ಚಾಮರಾಜನಗರ

ಉಡುತೊರೆ ಹಳ್ಳ ಜಲಾಶಯದ 490 ಕೋಟಿ ವೆಚ್ಚದ ಕಾಮಗಾರಿಗೆ ಬಜೆಟ್‌ನಲ್ಲಿ ಅನುಮೋದನೆ ಸಿಕ್ಕಿರುವುದು ಸಂತಸ: ಶಾಸಕ ಎಂ.ಆರ್.ಮಂಜುನಾಥ್

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು

ಹನೂರು: ಕಳೆದ ವಿಧಾನಸಭಾ ಚುನಾವಣಾ ಪೂರ್ವದಲ್ಲಿ ಕ್ಷೇತ್ರದ ಜನರಿಗೆ ಭರವಸೆ ನೀಡಿದಂತೆ ರಾಮಪುರ ಹೋಬಳಿ ವ್ಯಾಪ್ತಿಯ ಜನರ ಕುಡಿಯುವ ನೀರಿನ ಭವಣೆ ನೀಗಿಸುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯರವರ ಸಹಕಾರದಿಂದ ಉಡುತೊರೆ ಹಳ್ಳ ಜಲಾಶಯದ 490 ಕೋಟಿ ವೆಚ್ಚದ ಕಾಮಗಾರಿಗೆ ಬಜೆಟ್ ನಲ್ಲಿ ಅನುಮೋದನೆ ಸಿಕ್ಕಿರುವುದು ಸಂತಸ ತಂದಿದೆ ಎಂದು ಶಾಸಕ ಎಂ.ಆರ್ ಮಂಜುನಾಥ್ ಮೆಚ್ಚುಗೆ ವ್ಯಕ್ತಪಡಿಸಿದರು.

ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಳೆದ ಹಲವಾರು ವರ್ಷಗಳಿಂದ ಕ್ಷೇತ್ರ ವ್ಯಾಪ್ತಿಯಲ್ಲಿ ಸಮರ್ಪಕ ಮಳೆಯಾಗದೆ ಹನೂರು ವಿಧಾನಸಭಾ ಕ್ಷೇತ್ರದಲ್ಲಿ ಕುಡಿಯಲು ಹಾಗೂ ವ್ಯವಸಾಯಕ್ಕೆ ನೀರಿಲ್ಲದೆ ಕ್ಷೇತ್ರದ ಜನರು ನೆರೆಯ ರಾಜ್ಯ ಹಾಗೂ ಜಿಲ್ಲೆಗಳಿಗೆ ಗುಳೆ ಹೋಗುತ್ತಿದ್ದರು. ಈ ನಿಟ್ಟಿನಲ್ಲಿ ಹನೂರು ವಿಧಾನಸಭಾ ಕ್ಷೇತ್ರಕ್ಕೆ ಶಾಶ್ವತ ನೀರಾವರಿ ವ್ಯವಸ್ಥೆ ಕಲ್ಪಿಸುವುದರ ಜೊತೆಗೆ ಕ್ಷೇತ್ರದ ರೈತರನ್ನು ಆರ್ಥಿಕವಾಗಿ ಸಬಲರನ್ನಾಗಿ ಮಾಡಲು ಹಲವಾರು ವರ್ಷಗಳಿಂದ ಪ್ರಾಮಾಣಿಕವಾಗಿ ಶ್ರಮಿಸಿದ್ದೇನೆ. ಇದರ ಫಲವಾಗಿ ಇಂದು 490 ಕೋಟಿ ವೆಚ್ಚದ ಕಾಮಗಾರಿಗೆ ಬಜೆಟ್ ನಲ್ಲಿ ಅನುಮೋದನೆ ದೊರಕಿದೆ. ಇದು ಜೀವನದಲ್ಲಿ ಮರೆಯಲಾರದ ಕ್ಷಣ. ಈ ಯೋಜನೆ ಪೂರ್ಣಗೊಂಡರೆ ಒಟ್ಟಾರೆ ರಾಮಾಪುರ ಹೋಬಳಿ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ಶಾಶ್ವತವಾಗಿ ಬಗೆಹರಿಯಲಿದೆ. ಗ್ಯಾರಂಟಿ ಯೋಜನೆಗಳ ನಡುವೆಯೂ ಕ್ಷೇತ್ರಕ್ಕೆ ನೀರಾವರಿ ಯೋಜನೆಗೆ ಇಷ್ಟು ದೊಡ್ಡ ಮೊತ್ತದ ಅನುದಾನ ನೀಡಿರುವುದರಿಂದ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ, ಉಪಮುಖ್ಯಮಂತ್ರಿಗಳಾದ ಡಿಕೆ ಶಿವಕುಮಾರ್ ಸಚಿವರಾದ ವೆಂಕಟೇಶ್, ಎಚ್.ಸಿ.ಮಹದೇವಪ್ಪ ಹಾಗೂ ಸಂಸದ ಸುನೀಲ್‌ ಬೋಸ್‌  ರವರಿಗೆ ವಿಶೇಷವಾಗಿ ಅಭಿನಂದನೆ ಸಲ್ಲಿಸುವುದಾಗಿ ತಿಳಿಸಿದರು.

ಹನೂರು ವಿಧಾನಸಭಾ ಕ್ಷೇತ್ರದ ಪ್ರತಿ ಸಭೆಗಳಲ್ಲಿ ಕ್ಷೇತ್ರದ ಜನರಿಗೆ ಮುಂದಿನ ದಿನಗಳಲ್ಲಿ ಸಿಹಿ ಸುದ್ದಿ ಸಿಗಲಿದೆ ಎಂದು ಹೇಳುತ್ತಿದ್ದೆ, ಅದರಂತೆ ಕ್ಷೇತ್ರಕ್ಕೆ ಎಂದು ಶುಭ ಸೂಚನೆ ದೊರಕಿದೆ. ಈ ಯೋಜನೆ ಅನುಷ್ಠಾನಕ್ಕೆ ಕಾವೇರಿ ನೀರಾವರಿ ನಿಗಮದ ಎಸ್ ಇ ಮಹೇಶ್ ರವರ ಶ್ರಮವು ಇದೆ. ಒಟ್ಟಾರೆ ಕ್ಷೇತ್ರದ ಜನರ ಸಮಸ್ಯೆ ಶಾಶ್ವತವಾಗಿ ಬಗೆಹರಿದಿದೆ.

ಇದಲ್ಲದೆ ಕೆಸಿಫ್ 2ನೆ ಹಂತದ ಕಾಮಗಾರಿಗೂ ಅನುದಾನ ಬಿಡುಗಡೆಯಾಗಿರುವುದರಿಂದ ಪ್ರವಾಸೋದ್ಯಮಕ್ಕೂ ಹೆಚ್ಚಿನ ಅನುಕೂಲವಾಗಲಿದೆ. ಪ್ರಜಾಸೌಧ ಕಟ್ಟಡ ನಿರ್ಮಾಣ ಕಾಮಗಾರಿಗೆ ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡಿದ್ದು ಮುಂದಿನ ದಿನಗಳಲ್ಲಿ ಚಾಲನೆ ನೀಡಲಾಗುವುದು.

ಕ್ಷೇತ್ರ ವ್ಯಾಪ್ತಿಯಲ್ಲಿ ನಗರ ಪ್ರದೇಶಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆಗಳು ಹಾಗೂ ಗ್ರಾಮೀಣ ಭಾಗದ ರಸ್ತೆಗಳ ಅಭಿವೃದ್ಧಿಗೆ ಮುಂದಿನ ದಿನಗಳಲ್ಲಿ ಹಂತ ಹಂತವಾಗಿ ಅನುದಾನ ತಂದು ಅಭಿವೃದ್ಧಿಪಡಿಸಲಾಗುವುದು ಎಂದರು.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಸಂಸದ ಸುನಿಲ್ ಬೋಸ್ ಮನವಿಗೆ ಸ್ಪಂದನೆ: ಹನೂರು ನೀರಾವರಿ ಯೋಜನೆಗೆ ಬಜೆಟ್‌ನಲ್ಲಿ 490 ಕೋಟಿ ಘೋಷಣೆ!

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನಲ್ಲಿ ಅಂತರ್ಜಲ ಹೆಚ್ಚಿಸಿ ಕುಡಿಯುವ ನೀರು…

14 mins ago

ರಾಜ್ಯ ಬಜೆಟ್:‌ ಮಹಿಳಾ ಅತಿಥಿ ಉಪನ್ಯಾಸಕರಿಗೆ 90 ದಿನಗಳ ಮಾತೃತ್ವ ರಜೆ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರಿಂದು ದಾಖಲೆಯ 17ನೇ ಬಜೆಟ್‌ಅನ್ನು ಮಂಡನೆ ಮಾಡಿದ್ದಾರೆ. ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಪಾಲಿಟೆಕ್ನಿಕ್ ಹಾಗೂ…

34 mins ago

ರಾಜ್ಯ ಬಜೆಟ್: ಎಲ್ಲಾ ಜಿಲ್ಲೆಗಳಲ್ಲಿ ಅಕ್ಕಪಡೆ ಯೋಜನೆ ಜಾರಿಗೆ ನಿರ್ಧಾರ

ಬೆಂಗಳೂರು: ಎಲ್ಲಾ ಜಿಲ್ಲೆಗಳಲ್ಲೂ ಅಕ್ಕಪಡೆ ಯೋಜನೆ ಜಾರಿಗೆ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದರು. ಸಿಎಂ ಸಿದ್ದರಾಮಯ್ಯ…

49 mins ago

ರಾಜ್ಯ ಬಜೆಟ್‌: 5 ಕೆಜಿ ಅಕ್ಕಿ ಬದಲು ಈಗ ಇಂದಿರಾ ಕಿಟ್‌ ಭಾಗ್ಯ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ಮಂಡಿಸಿದ ರಾಜ್ಯ ಬಜೆಟ್‌ನಲ್ಲಿ ಹಲವು ಯೋಜನೆಗಳನ್ನು ಜಾರಿಗೆ ತರಲಾಗಿದೆ. ಅನ್ನಭಾಗ್ಯ ಯೋಜನೆಯಲ್ಲಿ ದೊಡ್ಡ ಬದಲಾವಣೆ…

1 hour ago

ಉಡುತೊರೆ ಹಳ್ಳ ಏತ ನೀರಾವರಿ ಯೋಜನೆಗೆ 490 ಕೋಟಿ ವೆಚ್ಚದ ಯೋಜನೆಗೆ ಅನುಮೋದನೆ: ಮಾಜಿ ಶಾಸಕ ಆರ್.‌ನರೇಂದ್ರ ಸಂತಸ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ವಿಧಾನಸಭಾ ಕ್ಷೇತ್ರದ ಉಡುತೊರೆ ಹಳ್ಳ ಏತ ನೀರಾವರಿ ಯೋಜನೆಯ 490…

2 hours ago

ರಾಜ್ಯ ಬಜೆಟ್‌: ಬೆಂಗಳೂರಿನಲ್ಲಿ 2ನೇ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರಿಂದು ದಾಖಲೆಯೆ 17ನೇ ರಾಜ್ಯ ಬಜೆಟ್‌ ಅನ್ನು ಮಂಡನೆ ಮಾಡಿದ್ದಾರೆ. ಸಿಲಿಕಾನ್‌ ಸಿಟಿ ಬೆಂಗಳೂರಿನ ಸಂಚಾರ…

2 hours ago