ಚಾಮರಾಜನಗರ

ಎಳ್ಳಮವಾಸ್ಯೆ ಪ್ರಯುಕ್ತ ಮಲೆ ಮಹದೇಶ್ವರ ಬೆಟ್ಟಕ್ಕೆ ಹರಿದು ಬಂದ ಜನಸಾಗರ

ಚಾಮರಾಜನಗರ: ಇಂದು ಈ ವರ್ಷದ ಕೊನೆಯ ಅಮಾವಾಸ್ಯೆಯ ಹಿನ್ನೆಲೆಯಲ್ಲಿ ಪವಾಡ ಪುರುಷ ನೆಲೆಸಿರುವ ಮಲೆ ಮಹದೇಶ್ವರ ಬೆಟ್ಟಕ್ಕೆ ಜನಸಾಗರವೇ ಹರಿದು ಬಂದಿದೆ.

ಇಂದು ಎಳ್ಳಮವಾಸ್ಯೆ ಪ್ರಯುಕ್ತ ತಡರಾತ್ರಿಯಿಂದಲೂ ಮಲೆ ಮಹದೇಶ್ವರ ಬೆಟ್ಟಕ್ಕೆ ಜನಸಾಗರವೇ ಹರಿದುಬಂದಿದ್ದು, ಇಂದು ಬೆಳಿಗ್ಗೆಯಿಂದಲೇ ಮಾದಪ್ಪನಿಗೆ ವಿಶೇಷ ಪೂಜಾ ಕೈಂಕರ್ಯ ನೆರವೇರಿದೆ.

ಅಮಾವಾಸ್ಯೆಯಂದು ಮಾದಪ್ಪನ ದರ್ಶನ ಪಡೆದರೆ ಇಷ್ಟಾರ್ಥ ಸಿದ್ದಿಯಾಗುತ್ತೆ ಎಂಬ ವಾಡಿಕೆಯಿದೆ. ಈ ಹಿನ್ನೆಲೆಯಲ್ಲಿ ಅಮಾವಾಸ್ಯೆ ಬಂದರೆ ಸಾಕು ಮಲೆ ಮಹದೇಶ್ವರ ಬೆಟ್ಟಕ್ಕೆ ಸಾಗರೋಪಾದಿಯಲ್ಲಿ ಜನರು ಭೇಟಿ ನೀಡುತ್ತಾರೆ.

ಕೊರೆಯುವ ಚಳಿಯಿದ್ದರೂ ರಾಜ್ಯ ಹಾಗೂ ಹೊರ ರಾಜ್ಯದಿಂದ ಸಾರ್ವಜನಿಕರು ಭೇಟಿ ನೀಡುತ್ತಿದ್ದು, ಅಮವಾಸ್ಯೆ ದಿನಗಳಂದು ಬೆಟ್ಟದಲ್ಲಿ ಕಾಲಿಡಲು ಜಾಗವಿಲ್ಲದ ಪರಿಸ್ಥಿತಿ ನಿರ್ಮಾಣವಾಗಿದೆ. ಚುಮು ಚುಮು ಚಳಿಯ ನಡುವೆಯೂ ಸಾರ್ವಜನಿಕರು ಚಿನ್ನದ ರಥ, ಬೆಳ್ಳಿರಥ ಸೇರಿದಂತೆ ಅನೇಕ ಸೇವೆಗಳನ್ನು ಸಲ್ಲಿಸಿ, ಭಕ್ತಿ ಭಾವ ಮೆರೆದಿದ್ದಾರೆ.

ಇನ್ನು ಬೆಟ್ಟಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಜನರು ಭೇಟಿ ನೀಡಿರುವ ಹಿನ್ನೆಲೆಯಲ್ಲಿ ಕೆಎಸ್‌ಆರ್‌ಟಿಸಿ ವತಿಯಿಂದ ಹೆಚ್ಚಿನ ಬಸ್‌ಗಳನ್ನು ನಿಯೋಜನೆ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ದೂರದ ಊರುಗಳಿಂದ ತೆರಳುವ ಸಾರ್ವಜನಿಕರಿಗೆ ತೀವ್ರ ಅನುಕೂಲವಾಗಿದೆ ಎನ್ನಲಾಗಿದೆ.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಮೈಸೂರು ದಸರಾ ಜಂಬೂಸವಾರಿಗೆ ಸಿಎಂ ಡಿಕೆಶಿ ಚಾಲನೆ

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಜಂಬೂಸವಾರಿ ಮೆರವಣಿಗೆಗೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಶುಭ ಮೀನ ಲಗ್ನದಲ್ಲಿ ಚಾಲನೆ ನೀಡಿದರು.…

12 hours ago

ಅಂಬಾರಿ ಹೊತ್ತ ಪ್ರಶಾಂತ ಜಂಬೂ ಸವಾರಿಗೆ ಸಜ್ಜು

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಜಂಬೂಸವಾರಿಯ ಪ್ರಮುಖ ಘಟ್ಟಕ್ಕೆ ಕ್ಷಣಗಣನೆ ಆರಂಭವಾಗಿದೆ. ಪ್ರಶಾಂತನಿಗೆ ಸಾಥ್ ನೀಡಲು ಕುಮ್ಕಿ ಆನೆಗಳಾಗಿ ರೂಪ…

12 hours ago

ಜಂಬೂಸವಾರಿ ಮೆರವಣಿಗೆಗೆ ಮೆರುಗು ನೀಡಿದ ಸ್ತಬ್ಧಚಿತ್ರಗಳು

ಮೈಸೂರು:  ವಿಶ್ವವಿಖ್ಯಾತ ಮೈಸೂರು ದಸರಾ ಜಂಬೂಸವಾರಿ ಮೆರವಣಿಗೆಗೆ ವೈವಿಧ್ಯಮಯ ಸ್ತಬ್ಧಚಿತ್ರಗಳು ಹಾಗೂ ಜಾನಪದ ಕಲಾತಂಡಗಳು ವಿಶೇಷ ಮೆರುಗು ನೀಡಿವೆ. ನಾಡಿನ…

12 hours ago

ಚಿನ್ನದ ಅಂಬಾರಿ ಹೊರಲು ಸಿದ್ಧನಾದ ಪ್ರಶಾಂತ

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ವಿಜಯದಶಮಿ ಜಂಬೂಸವಾರಿ ಮೆರವಣಿಗೆಯಲ್ಲಿ ಈಗಾಗಲೇ ಸ್ತಬ್ಧಚಿತ್ರಗಳು ಹಾಗೂ ವಿವಿಧ ಕಲಾತಂಡಗಳು ಸಾಗುತ್ತಿವೆ.…

13 hours ago

ನಂದಿಧ್ವಜಕ್ಕೆ ಪೂಜೆ ಸಲ್ಲಿಸಿದ ಸಿಎಂ ಡಿ.ಕೆ.ಶಿವಕುಮಾರ್‌

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಸಂಭ್ರಮದ ನಡುವೆ, ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ನಂದಿಧ್ವಜಕ್ಕೆ ವಿಶೇಷ ಪೂಜೆ ಸಲ್ಲಿಸಿದರು.…

14 hours ago

ಮೈಸೂರು ದಸರಾ ಮಹೋತ್ಸವ: ವಜ್ರಮುಷ್ಠಿ ಕಾಳಗ ರದ್ದು

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಐತಿಹಾಸಿಕ ಸಂಪ್ರದಾಯಗಳಲ್ಲಿ ಒಂದಾದ ವಜ್ರಮುಷ್ಠಿ ಕಾಳಗವನ್ನು ಈ ಬಾರಿ ರದ್ದುಪಡಿಸಲಾಗಿದೆ. ಅರಮನೆಯ ಸವಾರಿ…

17 hours ago