ಚಾಮರಾಜನಗರ

ಹಿಮವದ್ ಗೋಪಾಲಸ್ವಾಮಿ ಬೆಟ್ಟ ; ವಿಜೃಂಭಣೆಯ ರಥೋತ್ಸವ

ಗುಂಡ್ಲುಪೇಟೆ: ತಾಲ್ಲೂಕಿನ ಪ್ರಸಿದ್ಧ ಹಿಮವದ್ ಗೋಪಾಲಸ್ವಾಮಿ ಬೆಟ್ಟದಲ್ಲಿ ಮಂಗಳವಾರ ಬ್ರಹ್ಮ ರಥೋತ್ಸವ ಅದ್ಧೂರಿಯಾಗಿ ನೆರವೇರಿತು.

ಗೋಪಾಲಸ್ವಾಮಿ ಉತ್ಸವ ಮೂರ್ತಿಗೆ ತಹಸಿಲ್ದಾರ್ ರಮೇಶ್ ಬಾಬು ಪೂಜೆ ಸಲ್ಲಿಸಿ ರಥೋತ್ಸವಕ್ಕೆ ಚಾಲನೆ ನೀಡಿದರು.

ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಆಗಮಿಸಿ ಹಂಬಿನಿಂದ ರಥವನ್ನು ಎಳೆದರು. ನಂತರ ಶ್ರೀಕೃಷ್ಣನ ದರ್ಶನ ಪಡೆದರು.

ಮುಂಜಾನೆಯಿಂದಲೇ ಗೋಪಾಲನಿಗೆ ಅಭಿಷೇಕ, ವಿಶೇಷ ಪೂಜೆ ಕೈಂಕರ್ಯಗಳು ನಡೆದವು. ಸಾವಿರಾರು ಸಂಖ್ಯೆಯಲ್ಲಿ ಆಗಮಿಸಿದ್ದ ಭಕ್ತರನ್ನು ಕರೆದೊಯ್ಯಲು ಕೆಎಸ್‌ಆರ್‌ಟಿಸಿಯಿಂದ ಹೆಚ್ಚಿನ ಬಸ್ ವ್ಯವಸ್ಥೆ ಮಾಡಲಾಗಿತ್ತು. ಭಕ್ತರು ಸರತಿ ಸಾಲಿನಲ್ಲಿ ನಿಂತು ದೇವರ ದರ್ಶನ ಪಡೆದರು.

ಶಾಸಕ ಎಚ್.ಎಂ.ಗಣೇಶ್ ಪ್ರಸಾದ್ ಭೇಟಿ ನೀಡಿ ಹಿಮವದ್ ಗೋಪಾಲಸ್ವಾಮಿ ದರ್ಶನ ಪಡೆದರು. ಪ್ರಧಾನ ಅರ್ಚಕ ಗೋಪಿ ಭಟ್ಟರು ಪೂಜಾ ಕೈಂಕರ್ಯಗಳನ್ನು ನೆರವೇರಿಸಿದರು. ವಿವಿಧೆಡೆಯಿಂದ ಆಗಮಿಸಿದ್ದ ಸಾವಿರಾರು ಮಂದಿ ರಥೋತ್ಸವದಲ್ಲಿ ಭಾಗಿಯಾಗಿದ್ದರು.

ಬೆಟ್ಟದ ತಪ್ಪಲಿನಲ್ಲಿ 20 ಕೆಎಸ್‌ಆರ್‌ಟಿಸಿ ಬಸ್ ವ್ಯವಸ್ಥೆ ಮಾಡಲಾಗಿತ್ತು. ಬೆಳಿಗ್ಗೆಯಿಂದ ಸಂಜೆಯವರೆಗೆ ಸಾವಿರಾರು ಭಕ್ತರು ಬಸ್ಸಿನಲ್ಲಿ ಬೆಟ್ಟಕ್ಕೆ ಪ್ರಯಾಣಿಸಿ ದೇವರ ದರ್ಶನ ಪಡೆದರು.

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಸಮವಸ್ತ್ರದ ಆತ್ಮಸಾಕ್ಷಿ ಮತ್ತು ಮೂರು ಪ್ರಜ್ಞೆಗಳು

ಎಸ್.ಎಲ್.ಚನ್ನಬಸವಣ್ಣ , ಉಪನಿರ್ದೇಶಕರು ಕರ್ನಾಟಕ ಪೊಲೀಸ್‌ ಅಕಾಡೆಮಿ ಮೈಸೂರು  ಸದಾ ಜಾಗೃತವಾಗಿರುವ ಸಮಯಪಾಲನೆಯ ವಿವೇಚನೆ ಕರ್ನಾಟಕ ಪೊಲೀಸ್ ಅಕಾಡೆಮಿ, ಮೈಸೂರು…

8 seconds ago

ದಸರಾ ಕಾರ್ಯಕ್ರಮಕ್ಕೆ ಸವಾಲಾದ ಬಸ್ ಸೇವೆ

ಕೆ.ಬಿ.ರಮೇಶನಾಯಕ ಉತ್ತನಹಳ್ಳಿ ಗ್ರಾಮದ ಬಳಿ ಯುವ ದಸರಾ, ಸಾತಗಳ್ಳಿ ವಿಟಿಯು ಸಮೀಪ ಕಂಬಳ ಕ್ರೀಡೆ ಆಯೋಜನೆ; ವೀಕ್ಷಕರ ಬೇಡಿಕೆಗೆ ತಕ್ಕಂತೆ…

8 mins ago

ನೇಪಾಳದಲ್ಲಿ ಮತ್ತೆ ಪ್ರವಾಹ, ಭೂಕುಸಿತ

ಕಠ್ಮಂಡು: ನೇಪಾಳದಲ್ಲಿ ಮತ್ತೆ ಪ್ರವಾಹ, ಭೂಕುಸಿತದ ಆರ್ಭಟ ಮುಂದುವರಿದಿದ್ದು, ಕೇವಲ 8 ಸೆಕೆಂಡ್‌ಗಳಲ್ಲಿ ಪರ್ವತವೇ ಕುಸಿದು ಬಿದ್ದಿದೆ! ವಿವಿಧೆಡೆ ಸಂಭವಿಸಿದ…

16 hours ago

ಕಾಡುಹಂದಿ ದಾಳಿ: ರೈತನಿಗೆ ಗಂಭೀರ ಗಾಯ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಪಳನಿಮೇಡ್ ಗ್ರಾಮದಲ್ಲಿ ರೈತನ ಮೇಲೆ ಕಾಡುಹಂದಿ ದಾಳಿ ಮಾಡಿದ್ದು,…

17 hours ago

ಶೀಘ್ರದಲ್ಲೇ ಅಕ್ರಮ ಸೈಟ್‌ಗಳ ಪಟ್ಟಿ ಬಿಡುಗಡೆ: ಸಚಿವ ಯತೀಂದ್ರ ಸಿದ್ದರಾಮಯ್ಯ

ಮೈಸೂರು: ಮುಡಾ 50:50 ಸೈಟ್‌ ವಿಚಾರದಲ್ಲಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಮಹತ್ವದ ಮಾಹಿತಿ ನೀಡಿದ್ದಾರೆ. ಶೀಘ್ರದಲ್ಲೇ ಅಕ್ರಮ ಸೈಟ್‌ಗಳ…

18 hours ago