ಗುಂಡ್ಲುಪೇಟೆ: ಪಟ್ಟಣದಲ್ಲಿ ಶುಕ್ರವಾರ ಮಧ್ಯಾಹ್ನ ಸುರಿದ ಭಾರೀ ಮಳೆಗೆ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣ ನೀರು ತುಂಬಿಕೊಂಡು ಕೆರೆಯಂತಾಗಿತ್ತು.
ಬಸ್ ನಿಲ್ದಾಣದ ಒಳಗೆ ಪಾರ್ಕಿಂಗ್ ಸ್ಥಳದಲ್ಲಿ ಹಾಗೂ ಆವರಣದಲ್ಲಿ ನೀರು ನಿಂತ ಪರಿಣಾಮ ವಾಹನ ಸವಾರರು ವಾಹನ ತೆಗೆಯಲು ನೀರು ಹಾಯ್ದುಕೊಂಡು ಹೋಗುವ ಪರಿಸ್ಥಿತಿ ಎದುರಾದರೆ ಪ್ರಯಾಣಿಕರು ಮಂಡಿ ಉದ್ದ ತುಂಬಿದ್ದ ನೀರಿನಲ್ಲೇ ತಮ್ಮ ಗ್ರಾಮಕ್ಕೆ ತೆರಳಲು ಬಸ್ ನಿಲ್ದಾಣದ ಒಳಗೆ ಪ್ರವೇಶಿಸುತ್ತಿದ್ದುದು ಕಂಡುಬಂದಿತು.





