Mysore
25
broken clouds

Social Media

ಭಾನುವಾರ, 25 ಜನವರಿ 2026
Light
Dark

ಸುವರ್ಣಾವತಿ ಜಲಾಶಯ ಬಹುತೇಕ ಭರ್ತಿ: ರೈತರ ಮೊಗದಲ್ಲಿ ಮಂದಹಾಸ

ಚಾಮರಾಜನಗರ: ಗಡಿ ಜಿಲ್ಲೆ ಚಾಮರಾಜನಗರದಲ್ಲಿ ಕಳೆದ ಕೆಲ ದಿನಗಳಿಂದ ಧಾರಾಕಾರ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಸುವರ್ಣಾವತಿ ಜಲಾಶಯ ಭರ್ತಿಯಾಗಿದೆ.

55 ಅಡಿ ಸಾಮರ್ಥ್ಯದ ಜಲಾಶಯದಲ್ಲಿಂದು 54 ಅಡಿ ನೀರು ಸಂಗ್ರಹವಾಗಿದ್ದು, ಜನತೆಯ ಮೊಗದಲ್ಲಿ ಮಂದಹಾಸ ಮನೆಮಾಡಿದೆ.

ಸದ್ಯ ಜಲಾಶಯದ ಒಳಹರಿವು 250 ಕ್ಯೂಸೆಕ್ಸ್‌ಗಳಿದ್ದು, ನದಿಗೆ 155 ಕ್ಯೂಸೆಕ್ಸ್‌ ನೀರನ್ನು ಬಿಡುಗಡೆ ಮಾಡಲಾಗುತ್ತಿದೆ.

ಒಳಹರಿವು ಹೆಚ್ಚಾದಂತೆ ಹೊರಹರಿವನ್ನು ಯಾವುದೇ ಕ್ಷಣದಲ್ಲಾದರೂ ಹೆಚ್ಚಳ ಮಾಡುವ ಸಾಧ್ಯತೆಯಿದ್ದು, ನದಿ ಪಾತ್ರದ ಜನರು ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಲಾಗಿದೆ.

ಇನ್ನು ನದಿಯಿಂದ ಹತ್ತಾರು ಕೆರೆಗಳಿಗೆ ನೀರು ಹರಿಯಲಿದ್ದು, ಕೆರೆಕಟ್ಟೆಗಳು ಸಂಪೂರ್ಣ ಭರ್ತಿಯಾಗುವುದರಲ್ಲಿ ಯಾವುದೇ ಅನುಮಾನವಿಲ್ಲ ಎನ್ನುವಂತಾಗಿದೆ.

Tags:
error: Content is protected !!