ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು
ಹನೂರು: ತಾಲ್ಲೂಕು ವ್ಯಾಪ್ತಿಯಲ್ಲಿ ಕಳೆದ ಎರಡು ದಿನಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿರುವ ಹಿನ್ನೆಲೆ ಹುಬ್ಬೆ-ಹುಣಸೆ ಜಲಾಶಯ ಭರ್ತಿಯಾಗಿ ಕೋಡಿ ಬಿದ್ದ ಪರಿಣಾಮ ತಟ್ಟೆ ಹಳ್ಳ ಮೈದುಂಬಿ ಹರಿದು, ಹಳ್ಳದ ಸಮೀಪದಲ್ಲಿದ್ದ ಗಣಪತಿ ದೇವಾಲಯ ಕೊಚ್ಚಿ ಹೋಗಿ ನೀರುಪಾಲಾಗಿದೆ.
ಸೋಮವಾರ ತಡರಾತ್ರಿ ಸುರಿದ ಮಳೆಗೆ ತಟ್ಟೆ ಹಳ್ಳ ತುಂಬಿ ಹರಿದು ಪಟ್ಟಣ ವ್ಯಾಪ್ತಿಯ ದೇವಾಂಗಪೇಟೆ ಮತ್ತು ಆಂಜನೇಯ ದೇವಸ್ಥಾನ ಬೀದಿಯ ಮನೆಗಳಿಗೆ ನೀರು ನುಗ್ಗಿ ಆಹಾರ ಪದಾರ್ಥಗಳು ಹಾಗೂ ವಿದ್ಯುತ್ ಉಪಕರಣಗಳು ನೀರುಪಾಲಾಗಿದ್ದವು. ಮಂಗಳವಾರ ತಡರಾತ್ರಿಯೂ ಉತ್ತಮ ಮಳೆಯಾಗಿದ್ದರಿಂದ ತಟ್ಟೆ ಹಳ್ಳಕ್ಕೆ ಹೊಂದಿಕೊಂಡಂತೆ ವಾಸವಿರುವ ಮನೆಯವರು ಆತಂಕದಲ್ಲಿ ರಾತ್ರಿ ಕಳೆದಿದ್ದಾರೆ. ಮಂಗಳವಾರವೂ ಹಲವು ಮನೆಗಳಿಗೆ ನೀರು ನುಗ್ಗಿದೆ. ಆದರೆ ಸೋಮವಾರವೇ ಹಳ್ಳದಲ್ಲಿದ್ದ ಗಿಡಗಂಟಿಗಳನ್ನು ತೆರವು ಮಾಡಿದ್ದರಿಂದ ಮನೆಗಳಿಗೆ ಹೆಚ್ಚು ಹಾನಿಯಾಗಿಲ್ಲ ಎಂದು ಸ್ಥಳೀಯರು ತಿಳಿಸಿದ್ದಾರೆ.
ಮೂರು ಗಂಟೆ ಸಂಚಾರ ಅಸ್ತವ್ಯಸ್ತ: ಮಂಗಳವಾರ ತಡರಾತ್ರಿ ಸುರಿದ ಭಾರಿ ಮಳೆಗೆ ಲೊಕ್ಕನಹಳ್ಳಿ ಗ್ರಾಮದಿಂದ ಒಡೆಯರಪಾಳ್ಯ ಸೇರಿದಂತೆ ಅಂತರರಾಜ್ಯ ತಮಿಳುನಾಡಿಗೆ ಸಂಪರ್ಕ ಕಲ್ಪಿಸುವ ಮಾರ್ಗ ಮಧ್ಯದ ಸೇತುವೆ ಕೊಚ್ಚಿ ಹೋಗಿದ್ದರಿಂದ ಮೂರು ಗಂಟೆಗಳಿಗೂ ಹೆಚ್ಚು ಕಾಲ ರಸ್ತೆಯ ಎರಡೂ ಬದಿಗಳಲ್ಲಿ ವಾಹನಗಳು ನಿಂತು ಸಂಚಾರ ಅಸ್ತವ್ಯಸ್ತವಾಗಿತ್ತು. ನಂತರ ನೀರು ಕಡಿಮೆಯಾದ ಬಳಿಕ ಸ್ಥಳೀಯರೇ ಕುಸಿದ ಸೇತುವೆ ಸ್ಥಳಕ್ಕೆ ಮಣ್ಣು ಹಾಕಿ ಸಮತಟ್ಟು ಮಾಡಿ ವಾಹನ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ.
ಕೊಚ್ಚಿ ಹೋದ ಮುಖ್ಯ ರಸ್ತೆಯ ಸೇತುವೆ: ಕೌದಳ್ಳಿ ಗ್ರಾಮದ ಸಮೀಪದ ಮುಖ್ಯ ರಸ್ತೆಯ ಸೇತುವೆಯು ಮಳೆಯ ಆರ್ಭಟಕ್ಕೆ ಕೊಚ್ಚಿ ಹೋಗಿದೆ. ಪರಿಣಾಮ ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುವ ಭಕ್ತರು ಪರದಾಡುವಂತಾಗಿದ್ದು, ವಾಹನ ಸಂಚಾರಕ್ಕೆ ಅಡಚಣೆಯಾಗಿದೆ. ಬುಧವಾರ ಮುಂಜಾನೆ ಎಲ್ಲ ವಾಹನಗಳು ಕೌದಳ್ಳಿ-ರಾಮಾಪುರ-ಅಜ್ಜೀಪುರ ಮಾರ್ಗವಾಗಿ ಕೊಳ್ಳೇಗಾಲ ಪಟ್ಟಣಕ್ಕೆ ಸಂಚಾರ ಮಾಡಿದವು.
ಮಂಗಳವಾರ ರಾತ್ರಿ ಸುರಿದ ಭಾರಿ ಮಳೆಗೆ ಸುಮಾರು 40ರಿಂದ 45 ವರ್ಷಗಳಷ್ಟು ಹಳೆಯದಾದ ಈ ಸೇತುವೆ ಕೊಚ್ಚಿ ಹೋಗಿದ್ದು, ವಾಹನ ಸವಾರರು ಹಾಗೂ ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುವ ಭಕ್ತರು ಪರದಾಡುವಂತಾಗಿದೆ. ಸೇತುವೆಯ ಮೇಲೆ ಅತಿ ಹೆಚ್ಚು ನೀರು ಹರಿಯುತ್ತಿರುವುದು ಗಮನಕ್ಕೆ ಬಾರದೆ ಲಾರಿ ಚಾಲಕನೊಬ್ಬ ಕೌದಳ್ಳಿ ಗ್ರಾಮದತ್ತ ತೆರಳಿದ್ದಾನೆ. ಆದರೆ ಅತಿ ಹೆಚ್ಚು ನೀರು ಹರಿಯುತ್ತಿದ್ದರಿಂದ ಲಾರಿ ಹಳ್ಳಕ್ಕೆ ಜಾರಿದೆ. ಅದೃಷ್ಟವಶಾತ್ ಚಾಲಕ ಪಾರಾಗಿದ್ದಾನೆ. ಬುಧವಾರ ಮತ್ತೆ ಮಳೆಯಾದರೆ ಸೇತುವೆ ಸಂಪೂರ್ಣ ಕುಸಿದು ಹೋಗುವ ಆತಂಕವಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಸಂಬಂಧಪಟ್ಟ ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ಸೂಕ್ತ ಕ್ರಮ ವಹಿಸಿ ಸುಗಮ ಸಂಚಾರಕ್ಕೆ ಅನುಕೂಲ ಕಲ್ಪಿಸಬೇಕು ಎಂದು ವಾಹನ ಸವಾರರು ಮನವಿ ಮಾಡಿದ್ದಾರೆ.
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಳೆದ ಎರಡು ದಿನಗಳಿಂದ ಹನೂರು ತಾಲೂಕಿನಾದ್ಯಂತ ನಿರಂತರವಾಗಿ ಸುರಿಯುತ್ತಿರುವ ಮಳೆಗೆ…
ಜನರ ಹಿತ ಕಾಯಲಿ! ನಕಲಿ ವೈದ್ಯರು, ಕಲಬೆರಿಕೆ ಔಷಧದ ಹಾವಳಿಯಿಂದ ಜನ ಬೇಸ್ತುಬಿದ್ದಿರುವಾಗ ನೈಜ ದರಕ್ಕಿಂತ ಅತ್ಯಧಿಕ ದರಕ್ಕೆ ಔಷಧಿ ಮಾರಾಟ…
ಆಹಾರದಲ್ಲಿ ಬಳಸುವ ಉಪ್ಪು, ಸಕ್ಕರೆ ಬಳಕೆ ಪ್ರಮಾಣಕ್ಕೆ ಕಡಿವಾಣ ಹಾಕಲು ಅರೋಗ್ಯ ಇಲಾಖೆ ಚಿಂತನೆ ನಡೆಸಿದೆ ಎಂದು ವರದಿಯಾಗಿದೆ. ಹಾಗೆಯೇ…
ಚಾಮರಾಜನಗರ ಜಿಯ ಕೊಳ್ಳೇಗಾಲ ಮತ್ತು ಹನೂರು ವಿಧಾನಸಭಾ ಕ್ಷೇತ್ರಗಳಲ್ಲಿ ಸುಮಾರು ರೂ.೫೦೦ ಕೋಟಿಗೂ ಅಧಿಕ ಮೊತ್ತದ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ಮಕ್ಕಳು ದೊಡ್ಡ ಹುದ್ದೆಗಳಿಗೆ ಹೋದರೂ ತನ್ನ ಕಾಯಕ ಮುಂದುವರಿಸಿರುವ ‘ಮಹಾತಾಯಿ’ ತೆಲಂಗಾಣದ ಸಂಗಾರೆಡ್ಡಿಯ ರಾಕೇಶ್…
ಪುನೀತ್ ಮಡಿಕೇರಿ ಮಡಿಕೇರಿ ದಸರಾ ಸಮೀಪಿಸುತ್ತಿದ್ದರೂ ಗುಂಡಿಗಳಿಗೆ ಸಿಗದ ಮುಕ್ತಿ ಮಡಿಕೇರಿ ದಸರಾ ಜನೋತ್ಸವಕ್ಕೆ ದಿನಗಣನೆ ಆರಂಭವಾಗಿದೆ. ಆದರೆ, ದಸರಾ…