂಗಡಿಗಳಲ್ಲಿ ಇ-ಕೆವೈಸಿ ಮಾಡಿಸಲು ಬಿಪಿಎಲ್, ಎಪಿಎಲ್ ಪಡಿತರದಾರರಿಗೆ…
ಬಾಲಸುಬ್ರಹ್ಮಣ್ಯ ಕಂಜರ್ಪಣೆ ನಮ್ಮೂರಿನಲ್ಲಿ ಒಬ್ರು ಬಹಳ ಒಳ್ಳೆಯ ಮನುಷ್ಯ ಇದ್ರು. ಅವರು ಕುಡೀತಿರ್ಲಿಲ್ಲ. ಅವರಿಗೆ ಒಂದಿಬ್ಬರು ಗೆಳೆಯರು ಸೇರಿ ಕುಡಿಯೋದನ್ನು…
ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮುಂಬರುವ ಕೆಲವೇ ದಿನಗಳಲ್ಲಿ ನಡೆಯುವ ನಾಡ ಹಬ್ಬ ದಸರಾ ಮಹೋತ್ಸವದ ಅಂಗವಾಗಿ ಪ್ರವಾಸಿಗರನ್ನು ಆಕರ್ಷಿಸುವ ಸಲುವಾಗಿ,…
ಕಾರ್ಮಿಕರು ಅಥವಾ ವಿಶಾಲಾರ್ಥದಲ್ಲಿ ದುಡಿಯುವ ವರ್ಗಗಳು ತಮ್ಮ ಜೀವನಾವಶ್ಯ-ವೃತ್ತಿಕೇಂದ್ರಿತ ಅವಶ್ಯಕತೆಗಳನ್ನು ಈಡೇರಿಸಿಕೊಳ್ಳಲು ಉದ್ಯೋಗದಾತರ ವಿರುದ್ಧ ಮುಷ್ಕರ ಹೂಡುವುದು ಚಾರಿತ್ರಿಕವಾಗಿ ನಡೆದುಬಂದಿರುವಂತಹ…
ಅತ್ಯುತ್ತಮ ನಟನೆಗೆ ರಾಷ್ಟ್ರಪ್ರಶಸ್ತಿ ಪಡೆಯುವ ಚಿತ್ರಗಳಿದ್ದರೂ, ಆಯಾ ವರ್ಷದಲ್ಲಿನ ಸ್ಪರ್ಧೆಯ ಕಾರಣವೋ ಇನ್ನೇನೋ, ಅನಂತನಾಗ್ ಅವರಿಗೆ ಈ ತನಕ ಆ…