ಚಾಮರಾಜನಗರ

ಹರಿಕಥೆ ಮೇಷ್ಟ್ರು ಮಾದೇಶ ಇನ್ನಿಲ್ಲ

ಗುಂಡ್ಲುಪೇಟೆ : ತಾಲ್ಲೂಕಿನ ಬಾಚಹಳ್ಳಿಗ್ರಾಮದ ನಿವಾಸಿ, ಹರಿಕಥೆ ಮೇಷ್ಟ್ರು ಮಾದೇಶ(55) ಅವರು ಶನಿವಾರ ರಾತ್ರಿ ನಿಧನರಾದರು.

ಚಿಕ್ಕನಿಂದಲೇ ಕಲೆಯನ್ನು ಮೈಗೂಡಿಸಿಕೊಂಡಿದ್ದ ಇವರು, ಮಂಟೇಸ್ವಾಮಿ, ಸಿದ್ದಪ್ಪಾಜಿ ಮತ್ತು ಮಲೆ ಮಹದೇಶ್ವರರ ಜಾನಪದ ಕಥನಗಳು, ಹರಿಕಥೆ ಹಾಗೂ ಭಕ್ತಿಗೀತೆಗಳ ಮೂಲಕ ಜನಪ್ರಿಯರಾಗಿದ್ದರು. ಇವರ ಬಳಿ ಅನೇಕರು ಹರಿಕಥೆ, ಹಾರ್ಮೋನಿಯಂ ನುಡಿಸುವುದನ್ನು ಕಲಿತಿದ್ದಾರೆ. ನಾಡಿನಾದ್ಯಂತ ನಡೆಯುವ ಜಾನಪದ ಕಾರ್ಯಕ್ರಮಗಳಲ್ಲಿ ತಮ್ಮನ್ನು ತೊಡಗಿಸಿಕೊಂಡು ತಮ್ಮ ಪ್ರತಿಭೆಯನ್ನು ಪ್ರದರ್ಶಿಸಿ ಜನ ಮೆಚ್ಚುಗೆ ಗಳಿಸಿದ್ದರು. ಹಿರಿಯ ಜಾನಪದ ಕಲಾವಿದ ಮಳವಳ್ಳಿ ಮಹದೇವಸ್ವಾಮಿ ಅವರ ಜೊತೆ ಅನೇಕ ಕಾರ್ಯಕ್ರಮಗಳನ್ನು ಹಚ್ಚಿಕೊಂಡಿದ್ದಾರೆ. ಶನಿ ಮಹಾತ್ಮ, ರಾಜವಿಕ್ರಮ, ಸತ್ಯ ವ್ರತ, ನಳದಂಯಂತಿ ಹಾಗೂ ಸಿದ್ದಪ್ಪಾಜಿ, ಮಂಟೇಸ್ವಾಮಿ ಕಥೆಗಳನ್ನು ಇಡೀ ರಾತ್ರಿ ನಡೆಸಿಕೊಡುತ್ತಿದ್ದ ಅಪರೂಪದ ಕಲಾವಿದರು ಆಗಿದ್ದರು. ಇಂದಿನ ಅಧುನಿಕ ಕಾಲದ ಸಿನಿಮಾ, ಚಿತ್ರರಂಗದ ಭರಾಟೆಯ ನಡುವೆಯೂ ನಶಿಸಿ ಹೋಗುತ್ತಿದ್ದ ಕಲೆಯನ್ನು ಜೀವಂತವಾಗಿಸಿದ್ದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆಯೋಜಿಸಿದ್ದ ಕನ್ನಡ ರಾಜ್ಯೋತ್ಸವ, ಇನ್ನಿತರೆ ಕಾರ್ಯಕ್ರಮಗಳಲ್ಲಿ ಭಾಗವಹಿಸಿ, ಹಲವು ಪ್ರಶಸ್ತಿಗಳನ್ನೂ ಗಳಿಸಿದ್ದಾರೆ. ಇವರ ಹಾಡುಗಳು ಕರ್ನಾಟಕದ ಜನಪದ ಪರಂಪರೆಯನ್ನು ಜನಸಾಮಾನ್ಯರಿಗೆ ತಲುಪಿಸುವಲ್ಲಿ ಪ್ರಮುಖ ಪಾತ್ರ ವಹಿಸಿವೆ. ಇವರ ಅಗಲಿಕೆಗೆ ಹಲವರು ಕಂಬನಿ ಮಿಡಿದಿದ್ದಾರೆ.
ಮೃತರು ತಂದೆ ಮಾದೇವಯ್ಯ, ತಾಯಿ ವೆಂಕಟಮ್ಮ, ಪತ್ನಿ ರಾಜೇಶ್ವರಿ, ಪುತ್ರಿಯರಾದ ಸೌಮ್ಯ, ಕಾವ್ಯ, ಅಪಾರ ಬಂದುಗಳನ್ನು ಆಗಲಿದ್ದಾರೆ. ಮೃತರ ಅಂತ್ಯಕ್ರಿಯೆಯು ಸ್ವಗ್ರಾಮ ಬಾಚಹಳ್ಳಿಯಲ್ಲಿ ಇಂದು ನೆರವೇರಲಿದೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಇದೇನು ಪಾದಚಾರಿ ರಸ್ತೆಯೋ ಅಥವಾ…?

ಅನ್ನ ಬೆಂದಿದೆಯೋ ಇಲ್ಲವೋ ಎಂಬುದನ್ನುಪರೀಕ್ಷಿಸಲು ಪಾತ್ರೆಯ ಅನ್ನವನ್ನು ಮುಟ್ಟಿ ನೋಡಬೇಕಿಲ್ಲ. ಒಂದು ಅಗುಳನ್ನು ಪರೀಕ್ಷಿಸಿದರೆ ಸಾಕು. ಅಂತೆಯೇ ಮೈಸೂರಿನಲ್ಲಿ ಸಂಚಾರ…

3 mins ago

ಓದುಗರ ಪತ್ರ: ನಕಲಿ ಔಷಧಿಗಳ ಜಾಲದ ತಡೆಗೆ ಕಠಿಣ ಕ್ರಮ ಕೈಗೊಳ್ಳಿ

ಮಾರುಕಟ್ಟೆಯಲ್ಲಿ ನಕಲಿ ಔಷಧಿಗಳ ಮಾರಾಟ ಹೆಚ್ಚಾಗುತ್ತಿರುವುದು ಅಂತಕ ಮೂಡಿಸಿದೆ. ಬ್ರಾಂಡೆಡ್ ಹೆಸರಿನಲ್ಲಿ ಸೂಕ್ತ ಪ್ರಮಾಣದಲ್ಲಿ ರಾಸಾಯನಿಕಗಳಿಲ್ಲದ ಅಥವಾ ಹಾನಿಕಾರಕ ಘಟಕಾಂಶಗಳಿರುವ…

5 mins ago

ಜೆನ್ ಝೀ ಶಕ್ತಿಗೆ ಹೆದರಿದ ಕೇಂದ್ರದ ಎನ್‌ಡಿಎ ಸರ್ಕಾರ

ದೆಹಲಿ ಕಣ್ಣೋಟ, ಶಿವಾಜಿ ಗಣೇಶನ್‌ ಅವರ ವಾರದ ಅಂಕಣ  ಜನರು ಮತ್ತು ಯುವಕರು ದಿಕ್ಕೆಟ್ಟ ಆಡಳಿತದ ವಿರುದ್ಧ ಸಿಡಿದು ಬೀದಿಗಿಳಿದಿದ್ದಾರೆ…

10 mins ago

ಮತ್ತೆ ಹುಯ್ಯುತ್ತಿರುವ ಪ್ರತಿಭಟನೆಯ ಸುರಿಮಳೆ

ಕೆ.ನೀಲಾ ಕರುನಾಡ ಹೋರಾಟಗಾರ್ತಿ ಕಾಮ್ರೇಡ್ ನೀಲಾ ನೆನಪುಗಳು ನಾನು ಆಗ ಏಳು ಅಥವಾ ಎಂಟನೇ ತರಗತಿ ಓದುತ್ತಿದ್ದೆ ಎಂದು ನೆನಪು.…

49 mins ago

ಕೆಚ್ಚೆದೆಯ ನೇಹಾ ಮತ್ತು ವಾತ್ಸಲ್ಯದ ಅಮ್ಮ

ಪಾತು ಎಲ್ಲಾ ಭಿನ್ನಾಭಿಪ್ರಾಯಗಳಾಚೆಯೂ ಒಬ್ಬರ ಬದುಕಿನಲ್ಲಿ ಇನ್ನೊಬ್ಬರು ಆಸರೆಯಾಗಬಹುದು ಎನ್ನುವುದಕ್ಕೆ ಸಾಕ್ಷಿಯಾಗಿ ಈ ಘಟನೆ ಹಲವು ಕಾಲ ಜನಮಾನಸದಲ್ಲಿ ನಿಲ್ಲುತ್ತದೆ…

57 mins ago

ಪೆಟ್ರೋಲ್ ಬಂಕ್‌ನಲ್ಲಿ ನಿರ್ಮಾಣವಾದ ಮಿನಿ ಕೆರೆ!

ಮಂಜು ಕೋಟೆ ನೀರಾವರಿ ಇಲಾಖೆ ಅಧಿಕಾರಿಗಳ ಬೇಜವಾಬ್ದಾರಿಯಿಂದ ಅವ್ಯವಸ್ಥೆ ಎಂದು ಸಾರ್ವಜನಿಕರ ಆಕ್ರೋಶ  ಎಚ್.ಡಿ.ಕೋಟೆ: ತಾಲ್ಲೂಕಿನಲ್ಲಿ ಮಳೆ ಇಲ್ಲದೆ ಬರ…

1 hour ago