Mysore
30
light rain

Social Media

ಭಾನುವಾರ, 04 ಅಕ್ಟೋಬರ್ 2026
Light
Dark

ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ: 9 ಮಂದಿಗೆ ಗಾಯ

ಹನೂರು: ಕಾರುಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ 9 ಜನರು ಗಾಯಗೊಂಡಿರುವ ಘಟನೆ ಹನೂರು ಪಟ್ಟಣದ ಹೊರವಲಯದ ಮಹದೇಶ್ವರ ಐಟಿಐ ಕಾಲೇಜು ಮುಂಭಾಗ ನಡೆದಿದೆ.

ಗಾಯಗೊಂಡವರನ್ನು ಸುವರ್ಣ (37), ಲೋಕೇಶ್ (20), ಶ್ರೇಯಾ (16), ರುಕ್ಮಿಣಿ (42), ಮಂಜೇಶ್ (43), ಭಾಗ್ಯಮ್ಮ (55), ಮಹಾದೇವ (50), ಮನ್ಸೂರು (38), ಮಹಮ್ಮದ್ ದೊಫಿ (28), ನಿಜವುನ್ (29) ಎಂದು ಗುರುತಿಸಲಾಗಿದೆ.

ಘಟನೆ ವಿವರ: ಬೆಂಗಳೂರಿನಿಂದ ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಕಾರು ಮತ್ತು ಕೊಳ್ಳೇಗಾಲದತ್ತ ತೆರಳುತ್ತಿದ್ದ ಮತ್ತೊಂದು ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ. ಪರಿಣಾಮ ಮಲೆಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಕಾರಿನಲ್ಲಿದ್ದ ಏಳು ಮಂದಿಗೆ ತೀವ್ರ ಗಾಯವಾಗಿದ್ದು, ಕೈಕಾಲು ಮುರಿತಗೊಂಡಿವೆ.

ಮಾಹಿತಿ ತಿಳಿದ ತಕ್ಷಣ ಅಗ್ನಿಶಾಮಕ ಠಾಣಾಧಿಕಾರಿ ರವೀಂದ್ರ ನೇತೃತ್ವದಲ್ಲಿ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿ, ಅಪಘಾತದಲ್ಲಿ ಗಾಯಗೊಂಡು ನರಳುತ್ತಿದ್ದ ಭಕ್ತಾದಿಗಳನ್ನು 108 ಆಂಬುಲೆನ್ಸ್ ಮತ್ತು ರಸ್ತೆಯಲ್ಲಿ ತೆರಳುತ್ತಿದ್ದ ಆಟೋ ಮೂಲಕ ಸಮೀಪದ ಹೋಲಿ ಕ್ರಾಸ್ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಘಟನಾ ಸ್ಥಳಕ್ಕೆ ಇನ್ಸ್‌ಪೆಕ್ಟರ್ ಆನಂದಮೂರ್ತಿ ಭೇಟಿ ನೀಡಿ ಪರಿಶೀಲನೆ ನಡೆಸಿ, ಹೋಲಿ ಕ್ರಾಸ್ ಆಸ್ಪತ್ರೆಗೆ ಭೇಟಿ ನೀಡಿ ಮಾಹಿತಿ ಪಡೆದುಕೊಂಡಿದ್ದಾರೆ.

ಗಾಯಾಳುಗಳನ್ನು ರಕ್ಷಿಸಿ ಆಸ್ಪತ್ರೆಗೆ ಸೇರಿಸುವಲ್ಲಿ ಅಗ್ನಿಶಾಮಕ ಸಿಬ್ಬಂದಿಗಳಾದ ಮಹೇಶ್, ಜಯಪ್ರಕಾಶ್, ಅಶೋಕ್, ನಾಗಪ್ಪ, ಅನಿಲ್, ಲಿಂಗೇಶ್, ಹರ್ಷ ಕುಮಾರ್ ಹಾಗೂ ಪೊಲೀಸ್ ಇಲಾಖೆಯ ಮುಖ್ಯಪೇದೆಗಳಾದ ಗಣೇಶ್, ನಾಗೇಂದ್ರ, ಪ್ರಕಾಶ್ ಪ್ರಮುಖ ಪಾತ್ರ ವಹಿಸಿದ್ದಾರೆ.

ಈ ಸಂಬಂಧ ಹನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags:
error: Content is protected !!