ಹನೂರು: ಪಿ ಜಿ ಪಾಳ್ಯ ಪ್ರಾಥಮಿಕ ಆರೋಗ್ಯ ಕೇಂದ್ರದ ಅವ್ಯವಸ್ಥೆ ಖಂಡಿಸಿ ಕರುನಾಡ ವಿಜಯಸೇನೆ ಪದಾಧಿಕಾರಿಗಳು ಹಾಗೂ ಗ್ರಾಮ ಪಂಚಾಯತಿ ಸದಸ್ಯರು ಆಸ್ಪತ್ರೆ ಮುಂಭಾಗ ಪ್ರತಿಭಟನೆ ನಡೆಸಿದರು.
ಮಂಗಳವಾರ ರಾತ್ರಿ ಪಿ ಜಿ ಪಾಳ್ಯ ಗ್ರಾಮ ಸಮೀಪ ದ್ವಿಚಕ್ರ ವಾಹನಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಮೂವರು ತೀವ್ರ ಗಾಯಗೊಂಡಿದ್ದರು. ಗಾಯಗೊಂಡಿದ್ದ ಮೂವರನ್ನು ಪಿ ಜಿ ಪಾಳ್ಯ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆತರಲಾಗಿತ್ತು. ಈ ಸಂದರ್ಭದಲ್ಲಿ ವೈದ್ಯಾಧಿಕಾರಿಗಳು,ಸಿಬ್ಬಂದಿಗಳು ಯಾರೂ ಇರಲಿಲ್ಲ ಇದರಿಂದ ಆಕ್ರೋಶಗೊಂಡ ಗ್ರಾಮಸ್ಥರು ತಡರಾತ್ರಿ ಆಸ್ಪತ್ರೆ ಮುಂಭಾಗ ಪ್ರತಿಭಟನೆ ನಡೆಸಿದ್ದರು. ಇದಲ್ಲದೆ ತುರ್ತು ವಾಹನವಿದ್ದರೂ ಚಾಲಕನಿಲ್ಲದ ಪರಿಣಾಮ ಗಾಯಗೊಂಡಿದ್ದ ಮೂವರನ್ನು ಬೇರೆ ಆಸ್ಪತ್ರೆಗೆ ಕರೆದೊಯ್ಯಲು ಸಾಧ್ಯವಾಗದೆ ಖಾಸಗಿ ವಾಹನದಲ್ಲಿ ಕೊಳ್ಳೇಗಾಲ ಉಪವಿಭಾಗ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಕೊಡಿಸಲಾಗಿದೆ.
ಪರಿವರ್ತನಾ ಅರಣ್ಯ ಸಮಿತಿ ಅಧ್ಯಕ್ಷ ಎನ್ ಕೃಷ್ಣಮೂರ್ತಿ ಮಾತನಾಡಿ ಪಿ ಜಿ ಪಾಳ್ಯ ಗ್ರಾಮದಲ್ಲಿ ಸುಸಜ್ಜಿತ ಆಸ್ಪತ್ರೆ ಇದೆ ಆದರೆ ನುರಿತ ವೈದ್ಯಾಧಿಕಾರಿಗಳು ಹಾಗೂ ಸಿಬ್ಬಂದಿಗಳು ಇಲ್ಲದ ಪರಿಣಾಮ ರೋಗಿಗಳು ಪರಿತಪಿಸುವಂತಾಗಿದೆ .ಈ ಬಗ್ಗೆ ಸ್ಥಳೀಯ ಶಾಸಕರು, ಉಸ್ತುವಾರಿ ಸಚಿವರು ಜಿಲ್ಲಾಧಿಕಾರಿಗಳು ತಹಸೀಲ್ದಾರ್ ಅವರಿಗೆ ಹತ್ತಾರು ಬಾರಿ ಮನವಿ ಸಲ್ಲಿಸಲಾಗಿದ್ದರೂ ಸಹ ನುರಿತ ಸಿಬ್ಬಂದಿಗಳನ್ನು ನೇಮಕ ಮಾಡಿಲ್ಲ,ಉನ್ನತ ಗ್ರಾಮದ ಸಮೀಪ ಕೆಎಸ್ ಆರ್ ಟಿಸಿ ಬಸ್ ಪಲ್ಟಿ ಆದ ಸಂದರ್ಭದಲ್ಲೂ ಸಹ ಚಿಕಿತ್ಸೆ ದೊರಕದೆ ಮೂವರು ಮೃತಪಟ್ಟಿದ್ದಾರೆ ಇಷ್ಟಾದರೂ ಸಹ ಸರಕಾರ ಇನ್ನೂ ಎಚ್ಚೆತ್ತುಕೊಂಡಿಲ್ಲ 1ವಾರದೊಳಗೆ ನುರಿತ ವೈದ್ಯಾಧಿಕಾರಿಗಳು ಹಾಗೂ ಸಿಬ್ಬಂದಿಗಳನ್ನು ನೇಮಕ ಮಾಡದಿದ್ದರೆ ಉಗ್ರ ಪ್ರತಿಭಟನೆ ಹಮ್ಮಿಕೊಳ್ಳಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ಕರುನಾಡ ವಿಜಯ ಸೇನೆ ಅಧ್ಯಕ್ಷ ವಿಜಯಕುಮಾರ್ ಮಾತನಾಡಿ ರಾಜ್ಯದಲ್ಲಿ ಆರೋಗ್ಯ ಸಚಿವ ಸುಧಾಕರ್ ಅವರು ತಮ್ಮ ಖಾತೆಯನ್ನು ನಿಭಾಯಿಸುವಲ್ಲಿ ವಿಫಲರಾಗಿದ್ದಾರೆ. ಈಗಾಗಲೇ ಸರಿಯಾದ ಚಿಕಿತ್ಸೆ ಸಿಗದೆ ತಾಯಿ 2 ಹಸುಗೂಸುಗಳು ಮೃತಪಟ್ಟ ಘಟನೆ ಮಾಸುವ ಮುನ್ನವೇ ಪಿ ಜಿ ಪಾಳ್ಯ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ರೋಗಿಗಳಿಗೆ ಸರಿಯಾದ ಚಿಕಿತ್ಸೆ ಸಿಗದೆ ಇರೋದು ಅಮಾನವೀಯ ಸಂಗತಿ. ಈ ಕೂಡಲೇ ಸಂಬಂಧಪಟ್ಟ ಆರೋಗ್ಯ ಸಚಿವರು ಸೂಕ್ತ ಕ್ರಮ ಕೈಗೊಳ್ಳದಿದ್ದರೆ ಜಿಲ್ಲಾಧಿಕಾರಿ ಕಚೇರಿಗಳ ಮುಂಭಾಗ ಪ್ರತಿಭಟನೆ ಮಾಡುವುದಾಗಿ ತಿಳಿಸಿದರು.
ಈ ಸಂದರ್ಭದಲ್ಲಿ ಪಿ ಜಿ ಪಾಳ್ಯ ಗ್ರಾಮ ಪಂಚಾಯಿತಿ ಅಧ್ಯಕ್ಷ ನಂಜಪ್ಪ,ಗ್ರಾಮ ಪಂಚಾಯಿತಿ ಸದಸ್ಯ ನಿಂಗಯ್ಯ ಕರುನಾಡ ವಿಜಯಸೇನೆ ಸದಸ್ಯರುಗಳು ಗ್ರಾಮಸ್ಥರು ಹಾಜರಿದ್ದರು
ಮೈಸೂರು: ಜಗತ್ಪ್ರಸಿದ್ಧ ಮೈಸೂರು ಅರಮನೆ ಆವರಣದಲ್ಲಿ ಜಗಮಗಿಸುವ ದೀಪಾಲಂಕಾರ, ಫಲಪುಷ್ಪ ಪ್ರದರ್ಶನದ ಸೊಬಗಿನ ಮಧ್ಯೆ ಪಾರಂಪರಿಕ ಪೊಲೀಸ್ ಬ್ಯಾಂಡ್‌ನ ಸದ್ದಿನೊಂದಿಗೆ…
ಕೊಳ್ಳೇಗಾಲ: ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಸಂಭವಿಸಿ ಪಟ್ಟಣದ ಡಾ.ಬಿ.ಆರ್.ಅಂಬೇಡ್ಕರ್ ರಸ್ತೆಯಲ್ಲಿರುವ ಸಾಕಮ್ಮಾಸ್ ಕಾಫಿ ಪುಡಿ ಅಂಗಡಿ ಬುಧವಾರ ರಾತ್ರಿ ಸಂಪೂರ್ಣ…
ಮೈಸೂರು: ರಾಜ್ಯದ ವಿವಿಧೆಡೆ ಸೇವೆ ಸಲ್ಲಿಸುತ್ತಿದ್ದ 25 ಮಂದಿ ಐಪಿಎ ಅಧಿಕಾರಿಗಳನ್ನು ರಾಜ್ಯ ಸರ್ಕಾರ ವರ್ಗಾವಣೆಗೊಳಿಸಿ ಆದೇಶ ನೀಡಿದೆ. ಅವರಲ್ಲಿ…
ಕೊಡಗು: ಕರ್ನಾಟಕ ಸರ್ಕಾರದ ಆದೇಶದಂತೆ ಕೊಡಗಿನ ಪೊಲೀಸ್ ವರಿಷ್ಠಾಧಿಕಾರಿ ರಾಮರಾಜನ್ ಅವರನ್ನು ಬೆಳಗಾವಿ ಜಿಲ್ಲೆಗೆ ವರ್ಗಾವಣೆ ಮಾಡಲಾಗಿದೆ. ಖಾಲಿಯಾದ ಸ್ಥಳಕ್ಕೆ…
ಬೆಂಗಳೂರು: ಸಣ್ಣ ವಯಸ್ಸಿನಿಂದಲೇ ಬರವಣಿಗೆ ರೂಢಿಸಿಕೊಂಡು 9ನೇ ವಯಸ್ಸಿಗೆ 'ಟೇಲ್ಸ್ ಬೈ ಪರಿ' ಪುಸ್ತಕವನ್ನು ಬರೆದು ಹೆಸರು ಮಾಡಿರುವ ನಮ್ಮ…
ನವದೆಹಲಿ: ಕೋಗಿಲು ಲೇಔಟ್‌ನಲ್ಲಿ ಅಕ್ರಮ ನಿವಾಸಿಗಳಿಗೆ ಮನೆ ನೀಡುತ್ತಿದ್ದಾರೆ. ಇದು ರಾಜ್ಯ ಸರ್ಕಾರದ ದಡ್ಡತನದ ಪರಮಾವಧಿ ಎಂದು ಕೇಂದ್ರ ಸಚಿವ…