Mysore
20
overcast clouds
Light
Dark

ಅತ್ಯಾಧುನಿಕ ಶೌಚಾಲಯ ಸ್ನಾನಗೃಹ ನಿರ್ಮಾಣ: ಡಿಸಿ ಸ್ಥಳ ಪರಿಶೀಲನೆ

ಚಾಮರಾಜನಗರ: ಸುಮಾರು ೩೧ ಲಕ್ಷ ರೂ. ವೆಚ್ಚದಲ್ಲಿ ಅತ್ಯಾಧುನಿಕ ಸೌಲಭ್ಯಗಳನ್ನು ಒಳಗೊಂಡಿರುವ ಸಾರ್ವಜನಿಕ ಶೌಚಾಲಯ ಮತ್ತು ಸ್ನಾನ ಗೃಹ ನಿರ್ಮಾಣ ಮಾಡಲಾಗುತ್ತಿದ್ದು ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಇಂದು ಸ್ಥಳ ಪರಿಶೀಲನೆ ನಡೆಸಿದರು.

ನಗರದಲ್ಲಿ ಅತ್ಯಾಧುನಿಕ ಸೌಲಭ್ಯ ವ್ಯವಸ್ಥೆಗಳನ್ನು ಒಳಗೊಂಡ ಶೌಚಾಲಯ, ಸ್ನಾನ ಗೃಹಗಳನ್ನು ನಿರ್ಮಿಸಲು ಉದ್ದೇಶಿಸಿದ್ದು, ಈ ಸಂಬಂಧ ಸೂಕ್ತ ಸ್ಥಳವನ್ನು ಜಿಲ್ಲಾಧಿಕಾರಿಯವರು ಪರಿಶೀಲಿಸಿದರು.
ನಗರದ ಕೆ.ಎಸ್.ಆರ್.ಟಿಸಿ ಬಸ್ ನಿಲ್ದಾಣ, ಪೇಟೆ ಪ್ರೈಮರಿ ಶಾಲೆ ಬಳಿ, ಲಾರಿ ನಿಲ್ದಾಣದ ಬಳಿ ಭೇಟಿ ನೀಡಿ ಜಿಲ್ಲಾಧಿಕಾರಿ ಸ್ಥಳ ಪರಿಶೀಲಿಸಿದರು.

ಬಸ್ ನಿಲ್ದಾಣಕ್ಕೆ ಭೇಟಿ ನೀಡಿದ ವೇಳೆ ಅಲ್ಲಿನ ಮೂಲ ಸೌಕರ್ಯವನ್ನು ವೀಕ್ಷಿಸಿದರು. ಶೌಚಾಲಯ ನಿರ್ವಹಣೆ, ಸ್ವಚ್ಚತೆ ಬಗ್ಗೆ ಪರಿಶೀಲನೆ ಮಾಡಿದರು. ಕುಡಿಯುವ ನೀರು ಇತರೆ ಸೌಲಭ್ಯಗಳನ್ನು ಪರಿಶೀಲಿಸಿದರು. ಪ್ರಯಾಣಿಕರೊಂದಿಗೆ ಮಾತನಾಡಿ ಸೌಲಭ್ಯಗಳು ಸಮರ್ಪಕವಾಗಿ ಸಿಗುತ್ತಿದೆಯೇ, ಇನ್ನೂ ಯಾವ ಸೌಕರ್ಯಗಳು ಬೇಕಿದೆ ಎಂಬುದರ ಬಗ್ಗೆ ಚರ್ಚಿಸಿದರು.
ಸಾರ್ವಜನಿಕ ಶೌಚಾಲಯಗಳನ್ನು ಸ್ವಚ್ಚವಾಗಿಟ್ಟುಕೊಳ್ಳಬೇಕು. ಪ್ರಯಾಣಿಕರು, ಸಾರ್ವಜನಿಕರ ಬಳಕೆಗೆ ಅನುಕೂಲವಾಗುವಂತೆ ನಿರ್ವಹಣೆ ಮಾಡಬೇಕು ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಸೂಚಿಸಿದರು.
ನಗರಸಭೆ ಆಯುಕ್ತರಾದ ಎಸ್.ವಿ. ರಾಮದಾಸ್, ಆರೋಗ್ಯ ನಿರೀಕ್ಷಕರಾದ ಮಂಜು ಸೇರಿದಂತೆ ಇತರರು ಇದ್ದರು.

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ