ಗುಂಡ್ಲುಪೇಟೆ: ಗಡಿ ಜಿಲ್ಲೆ ಚಾಮರಾಜನಗರದಲ್ಲಿ ಭಾರೀ ಮಳೆ ಸುರಿಯುತ್ತಿದ್ದು, ಬೆಳೆ ನಾಶದಿಂದ ಅನ್ನದಾತರು ಕಂಗಾಲಾಗಿದ್ದಾರೆ.
ಭಾರೀ ಮಳೆಯಿಂದ ಗುಂಡ್ಲುಪೇಟೆ ತಾಲ್ಲೂಕಿನ ಈರುಳ್ಳಿ ಬೆಳೆಗಾರರು ಈಗ ಸಂಕಷ್ಟಕ್ಕೆ ಸಿಲುಕಿದ್ದಾರೆ. ಗುಂಡ್ಲುಪೇಟೆ ತಾಲ್ಲೂಕಿನಲ್ಲಿ ಕಳೆದ ಒಂದು ವಾರದಿಂದಲೂ ಮಳೆ ಎಡಬಿಡದೇ ಸುರಿಯುತ್ತಿದ್ದು, ಸಣ್ಣ ಈರುಳ್ಳಿ ಕೊಯ್ಲಿಗೆ ತೊಂದರೆಯಾಗಿದೆ.
ಸಣ್ಣ ಈರುಳ್ಳಿಯಿಂದ ಲಾಭ ಬರುತ್ತದೆ ಎಂದು ಅಂದಾಜಿಸಿ ರೈತರು ಹಲವು ಹೆಕ್ಟೇರ್‌ಗಳಲ್ಲಿ ಸಣ್ಣ ಈರುಳ್ಳಿ ಬೆಳೆದಿದ್ದರು. ಫಸಲೇನೋ ಉತ್ತಮವಾಗಿ ಬಂತು. ಆದರೆ ಕೈಗೆ ಬಂದ ತುತ್ತು ಈಗ ಬಾಯಿಗೆ ಬರದ ಹಾಗೇ ಆಗಿದೆ. ಈಗಾಗಲೇ ಕೊಯ್ಲು ಹಂತಕ್ಕೆ ಬಂದಿರುವ ಸಣ್ಣ ಈರುಳ್ಳಿಗೆ ಮಳೆಯೇ ಅಡ್ಡಿಯಾಗಿದೆ.
ಕಳೆದ ಎರಡು ತಿಂಗಳ ಹಿಂದೆ ಸಣ್ಣ ಈರುಳ್ಳಿಗೆ ಉತ್ತಮ ಬೆಲೆಯಿತ್ತು. ಆದರೆ ಈಗ ಮಳೆ ಕಾರಣದಿಂದ ಈರುಳ್ಳಿ ಕೊಳೆಯುತ್ತಿದ್ದು, ಬೆಲೆಯೂ ಕೂಡ ಕಡಿಮೆಯಾಗಿದೆ. ಇದರಿಂದ ಅನ್ನದಾತರು ತೀವ್ರ ಬೇಸರದಲ್ಲಿದ್ದು, ಮಳೆಗೆ ಹಿಡಿಶಾಪ ಹಾಕುತ್ತಿದ್ದಾರೆ.
ಇನ್ನೂ ಮಳೆ ಕೊಂಚ ಬಿಡುವು ಕೊಟ್ಟರೆ ಈರುಳ್ಳಿ ಕೊಯ್ಲು ಮಾಡಬಹುದು. ಆದ್ರೆ ಕಳೆದ ಒಂದು ವಾರದಿಂದ ಮಳೆ ಬಿಡುವು ಕೊಡದೇ ಸುರಿಯುತ್ತಿದೆ. ಹೀಗಾಗಿ ಈರುಳ್ಳಿ ಬೆಳೆದ ರೈತರು ಕೊಯ್ಲು ಮಾಡದೇ ಸಂಕಷ್ಟ ಅನುಭವಿಸುತ್ತಿದ್ದಾರೆ.
ಈ ಹಿನ್ನೆಲೆಯಲ್ಲಿ ರೈತರು ಅಳಲು ತೋಡಿಕೊಂಡಿದ್ದು, ಈ ಬಾರಿ ನಮಗೆ ಮಳೆಯಿಂದ ಬೆಳೆ ನಾಶವಾಗಿದೆ. ನಾವು ಈರುಳ್ಳಿ ಬೆಳೆಗೆ ಖರ್ಚು ಮಾಡಿದಷ್ಟೂ ಬೆಲೆಯೂ ಸಿಗಲ್ಲ. ನಾವು ಸಾಲಸೋಲ ಮಾಡಿ ಈರುಳ್ಳಿ ಬೆಳೆದಿದ್ದೆವು. ಆದರೆ ಈ ಮಳೆಯಿಂದ ನಮಗೆ ಭಾರೀ ನಷ್ಟವಾಗಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.
ಮೈಸೂರು: ಮೈಸೂರಿನ ಸಮತಾ ಅಧ್ಯಯನ ಕೇಂದ್ರ(ರಿ)ವು ಸಂಸ್ಥಾಪಕ ಅಧ್ಯಕ್ಷೆ, ಖ್ಯಾತ ಸ್ತ್ರೀವಾದಿ ವಿಮರ್ಶಕಿ ಹಾಗೂ ಲೇಖಕಿ ಡಾ.ವಿಜಯಾ ದಬ್ಬೆ ಅವರ ಹೆಸರಿನಲ್ಲಿ 2022…
ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನ ಬೊಮ್ಮಲಾಪುರ ಗ್ರಾಮದ ದೊರೆ ಎಂಬುವವರ ವಾಸದ ಮನೆಗೆ ನುಗ್ಗಿದ ಕಡವೆಯನ್ನು…
ಮಂಡ್ಯ: ಸಾಮಾಜಿಕವಾಗಿ, ಆರ್ಥಿಕವಾಗಿ, ಶೈಕ್ಷಣಿಕವಾಗಿ ಸಮಾಜದ ಮುಖ್ಯ ವಾಹಿನಿಗೆ ಬರಬೇಕು. ಸಮುದಾಯಗಳು ಮುಖ್ಯ ವಾಹಿನಿಗೆ ಬರಲು ಶಿಕ್ಷಣದಿಂದ ಮಾತ್ರ ಸಾಧ್ಯ…
ಮಂಡ್ಯ: ತಾಲ್ಲೂಕಿನ ಹೊಸ ಬೂದನೂರಿನಲ್ಲಿ ನೆಲೆಯಾಗಿರುವ ಕಾಶಿ ವಿಶ್ವನಾಥ ಹಾಗೂ ಅನಂತಪದ್ಮನಾಭಸ್ವಾಮಿ ಉತ್ಸವಕ್ಕೆ ದಿನಗಣನೆ ಆರಂಭವಾಗಿದೆ. ಈ ಬಾರಿ ಉತ್ಸವಕ್ಕೆ…
ಬೆಂಗಳೂರು: ಈ ವರ್ಷ ಚಳಿ ಪ್ರಮಾಣ ಹೆಚ್ಚಾಗಿದ್ದರಿಂದ ಬಿಸಿಲ ಝಳವೂ ಹೆಚ್ಚಾಗಿರಲಿದ್ದು, ಮುಂದಿನ ಬೇಸಿಗೆಯಲ್ಲಿ ವಿಪರೀತ ಬಿಸಿಲು ಹವಾಮಾನ ಇರಲಿದೆ…
ಬೆಂಗಳೂರು: ರಾಜ್ಯದಲ್ಲಿರುವ ಅಷ್ಟೂ ಗ್ರಾಮ ಪಂಚಾಯಿತಿಗಳಿಗೆ ಮಹಾತ್ಮಗಾಂಧಿ ಹೆಸರು ಇಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ. ಫ್ರೀಡಂಪಾರ್ಕ್ ನಲ್ಲಿ…