Mysore
26
broken clouds

Social Media

ಬುಧವಾರ, 15 ಜನವರಿ 2025
Light
Dark

ಶವ ಸಂಸ್ಕಾರಕ್ಕೆ ತೆರಳಿದ್ದ ವೇಳೆ ಹೆಜ್ಜೇನು ದಾಳಿ : ಓರ್ವ ಸಾವು, 10 ಜನರಿಗೆ ಗಾಯ

ಚಾಮರಾಜನಗರ : ಶವ ಸಂಸ್ಕಾರಕ್ಕೆ ತೆರಳಿದ್ದ ವೇಳೆ ಹೆಜ್ಜೇನು ದಾಳಿ ಮಾಡಿದ ಪರಿಣಾಮ ಓರ್ವನ ಸಾವನ್ನಪ್ಪಿದ್ದು, 10 ಮಂದಿಗೆ ಸಣ್ಣಪುಟ್ಟ ಗಾಯಗಳಾಗಿರುವಂತಹ ಘಟನೆ ಜಿಲ್ಲೆಯ ಹನೂರು ತಾಲೂಕಿನ ಕೊಂಗರಹಳ್ಳಿಯಲ್ಲಿ ನಡೆದಿದೆ.

ಚಿನ್ನಪ್ಪ (60) ಹೆಜ್ಜೇನು ದಾಳಿಗೆ ಬಲಿಯಾದ ವ್ಯಕ್ತಿ. ಗಾಯಗೊಂಡ 10 ಮಂದಿ ಕಾಮಗೆರೆ ಹೋಲಿಕ್ರಾಸ್ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗಿದೆ. ಮೃತ ಮಹಿಳೆಯ ಶವಸಂಸ್ಕಾರಕ್ಕೆ ನೆಂಟರು ಹೋಗಿದ್ದು, ಪಾರ್ಥೀವ ಶರೀರಕ್ಕೆ ಪೂಜೆ ಸಲ್ಲಿಸಿ ಅಗ್ನಿ ಸ್ಪರ್ಶ ಮಾಡುತ್ತಿದ್ದಂತೆ ಮರದ ಮೇಲಿದ್ದ ಹೆಜ್ಜೇನು ದಾಳಿ ಮಾಡಿವೆ. ಗಾಯಗೊಂಡವರನ್ನು ಆಸ್ಪತ್ರೆಗೆ ಸಾಗಿಸುತ್ತಿದ್ದಾಗ ಮಾರ್ಗ ಮಧ್ಯೆ ಚಿನ್ನಪ್ಪ ಮೃತಪಟ್ಟಿದ್ದಾರೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ