Mysore
18
mist

Social Media

ಮಂಗಳವಾರ, 23 ಡಿಸೆಂಬರ್ 2025
Light
Dark

ಹನೂರು: ಅರಣ್ಯಕ್ಕೆ ಬೆಂಕಿ ಹಚ್ಚುತ್ತಿದ್ದ ಇಬ್ಬರು ಆರೋಪಿಗಳ ಬಂಧನ

ಹನೂರು: ಅರಣ್ಯಕ್ಕೆ ಅಕ್ರಮವಾಗಿ ಪ್ರವೇಶ ಮಾಡಿ ಬೆಂಕಿ ಹಚ್ಚಿ ವಾಪಸ್ ತೆರಳುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ.

ಹನೂರು ತಾಲೂಕಿನ ದಿನಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೋರೆದೊಡ್ಡಿ ಗ್ರಾಮದ ನಿವಾಸಿಗಳಾದ ಸಿದ್ದು ನಾಯಕ, ಮಾದೇಶ್ ಬಂಧಿತ ಆರೋಪಿಗಳಾಗಿದ್ದಾರೆ.

ಘಟನೆ ವಿವರ:

ಮಲೆ ಮಹದೇಶ್ವರ ವನ್ಯಜೀವಿ ವಿಭಾಗದ ಹನೂರು ವನ್ಯಜೀವಿ ಉಪ ವಿಭಾಗದ ಹನೂರು ಬಫರ್ ವಲಯದ ಪಚ್ಚೆದೊಡ್ಡಿ ಶಾಖೆಯ ನ್ಯೂ ದಿನಳ್ಳಿ ಗಸ್ತಿನ ಕುಂಟ ಮುನಿಕೆರೆ ಅರಣ್ಯ ಪ್ರದೇಶದಲ್ಲಿ ಬೆಂಕಿ ಹಚ್ಚಿ ವಾಪಸ್ ಅರಣ್ಯದಲ್ಲಿ ಸಂಚರಿಸುತ್ತಿರುವ ಬಗ್ಗೆ ದೊರೆತ ಖಚಿತ ಮಾಹಿತಿ ಮೇರೆಗೆ ಮಲೆ ಮಹದೇಶ್ವರ ವನ್ಯಜೀವಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿಗಳಾದ ಪರಮೇಶ್ ಕೆ, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಸ್ವಪ್ನಿಲ್ ಮನೋಹರ್ ಅಹಿರೆ ಹಾಗೂ ಹನೂರು ಬಫರ್ ವಲಯದ ವಲಯ ಅರಣ್ಯಾಧಿಕಾರಿ ಪ್ರವೀಣ್ ಮಾರ್ಗದರ್ಶನದಲ್ಲಿ ಉಪವಲಯ ಅರಣ್ಯಾಧಿಕಾರಿ ವಿನಾಯಕ ಬೋರಡ್ಡಿ ಹಾಗೂ ಸಿಬ್ಬಂದಿಗಳು ವಶಕ್ಕೆ ಪಡೆದು ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ ಪ್ರಕರಣ ದಾಖಲಿಸಿ ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ಕಾರ್ಯಾಚರಣೆಯಲ್ಲಿ ಅರಣ್ಯ ಪಾಲಕರಾದ ಭೀಮಶಿ ಮುನ್ಯಾಳ್, ಅಶೋಕ್ ಎಸ್ ಕೂಗುವರ್, ಸುರೇಶ್ ಪಿ, ಎಪಿ ಕ್ಯಾಂಪ್ ವಾಚರ್ ನಾಗರಾಜು ಮತ್ತು ಇಲಾಖೆಯ ಸಿಬ್ಬಂದಿ ವರ್ಗದವರು ಹಾಜರಿದ್ದರು.

 

 

Tags:
error: Content is protected !!